ಅಪರ್ಣಾ ಎಮ್. ಕೊಳ್ಳಾ ಜಿಲ್ಲೆಯ ವಿವಿಧ ಕಾರ್ಯಕ್ರಮಗಳಲ್ಲಿ ಬಾಗಿ
Aparna M. participated in various programs in Kolla district
ಬೆಳಗಾವಿ, ಜ.29: ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಬೆಂಗಳೂರು, ಮಕ್ಕಳ ರಕ್ಷಣಾ ನಿರ್ದೇಶನಾಲಯ ಬೆಂಗಳೂರು, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಬೆಳಗಾವಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಶಾಲಾ ಶಿಕ್ಷಣ ಇಲಾಖೆ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಬೆಳಗಾವಿ ಇವರ ಸಂಯುಕ್ತ ಆಶ್ರಯದಲ್ಲಿ ದಿ. 19.01.2026 ರಂದು ಸುವರ್ಣ ಸೌಧದ ಸಭಾಂಗಣದಲ್ಲಿ ಶಾಲಾ ಮಕ್ಕಳಿಗೆ ಬಾಲ್ಯ ವಿವಾಹ ನಿಷೇಧ ಕಾಯ್ದೆ, ಪೋಕ್ಸೋ ಕಾಯ್ದೆ, ಮಕ್ಕಳಿಗೆ ಸಂಬಂಧಿಸಿದ ವಿವಿಧ ಕಾನೂನುಗಳ ಕುರಿತು ತರಬೇತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮದ ಅದ್ಯಕ್ಷತೆ ವಹಿಸಿದ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಅಪರ್ಣಾ ಕೊಳ್ಳ ಮಾತನಾಡಿ, ಜಿಲ್ಲೆಯಲ್ಲಿ ಸರ್ಕಾರಿ ಹಾಗೂ ಖಾಸಗಿ ಶಾಲೆಗಳಲ್ಲಿ ಉಚಿತ ಮತ್ತು ಕಡ್ಡಾಯ ಶಿಕ್ಷಣ ಕಾಯ್ದೆಯಡಿಯಲ್ಲಿ ಕಳೆದ ಸಾಲಿನಲ್ಲಿ ಪ್ರವೇಶ ಪಡೆದ ಮಕ್ಕಳ ದಾಖಲಾತಿ ಸಂಖ್ಯೆ ಎಷ್ಟು ಇರಬಹುದು ಜೊತೆಗೆ ಎಲ್ಲ ಸರ್ಕಾರಿ ಹಾಗೂ ಖಾಸಗಿ ಶಾಲೆಗಳಿಗೆ ಶಿಕ್ಷಣ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ಅಲ್ಲಿರುವ ಸಮಸ್ಯೆಗಳನ್ನು ಗುರುತಿಸುವುದು ಹಾಗೂ ಸ್ಪಂದಿಸುವುದು. ಜಿಲ್ಲೆಯಲ್ಲಿರುವ 06 ರಿಂದ 14 ವರ್ಷದೊಳಗಿನ ಎಲ್ಲ ಮಕ್ಕಳ ಕಡ್ಡಾಯವಾಗಿ ಶಿಕ್ಷಣ ಪಡೆಯುವ ಹಾಗೆ ನೋಡಿ ಕೊಳ್ಳುವುದು ನಿಮ್ಮ ಆದ್ಯ ಕರ್ತವ್ಯವಾಗಿರುತ್ತದೆ ಎಂದ ತಿಳಿಸದರು.ಯಾವುದೇ ಮಕ್ಕಳ ಶಿಕ್ಷಣದಿಂದ ವಂಚಿತರಾಗಬಾರದು ಅದರಂತೆ ಜಿಲ್ಲೆಯಲ್ಲಿ ಮಕ್ಕಳಿಗೆ ಯಾವುದೇ ಸಮಸ್ಯೆ ಇದ್ದಲ್ಲಿ ಮಕ್ಕಳ ಸಹಾಯವಾಣಿ-1098 ಗೆ ಕರೆ ಮಾಡಬಹುದು ಮಕ್ಕಳಿಗೆ ಯಾವುದೇ ಸಂದರ್ಭದಲ್ಲಿ ಉಚಿತ ಸೇವೆ ಒದಗಿಸಬೇಕು ಎಂದರು.
ಹಿರಿಯ ಸಿವಿಲ್ ನ್ಯಾಯಾಧೀಶರು, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ಸಂದೀಪ ಪಾಟಿಲ್, ಮಕ್ಕಳ ವಿಶೇಷ ಪೋಲಿಸ ಘಟಕ ಅಧಿಕಾರಿ ರಘು ಜೆ. ಶ್ರೀಮತಿ ಲೀಲಾವತಿ ಹಿರೇಮಠ ಮಾನ್ಯ ಉಪನಿರ್ದೇಶಕರು ಸಾರ್ವಜನಿಕ ಶಿಕ್ಷಣ ಇಲಾಖೆ ಬೆಳಗಾವಿ. ಡಾ. ಪರ್ವಿನ್. ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳು, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಬೆಳಗಾವಿ, ಶಾಲಾ ಶಿಕ್ಷಣ ಇಲಾಖೆ ಬೆಳಗಾವಿ, ಹಾಗೂ ಜಿಲ್ಲಾ ಮಕ್ಕಳ ರಕ್ಷಣ ಘಟಕ ಮಕ್ಕಳ ಸಹಾಯವಾಣಿ-1098 ಸಿಬ್ಬಂದಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಕಾರ್ಯಕ್ರಮದ ನಿರೂಪಣೆಯನ್ನು ಹಾಗೂ ವಂಧನಾರೆ್ಣಯನ್ನು ವಾಯ್, ಜೆ, ಬಜಂತ್ರಿ. ಕ್ರೇತ್ರ ಶಿಕ್ಷಣಾಧಿಕಾರಿಗಳು ನಿರ್ವಹಿಸಿದರು.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 