ಅಸ್ಸಾಂ ಚುನಾವಣೆ : ಅಭ್ಯರ್ಥಿಗಳ ಆಯ್ಕೆ ಸಮಿತಿ ಅಧ್ಯಕ್ಷೆಯಾಗಿ ಪ್ರಿಯಾಂಕಾ ಗಾಂಧಿ
Assam elections: Priyanka Gandhi to head candidate selection committee
ಗುವಾಹಟಿ/ನವದೆಹಲಿ: ಅಸ್ಸಾಂ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳನ್ನು ಅಂತಿಮಗೊಳಿಸುವ ಸ್ಕ್ರೀನಿಂಗ್ ಕಮಿಟಿಯ ಅಧ್ಯಕ್ಷೆಯಾಗಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರನ್ನು ನೇಮಕ ಮಾಡಲಾಗಿದೆ.
ಈ ವರ್ಷದಲ್ಲಿ ಚುನಾವಣೆ ಎದುರಿಸಲಿರುವ ಅಸ್ಸಾಂ, ಪಶ್ಚಿಮ ಬಂಗಾಳ, ಕೇರಳ, ತಮಿಳುನಾಡು ಮತ್ತು ಪುದುಚೇರಿ ರಾಜ್ಯಗಳಿಗೂ ಪ್ರತ್ಯೇಕ ಸ್ಕ್ರೀನಿಂಗ್ ಸಮಿತಿಗಳನ್ನು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಪ್ರಕಟಿಸಿದ್ದಾರೆ.
126
ಸದಸ್ಯ ಬಲದ ಅಸ್ಸಾಂ ವಿಧಾನಸಭೆಯಲ್ಲಿ ಅಧಿಕಾರ ಹಿಡಿಯಲು ಕಾಂಗ್ರೆಸ್ ಈ ಬಾರಿ ಸಿಪಿಐ(ಎಂ), ರೈಜೋರ್ ದಳ್ ಸೇರಿದಂತೆ ಹಲವು ವಿರೋಧ ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಂಡಿದೆ. ಪ್ರಸ್ತುತ ಆಡಳಿತಾರೂಢ ಬಿಜೆಪಿಯು 64 ಸ್ಥಾನಗಳನ್ನು ಹೊಂದಿದ್ದು, ಅದರ ಮಿತ್ರಪಕ್ಷಗಳಾದ ಎಜಿಪಿ ಮತ್ತು ಯುಪಿಪಿಎಲ್ ಬಲವಾದ ಬೆಂಬಲ ಹೊಂದಿವೆ. ವಿರೋಧ ಪಕ್ಷದಲ್ಲಿರುವ ಕಾಂಗ್ರೆಸ್ 26 ಸ್ಥಾನಗಳನ್ನು ಹೊಂದಿದೆ.
ಮಾರ್ಚ್ ಅಥವಾ ಏಪ್ರಿಲ್ ತಿಂಗಳಲ್ಲಿ ಅಸ್ಸಾಂ ಚುನಾವಣೆ ನಡೆಯುವ ಸಾಧ್ಯತೆಯಿದ್ದು, ಪ್ರಿಯಾಂಕಾ ಗಾಂಧಿ ನೇತೃತ್ವದ ಸಮಿತಿಯು ಗೆಲ್ಲುವ ಅಭ್ಯರ್ಥಿಗಳಿಗೆ ಟಿಕೆಟ್ ನೀಡುವ ಜವಾಬ್ದಾರಿಯನ್ನು ನೀಡಿದೆ.
ಈ ಬಾರಿ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆಯಲ್ಲಿ ಕರ್ನಾಟಕದ ಕಾಂಗ್ರೆಸ್ ನಾಯಕರಾದ ಬಿ.ಕೆ. ಹರಿಪ್ರಸಾದ್ (ಪಶ್ಚಿಮ ಬಂಗಾಳ ಸಮಿತಿ ಅಧ್ಯಕ್ಷ) ಮತ್ತು ಜಿ.ಸಿ. ಚಂದ್ರಶೇಖರ್ (ತಮಿಳುನಾಡು ಸಮಿತಿ ಸದಸ್ಯ) ಅವರಿಗೆ ಹೈಕಮಾಂಡ್ ಮಹತ್ವದ ಜವಾಬ್ದಾರಿ ನೀಡಿದೆ.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 