ಚಿಕ್ಕೋಡಿ

ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಮನವಿ

ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಮನವಿ

ಲೋಕದರ್ಶನ ವರದಿ

ಚಿಕ್ಕೋಡಿ 21: ಸದಲಗಾ ಪಟ್ಟಣದಲ್ಲಿ ವಾರದ ಸಂತೆಗೆ ಆಗಮಿಸುವ ಸಾರ್ವಜನಿಕರಿಗೆ ಶುದ್ಧ ಕುಡಿಯುವ ನೀರು ಮತ್ತು ಶೌಚಾಲಯದ ವ್ಯವಸ್ಥೆ ಮಾಡುವಂತೆ ಒತ್ತಾಯಿಸಿ ಮಂಗಳವಾರ ಏಕವೀರಿ ಪೌಂಡೇಶನ್ ವತಿಯಿಂದ ಪುರಸಭೆ ಮುಖ್ಯಾಧಿಕಾರಿಗೆ ಮನವಿ ಸಲ್ಲಿಸಿದರು.

ಸದಲಗಾ ಪಟ್ಟಣದಲ್ಲಿ ಪ್ರತಿ ಸೋಮವಾರ ನಡೆಯುವ ವಾರದ ಸಂತೆಗೆ ಬರುವ ಸಾರ್ವಜನಿಕರಿಗೆ ಪಟ್ಟಣದಲ್ಲಿ ಕುಡಿಯುವ ನೀರು ಮತ್ತು ಶೌಚಾಲಯದ ವ್ಯವಸ್ಥೆ ಇಲ್ಲದೆ ಪರದಾಡುವಂತಹ ಪರಿಸ್ಥಿತಿ ನಿಮರ್ಾಣವಾಗಿದೆ. ಸಂತೆಗೆ ಬರುವವರಿಗೆ ಕುಡಿಯುವ ನೀರು ಸೇರಿದಂತೆ ಯಾವುದೇ ಮೂಲಭೂತ ಸೌಕರ್ಯವಿಲ್ಲದಂತಾಗಿದೆ. ಇದರಿಂದ ಸಂತೆಗೆ ಬರುವ ಸದಲಗಾ, ನೇಜ, ವಡಗೋಲ, ಬೈನಾಕನವಾಡಿ ಮತ್ತು ಜನವಾಡ ಗ್ರಾಮದ ಮಹಿಳೆಯರಿಗೆ ತೀವ್ರ ತೊಂದರೆಯಾಗುತ್ತಿದೆ. ಆದ್ದರಿಂದ ಕೂಡಲೇ ಪುರಸಭೆಯಿಂದ ಪಟ್ಟಣಕ್ಕೆ ಬರುವ ಸಾರ್ವಜನಿಕರಿಗೆ ಶುದ್ಧ ಕುಡಿಯುವ ನೀರು ಮತ್ತು ಶೌಚಾಲಯದ ವ್ಯವಸ್ಥೆ ಮಾಡುವಂತೆ ಮನವಿ ಮಾಡಿದರು.                            

ಇದೆ ಸಂದರ್ಭದಲ್ಲಿ ಸದಲಗಾ ಪಟ್ಟಣದಲ್ಲಿ ಕ್ರಾಂತಿವೀರ ಸಂಗೋಳ್ಳಿ ರಾಯಣ್ಣನ ಪ್ರತಿಮೆ ಪ್ರತಿಷ್ಠಾಪಿಸಲು ಸೂಕ್ತವಾದ ಸ್ಥಳಾವಕಾಶ  ನೀಡುವಂತೆ ಒತ್ತಾಯಿಸಿ ಏಕವೀರಿ ಪೌಂಡೇಶನ್ ವತಿಯಿಂದ ಪುರಸಭೆ ಮುಖ್ಯಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.                                            

ಸಂಗೋಳ್ಳಿ ರಾಯಣ್ಣನವರ ಇತಹಾಸ ಮತ್ತು ಅವರ ಚರಿತ್ರೆಯನ್ನು ಮುಂದಿನ ಪೀಳಿಗೆಗೆ ತಿಳಿಸುವ ಉದ್ದೇಶದಿಂದ ಸದಲಗಾ ಪಟ್ಟಣದಲ್ಲಿ ಸಂಗೋಳ್ಳಿ ರಾಯಣ್ಣನ ಪ್ರತಿಮೆ ಪ್ರತಿಷ್ಠಾಪಿಸಲು ನಿರ್ಧರಿಸಲಾಗಿದೆ. ಆದ್ದರಿಂದ ಸದಲಗಾ ಪುರಸಭೆಯವರು ಪಟ್ಟಣದಲ್ಲಿ ಸಂಗೋಳ್ಳಿ ರಾಯಣ್ಣನ ಪ್ರತಿಮೆ ಪ್ರತಿಷ್ಠಾಪಿಸಲು ಸೂಕ್ತವಾದ ಸ್ಥಳಾವಕಾಶ ಮಾಡಿಕೊಡುವಂತೆ ಮನವಿ ಮಾಡಿದರು. 

ಡಾ. ರಾಜಕುಮಾರ ಡಾಂಗೆ, ವಿಕಾಸ ಹೆಗರೆ, ಡಾ. ಪಿ.ಎಂ. ಬೋಜೆ, ಕೈಲಾಸ ಮಾಳಗೆ, ಸಂಜೀವ ಡಾಂಗೆ ಮುಂತಾದವರು ಉಪಸ್ಥಿತರಿದ್ದರು. 

ಸುದ್ದಿ ಓದಿ