ನೀರಿನ ಸೌಕರ್ಯ ಒದಗಿಸುವಂತೆ ಶಾಸಕರಿಗೆ ಮನವಿ
Appeal to MLAs to provide water facilities
ತಾಳಿಕೋಟಿ 28: ಪಟ್ಟಣದ ಸೆಕ್ರೇಡ್ ಹಾರ್ಟ್ ಆಂಗ್ಲ ಮಾಧ್ಯಮ ಪ್ರೌಢಶಾಲೆ ಮತ್ತು ವಿಪಿಎಂ ಆಂಗ್ಲ ಮಾಧ್ಯಮ ಪ್ರಾಥಮಿಕ ಶಾಲೆಯಲ್ಲಿ ನೀರಿನ ಸಮಸ್ಯೆ ಇದ್ದು ವಿದ್ಯಾರ್ಥಿಗಳಿಗೆ ತುಂಬಾ ತೊಂದರೆಯಾಗುತ್ತಿದೆ ಆದಷ್ಟು ಬೇಗ ನೀರು ಒದಗಿಸಲು ಕ್ರಮ ವಹಿಸುವಂತೆ ಸಂಸ್ಥೆಯ ಆಡಳಿತ ಮಂಡಳಿಯ ನಿರ್ದೇಶಕರ ನಿಯೋಗ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಗಮದ ಅಧ್ಯಕ್ಷ, ಶಾಸಕ ಸಿ.ಎಸ್. ನಾಡಗೌಡ(ಅಪ್ಪಾಜಿ) ಇವರಿಗೆ ಮನವಿ ಸಲ್ಲಿಸಿದರು.
ಗುರುವಾರ ಮುದ್ದೆಬಿಹಾಳ ಪಟ್ಟಣದ ಶಾಸಕರ ಕಾರ್ಯಾಲಯದಲ್ಲಿ ನಿಯೋಗದ ಸದಸ್ಯರು ಭೇಟಿ ಮಾಡಿ ಮನವಿ ಸಲ್ಲಿಸಿದರು. ಮನವಿ ಸ್ವೀಕರಿಸಿ ಮಾತನಾಡಿದ ಶಾಸಕ ಅಪ್ಪಾಜಿ ನಾಡಗೌಡರು ಶಿಕ್ಷಣ ಸಂಸ್ಥೆಗಳು ಮಕ್ಕಳಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸುವಲ್ಲಿ ಹೆಚ್ಚು ಆಸಕ್ತಿ ವಹಿಸಬೇಕು ಇದರಲ್ಲಿ ಯಾವುದೇ ರೀತಿಯ ತೊಂದರೆ ಆಗದಂತೆ ನೋಡಿಕೊಳ್ಳಬೇಕು ಈ ಸಮಸ್ಯೆಯನ್ನು ಆದಷ್ಟು ಬೇಗ ಪರಿಹರಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸುತ್ತೇನೆ ಎಂದು ತಿಳಿಸಿದರು.
ಮನವಿಗೆ ಸ್ಪಂದಿಸಿದ ಶಾಸಕರಿಗೆ ಶಾಲೆಯ ಆಡಳಿತ ಮಂಡಳಿ ನಿಯೋಗದ ಪರವಾಗಿ ಸಂಸ್ಥೆಯ ಮುಖ್ಯಸ್ಥರಾದ ಫಾದರ್ ಸುನೀಲ ಅಂದ್ರಾದೆ ಧನ್ಯವಾದಗಳು ತಿಳಿಸಿದರು. ಸಿಸ್ಟರ್ ಐರಿನ್ ತವರು, ಸಿಸ್ಟರ್ ಸ್ಟೆಲ್ಲಾ, ಪ್ರಸಾದ ಗಟ್ಟಿ ಇದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 