ಹಳೆ ವಿದ್ಯಾರ್ಥಿಗಳಿಂದ ಶಾಲೆಗೆ ಶುದ್ಧ ಕುಡಿಯುವ ನೀರಿನ ಘಟಕ
Alumni donate clean drinking water to school
ಹಳೆ ವಿದ್ಯಾರ್ಥಿಗಳಿಂದ ಶಾಲೆಗೆ ಶುದ್ಧ ಕುಡಿಯುವ ನೀರಿನ ಘಟಕ
ಕಾಗವಾಡ, 27 ; ತಾಲೂಕಿನ ಜುಗೂಳ ಗ್ರಾಮದ ಕೆಎಸ್‌ಎಸ್ ಪ್ರೌಢ ಶಾಲೆಗೆ ಸನ್ 2005-06 ನೇ ಸಾಲಿನ ಎಸ್‌ಎಸ್‌ಎಲ್‌ಸಿ ಹಳೆ ವಿದ್ಯಾರ್ಥಿಗಳು ಸೇರಿ, ಶಾಲೆಗೆ ಶುದ್ಧ ಕುಡಿಯುವ ನೀರಿನ ಘಟಕ ನೀಡಿ, ಪ್ರತಿಯೊಬ್ಬರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಇತ್ತಿಚಿಗೆ ಜುಗೂಳ ಗ್ರಾಮದ ಕರ್ನಾಟಕ ಶಿಕ್ಷಣ ಸಮಿತಿ ಪ್ರೌಢಶಾಲೆಯ ಸನ್ 2005-06 ನೇ ಸಾಲಿನ ಹಳೆ ವಿದ್ಯಾರ್ಥಿಗಳ ಸ್ನೇಹಮಿಲನ ಮತ್ತು ಗುರುವಂದನೆ ಕಾರ್ಯಕ್ರಮ ಸಂಪನ್ನಗೊಂಡಿತ್ತು. ಆ ವೇಳೆ ಕಾರ್ಯಕ್ರಮದಲ್ಲಿ ಸ್ನೇಹಮಿಲನ ಮತ್ತು ಗುರುವಂದನೆ ಕಾರ್ಯಕ್ರಮದ ಸವಿನೆನಪಿಗಾಗಿ ಶಾಲೆಗೆ ಶುದ್ಧ ಕುಡಿಯುವ ನೀರಿನ ಘಟಕವನ್ನು ನೀಡುವ ಭರವಸೆ ನೀಡಿದ್ದ ವಿದ್ಯಾರ್ಥಿಗಳು, ಶುಕ್ರವಾರ ದಿ. 27 ರಂದು ಸುಮಾರು 70 ಸಾವಿರ ಮೌಲ್ಯದ ಶುದ್ಧ ನೀರಿನ ಘಟಕವನ್ನು ಶಾಲೆಗೆ ಹಸ್ತಾಂತರಿಸಿದ್ದಾರೆ. ಈ ವೇಳೆ ಶಾಲೆಯ ಅಧ್ಯಕ್ಷರು, ಆಡಳಿತ ಮಂಡಳಿಯ ಸದಸ್ಯರು, ಶಾಲಾ ಶಿಕ್ಷಕರು, ಶಿಕ್ಷಕೇತರ ಸಿಬ್ಬಂದಿಗಳು ಹಾಗೂ ಮಾಜಿ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಹಳೆ ವಿದ್ಯಾರ್ಥಿಗಳ ಶ್ಲಾಘನೀಯ ಕಾರ್ಯಕ್ಕೆ ಪ್ರತಿಯೊಬ್ಬರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 