ಅರಳಿಮಟ್ಟಿ ಶಾಲೆಯ ಮಕ್ಕಳು ರಾಷ್ಟ್ರ ಮಟ್ಟದ ಕಲಾ ಉತ್ಸವಕ್ಕೆ ಆಯ್ಕೆ
Aralimatti School children selected for national level art festival
ಮೂಡಲಗಿ, 13 : ತಾಲ್ಲೂಕಿನ ಅರಳಿಮಟ್ಟಿ ಪಿಎಂಶ್ರೀ ಸರ್ಕಾರಿ ಪ್ರೌಡ ಶಾಲೆಯ ವಿದ್ಯಾರ್ಥಿಗಳು ನವದೆಹಲಿಯ ಎನ್‌ಸಿಆರ್‌ಟಿ ಹಾಗೂ ಶಾಲಾ ಶಿಕ್ಷಣ ಸಚಿವಾಲಯ ನಡೆಸುವ ಕಲಾ ಉತ್ಸವ ಸ್ಪರ್ಧೆಯ ವಾದ್ಯ ಸಂಗೀತ ಸ್ಪರ್ಧೆಯಲ್ಲಿ ರಾಜ್ಯ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದು ರಾಷ್ಟ್ರ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿರುವರು.
ರಾಷ್ಟ್ರ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿರುವ ವಿದ್ಯಾರ್ಥಿಗಳಾದ ಲವಿತ ಹಳಿಂಗಳಿ, ಕಿರಣ ಕುರಬಳ್ಳಿ, ರಂಗೇಶ ನೀಲಪ್ಪಗೋಳ, ಸಂತೋಷ ಲಗಳಿ ಪುಣೆಯಲ್ಲಿ ನಡೆಯುವ ರಾಷ್ಟ್ರ ಮಟ್ಟದ ಕಲಾ ಉತ್ಸವ ಸ್ಪರ್ಧೆಯಲ್ಲಿ ಭಾಗವಹಿಸಿಲಿದ್ದಾರೆ ಎಂದು ತರಬೇತಿ ನೀಡಿರುವ ಚಿತ್ರಕಲಾ ಶಿಕ್ಷಕಿ ಶೋಭಾ ಧಡೂತಿ ತಿಳಿಸಿದ್ದಾರೆ.
ಕಲಾ ಉತ್ಸವದ ಜಿಲ್ಲಾ ಮಟ್ಟದ ಸ್ಪರ್ಧೆಯ 7 ವಿಭಾಗಗಳಲ್ಲಿ 13 ವಿದ್ಯಾರ್ಥಿಗಳು ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದರು. ವಿದ್ಯಾರ್ಥಿಗಳನ್ನು ಶಾಲೆಯ ಮುಖ್ಯ ಶಿಕ್ಷಕ ಜಗದೀಶ ತಿಪ್ಪಿಮನಿ ಹಾಗೂ ಎಸ್‌ಡಿಎಂಸಿ ಪದಾಧಿಕಾರಿಗಳು ಅಭಿನಂದಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 