ಅಥಣಿ

ಬೆಟಗೇರಿ ಎಸ್ಸೆಸ್ಸೆಲ್ಸಿ ಪರೀಕ್ಷಾ ಕೇಂದ್ರದಲ್ಲಿ ಸಕಲ ಸಿದ್ಧತೆ

ಬೆಟಗೇರಿ ಎಸ್ಸೆಸ್ಸೆಲ್ಸಿ ಪರೀಕ್ಷಾ ಕೇಂದ್ರದಲ್ಲಿ ಸಕಲ ಸಿದ್ಧತೆ

ಲೋಕದರ್ಶನ ವರದಿ

ಬೆಟಗೇರಿ: ಮಾ.31ರಿಂದ ಏ.15ರವರೆಗೆ ನಡೆಯಲಿರುವ ಪ್ರಸಕ್ತ ಸಾಲಿನ ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆ ಹಿನ್ನಲೆಯಲ್ಲಿ ಗುರುವಾರ ಮಾ.30ರಂದು ಮೂಡಲಗಿ ಶೈಕ್ಷಣಿಕ ವಲಯ ವ್ಯಾಪ್ತಿಯ ಬೆಟಗೇರಿ ಗ್ರಾಮದ ವಿ.ವಿ.ದೇ ಸರಕಾರಿ ಪ್ರೌಢ ಶಾಲೆಯ ಪರೀಕ್ಷಾ ಕೇಂದ್ರದಲ್ಲಿ ಸಕಲ ಸಿದ್ಧತೆ ಆಯೋಜನೆ ಕಾರ್ಯ ನಡೆಯಿತು.

   ಸ್ಥಳೀಯ ಪರೀಕ್ಷಾ ಕೇಂದ್ರದಲ್ಲಿ ಒಟ್ಟು 272 ವಿದ್ಯಾರ್ಥಿಗಳು ಹಾಜರಾಗಿ ಪರೀಕ್ಷೆ ಬರೆಯಲಿದ್ದಾರೆ. ಈ ಪರೀಕ್ಷಾ ಕೇಂದ್ರದಲ್ಲಿ 12 ಪರೀಕ್ಷಾ ಕೊಠಡಿ, 13 ಜನ ಪರೀಕ್ಷಾ ಕೊಠಡಿ ಮೇಲ್ವಿಚಾರಕರು, ಒಬ್ಬರು ಸ್ಥಾನಿಕ ವಿಕ್ಷಕ ಜಾಗೃತ ದಳ, ಒಬ್ಬರು ಪರೀಕ್ಷಾ ಮುಖ್ಯ ಅಧಿಕ್ಷಕ, ಓರ್ವ ಕಸ್ಟೊಡಿಯನ್, ಓರ್ವ ಮೊಬೈಲ್ ಸ್ವಾಧೀನಾಧಿಕಾರಿ, ಒಬ್ಬರು ಪರೀಕ್ಷಾ ಕೇಂದ್ರದ ಸಹಾಯಕರು ಕಾರ್ಯನಿರ್ವಹಿಸಲಿದ್ದಾರೆ. 

  ಇಲ್ಲಿಯ ಪರೀಕ್ಷಾ ಕೇಂದ್ರದಲ್ಲಿ ಸಕಲ ವ್ಯವಸ್ಥೆ ಮತ್ತು ನಿಯಮಗಳ ಕುರಿತು ಕ್ರಮಕೈಗೊಳ್ಳಲಾಗಿದೆ. ಪರೀಕ್ಷಾ ಕೇಂದ್ರದ ಸುತ್ತಮುತ್ತ 144 ಕಲಂ ನೀಷೆದಾಜ್ಞೆ ಜಾರಿಗೊಳಿಸಲಾಗಿದೆ. ನಕಲು ನಡೆಯದಂತೆ ಸಿಸಿ ಕ್ಯಾಮರಾ ಹಾಗೂ ಶಾಂತಿ, ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಸೂಕ್ತ ಪೋಲಿಸ್ ಬಂದೋಬಸ್ತ್ ನಿಯೋಜನೆ ಮಾಡಲಾಗಿದೆ. ಮಾ.31ರಿಂದ ಏ.15 ರವರೆಗೆ ಜರುಗಲಿರುವ ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆಗೆ ವಿದ್ಯಾರ್ಥಿಗಳು ಮೊಬೈಲ್ ಪೋನ್, ಸ್ಮಾರ್ಟ್  ವಾಚ್, ಇಯರ್ ಪೋನ್ನಂತಹ ಸಾಧನಗಳನ್ನು ಪರೀಕ್ಷಾ ಕೊಠಡಿಗೆ ತರುವಂತಿಲ್ಲಾ ಎಂದು ಸ್ಥಳೀಯ ಪರೀಕ್ಷಾ ಕೇಂದ್ರದ ಮುಖ್ಯಸ್ಥ ರಮೇಶ ಅಳಗುಂಡಿ ತಿಳಿಸಿದರು 

ಸುದ್ದಿ ಓದಿ