ಶ್ರೀ ಮಾರಿಕಾಂಬಾ ಜಾತ್ರೆ ವೇಳೆ ಪ್ರತಿದಿನ ನೀರು ಪೂರೈಕೆಗೆ ಮನವಿ
Appeal for daily water supply during Sri Marikamba fair
ಮುಂಡಗೋಡ 18 : ಪಟ್ಟಣದ ಹಳೂರ ಓಣಿಯಲ್ಲಿ ಫೆಬ್ರವರಿ 3ರಿಂದ 11ರವರೆಗೆ ನಡೆಯಲಿರುವ ಶ್ರೀ ಮಾರಿಕಾಂಬಾ (ದ್ಯಾಮವ್ವ) ದೇವಿಯ ಜಾತ್ರೆಯ ಸಂದರ್ಭದಲ್ಲಿ ಪ್ರತಿದಿನ ಕುಡಿಯುವ ನೀರು ಪೂರೈಕೆ ಮಾಡುವಂತೆ ಒಕ್ಕೂಟದ ತಾಲೂಕು ಘಟಕದ ಅಧ್ಯಕ್ಷ ಮಂಜುನಾಥ ಕಲಾಲ ಅವರು ಪಟ್ಟಣ ಪಂಚಾಯತ್ ಆಡಳಿತಾಧಿಕಾರಿ ಹಾಗೂ ಮುಖ್ಯಾಧಿಕಾರಿಗಳಿಗೆ ಮನವಿ ಸಲ್ಲಿಸಿದರು. ಒಟ್ಟು 9 ದಿನಗಳ ಕಾಲ ನಡೆಯಲಿರುವ ಜಾತ್ರೆಗೆ ರಾಜ್ಯದ 31 ಜಿಲ್ಲೆಗಳಿಂದ ಸಾವಿರಾರು ಭಕ್ತಾದಿಗಳು ಆಗಮಿಸಲಿದ್ದಾರೆ. ಸದ್ಯ ಮೂರು ದಿನಕ್ಕೊಮ್ಮೆ ಮಾತ್ರ ನೀರು ಪೂರೈಕೆ ಮಾಡಲಾಗುತ್ತಿದ್ದು, ಜಾತ್ರೆ ಅವಧಿಯಲ್ಲಿ ನೀರಿನ ಅಭಾವ ಉಂಟಾಗುವ ಸಾಧ್ಯತೆ ಇದೆ ಎಂದು ಅವರು ಮನವಿಯಲ್ಲಿ ತಿಳಿಸಿದರು. ಭಕ್ತಾದಿಗಳು ಹಾಗೂ ಸ್ಥಳೀಯ ನಿವಾಸಿಗಳ ಅನುಕೂಲಕ್ಕಾಗಿ ಜಾತ್ರೆ ಆರಂಭದಿಂದ ಮುಕ್ತಾಯದವರೆಗೆ ಪ್ರತಿದಿನ ನಿರಂತರವಾಗಿ ಕುಡಿಯುವ ನೀರು ಸರಬರಾಜು ಮಾಡುವಂತೆ ಕ್ರಮ ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 