5 ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ತಪ್ಪದೇ ಲಸಿಕೆ ಹಾಕಿಸಬೇಕು: ಡಾ. ತಾಸೇದ
All children under 5 years of age should be vaccinated without fail: Dr. Taseda
ಯರಗಟ್ಟಿ, 15 : ಡಿಸೆಂಬರ 21-24ರವರೆಗೆ ಪಲ್ಸ ಪೋಲಿಯೊ ಲಸಿಕಾ ಕಾರ್ಯಕ್ರಮವಿದ್ದು 5 ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ತಪ್ಪದೇ ಲಸಿಕೆ ಹಾಕಿಸಬೇಕು ಎಂದು ವೈದ್ಯಾಧಿಕಾರಿ ಡಾ. ನುಹಾ ತಾಸೇದ ಹೇಳಿದರು.
ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದ ಸಭಾಭವನದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ರಾಷ್ಟ್ರೀಯ ಪಲ್ಸ್ ಪೋಲಿಯೊ ಕಾರ್ಯಕ್ರಮದ ಪೂರ್ವ ಭಾವಿ ಸಭೆಯಲ್ಲಿ ಮಾತನಾಡಿದ ಅವರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಡಿ.21ರಿಂದ 24ರವರೆಗೆ ಅಂಗನವಾಡಿ ಕೇಂದ್ರ ತೆರೆದು ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರು ತಮ್ಮ ವ್ಯಾಪ್ತಿಯಲ್ಲಿನ ಮಕ್ಕಳನ್ನು ಕರೆದುಕೊಂಡು ಬಂದು ಅವರಿಗೆ ಲಸಿಕೆ ಹಾಕಿಸಲು ಕ್ರಮ ಕೈಗೊಳ್ಳಬೇಕು ಎಂದರು.
ಶುಶ್ರೂಷಾಧಿಕಾರಿ ವೀರೇಶ ದೇಮಶೆಟ್ಟಿ ಮಾತನಾಡಿ, ಯಾವುದೇ ಮಗು ಲಸಿಕೆಯಿಂದ ವಂಚಿತವಾಗದಂತೆ ನೋಡಿಕೊಳ್ಳಬೇಕು. ಬೂತಮಟ್ಟದಲ್ಲಿ ಅಂಗನವಾಡಿ, ಸಮುಧಾಯ ಭವನ, ಬಸ್ ನಿಲ್ದಾಣ ಇನ್ನುಳಿದ ಮೂರು ದಿನ ಮನೆ ಮನೆಗೆ ಭೇಟಿ ನೀಡಿ ಲಸಿಕಾ ಕಾರ್ಯಕರ್ತಯರು ಲಸಿಕೆ ನೀಡಬೇಕು ಹಾಗೂ ಬೇರೆ ರಾಜ್ಯ ಹಾಗೂ ಜಿಲ್ಲೆಯಿಂದ ಬರುವ ಕಾರ್ಮಿಕರ ಮಕ್ಕಳಿಗೂ ಕಡ್ಡಾಯವಾಗಿ ಲಸಿಕೆ ಹಾಕಬೇಕು ಎಂದರು.
ಸಮುದಾಯ ಆರೋಗ್ಯ ಅಧಿಕಾರಿ ವಸಂತ ಚವ್ಹಾನ, ಸೀಮಾ ರಾಠೋಡ, ಗೀತಾ ಪೋಳ, ಆರೋಗ್ಯ ಸುರಕ್ಷಣಾಧಿಕಾರಿ ಪ್ರಿಯಾಂಕಾ ಹೊಸಮನಿ, ಯಲ್ಲಪ್ಪ ಹಲಗಲಿ, ಸವಿತಾ ಚನ್ನಮೇತ್ರಿ, ಶಂಕರ ಲಮಾನಿ, ಮಹಾವೀರ ಜೊಡಟ್ಟಿ, ಶೋಭಾ ಚುಳಕಿ, ಬಸವ್ವ ಕಂಬಾರ, ಮಂಜುಳಾ ಸಿದ್ನಾಳ, ರಾಜೇಶ್ವರಿ ನಾಯ್ಕರ ಸೇರಿದಂತೆ ಆಶಾ ಕಾರ್ಯಕರ್ತೆಯರು ಇದ್ದರು.
ಪುನರ್ ಅಭಿವೃದ್ಧಿಗೊಂಡ ಚೆನ್ನೈ ಪಾರ್ಕ್ ಅಮೃತ್ ರೈಲು ನಿಲ್ದಾಣವನ್ನು ಜುಲೈ 17ರಂದು ಉದ್ಘಾಟಿಸಲಿರುವ ಪ್ರಧಾನಿ ಮೋದಿ
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ
ಗಿಲ್ ಗಾಯದ ಆತಂಕದ ನಡುವೆ ಭಾರತಕ್ಕೆ ಏಕದಿನ ಸರಣಿ ಗೆಲ್ಲುವ ಅವಕಾಶ
ಜಿಎಸ್ಟಿ ಇಳಿಕೆ, ಸುಲಭ ಹಣಕಾಸು ನೆರವಿನಿಂದ ಆಟೋ ಉದ್ಯಮದ ಪ್ರಮುಖ ವಿಭಾಗಗಳಲ್ಲಿ ದಾಖಲೆಯ ಮೊದಲ ತ್ರೈಮಾಸಿಕ ಮಾರಾಟ 