ಶುದ್ಧ ಕುಡಿಯುವ ನೀರಿನ ಘಟಕ ಪುನರಾರಂಭಿಸಲು ಮನವಿ
Appeal to resume clean drinking water unit
ಶುದ್ಧ ಕುಡಿಯುವ ನೀರಿನ ಘಟಕ ಪುನರಾರಂಭಿಸಲು ಮನವಿ
ತಾಳಿಕೋಟಿ 16: ತಾಲೂಕಿನ ಮೂಕೀಹಾಳ ಗ್ರಾಮ ಪಂಚಾಯತ್ ವ್ಯಾಪ್ತಿಗೆ ಬರುವ ಶಿವಪೂರ ಗ್ರಾಮದಲ್ಲಿ ಕೆಟ್ಟು ಹೋಗಿ ಸ್ಥಗಿತಗೊಂಡ ಶುದ್ಧಕುಡಿಯುವ ನೀರಿನ ಘಟಕವನ್ನು ಪುನರ್ ಆರಂಭಿಸುವಂತೆ ಒತ್ತಾಯಿಸಿ ಅಂಬೇಡ್ಕರ್ ಸೇನೆ ಅಲ್ಪಸಂಖ್ಯಾತ ಘಟಕದ ಪದಾಧಿಕಾರಿಗಳು ಸಹಾಯಕ ನಿರ್ದೇಶಕಿ ಸುಜಾತ ಯಡ್ರಾಮಿ ಇವರ ಮೂಲಕ ತಾಪಂ ಇಓಗೆ ಸೋಮವಾರ ಮನವಿ ಸಲ್ಲಿಸಿದರು.
ಮನವಿ ಪತ್ರದಲ್ಲಿ ಮೂಕಿಹಾಳ ಗ್ರಾಪಂ ವ್ಯಾಪ್ತಿಗೆ ಬರುವ ಶಿವಪೂರ ಗ್ರಾಮದಲ್ಲಿ ಕಳೆದ 5 ವರ್ಷಗಳಿಂದ ಶುದ್ಧ ನೀರಿನ ಘಟಕವು ಕೆಟ್ಟು ಹೋಗಿ ಸ್ಥಗಿತಗೊಂಡಿದ್ದು ಇದರಿಂದ ಗ್ರಾಮಸ್ಥರಿಗೆ ತುಂಬಾ ತೊಂದರೆಯಾಗುತ್ತಿದೆ. ಈ ಕುರಿತು ಹಲವಾರು ಬಾರಿ ಅಧಿಕಾರಿಗಳಿಗೆ ತಿಳಿಸಿದರು ಯಾವುದೇ ಪ್ರಯೋಜನವಾಗಿಲ್ಲ ಕ್ರಮವೂ ವಹಿಸಿಲ್ಲ. ಘಟಕದಲ್ಲಿರುವ ಯಂತ್ರಗಳನ್ನು ರಿಪೇರಿ ಮಾಡುತ್ತೇವೆ ಎಂದು ತೆಗೆದುಕೊಂಡು ಹೋಗಿ ಇಲ್ಲಿವರೆಗೂ ಏನು ಮಾಡಿಲ್ಲ ಇದರ ಜೊತೆಗೆ ಗ್ರಾಮದಲ್ಲಿರುವ ಪರಿಶಿಷ್ಟ ಜಾತಿ ಕೇರಿಯಲ್ಲಿ ಸಿಸಿ ರಸ್ತೆಗಳು ಆಗದ ಕಾರಣ ಕೊಳಚೆ ನಿರ್ಮಾಣವಾಗಿ ಇದು ಕುಡಿಯುವ ನೀರಿಗೆ ಸೇರಿ ಜನರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತಿದೆ ಇಡೀ ವಾತಾವರಣ ಮಲೀನಗೊಂಡು ರೋಗ ರುಜನೆಗಳು ಹುಟ್ಟುವ ಸಾಧ್ಯತೆಗಳಿವೆ. ಈ ಗಂಭೀರ ಸಮಸ್ಯೆದ ಕುರಿತು ಪಿಡಿಒ ಅವರಿಗೆ ತಿಳಿಸಿದರು. ಇಲ್ಲಿವರೆಗೆ ಯಾವುದೇ ಕ್ರಮ ತೆಗೆದುಕೊಂಡಿಲ್ಲ ಆದ್ದರಿಂದ ತಾಪಂ ಕಾರ್ಯ ನಿರ್ವಹಣಾಧಿಕಾರಿಗಳು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ಕೊಟ್ಟು ಆದಷ್ಟು ಬೇಗ ಸ್ಥಗಿತಗೊಂಡ ಶುದ್ಧ ಕುಡಿಯುವ ನೀರಿನ ಘಟಕವನ್ನು ಪುನರಾರಂಭಿಸಬೇಕು ಹಾಗೂ ಎಸ್ ಸಿ ಕಾಲೋನಿಯಲ್ಲಿರುವ ಸಮಸ್ಯೆಯನ್ನು ಪರಿಹರಿಸಬೇಕೆಂದು ಕೇಳಿಕೊಳ್ಳಲಾಗಿದೆ.
ಈ ಸಮಯದಲ್ಲಿ ಅಂಬೇಡ್ಕರ್ ಸೇನೆ ಜಿಲ್ಲಾ ಉಪಾಧ್ಯಕ್ಷ ಬಸ್ಸು ಮಾದರ, ತಾಲೂಕ ಅಧ್ಯಕ್ಷ ಗೋಪಾಲ ಕಟ್ಟಿಮನಿ, ಅಲ್ಪಸಂಖ್ಯಾತ ಘಟಕದ ಮೆಹಬೂಬ ಅವಟಿ, ಪೀರಸಾಬ ನದಾಫ, ಯಮನಪ್ಪ ನಾಯ್ಕೋಡಿ, ಸಿದ್ದಪ್ಪ ಪ್ಯಾಟಿ, ಬಿ.ಬಿ.ವಡ್ಗೇರಿ, ಮಡು ಚಲವಾದಿ, ಎಂ.ವಾಯ್. ಶಿರೋಳ, ಶೇಕಪ್ಪಾ ಮಾದರ, ಅಶೋಕ ಚಲವಾದಿ ಇದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 