ಇ-ಖಾತಾ ಅಭಿಯಾನಕ್ಕೆ ವಿಧಾನಸಭೆ ಉಪಾಧ್ಯಕ್ಷ ರುದ್ರ್ಪ ಲಮಾಣಿ ಚಾಲನೆ
Assembly Vice President Rudrappa Lamani launched the e-account campaign
ಇ-ಖಾತಾ ಅಭಿಯಾನಕ್ಕೆ ವಿಧಾನಸಭೆ ಉಪಾಧ್ಯಕ್ಷ ರುದ್ರ್ಪ ಲಮಾಣಿ ಚಾಲನೆ
ಹಾವೇರಿ 20: “ಇ-ಖಾತಾ ಅಭಿಯಾನ”ನಕ್ಕೆ ಶಾಸಕರು ಹಾಗೂ ವಿಧಾನಸಭೆ ಉಪ ಸಭಾಧ್ಯಕ್ಷ ರುದ್ರ್ಪ ಲಮಾಣಿ ಅವರು ನಗರಸಭೆ ಆವರಣದಲ್ಲಿ ಗುರುವಾರ ಚಾಲನೆ ನೀಡಿದರು.’ ಸರ್ಕಾರ ಇ-ಆಸ್ತಿ ತಂತ್ರಾಶದ ಬಳಕೆ ಕಡ್ಡಾಯಗೊಳಿಸಿದೆ, ಆದ್ದರಿಂದ ನಗರಸಭೆಯ ವ್ಯಾಪ್ತಿಯಲ್ಲಿ ಬರುವ ಎಲ್ಲಾ ರೀತಿಯ ಕಟ್ಟಡ, ನಿವೇಶನಗಳಿಗೆ ಆಸ್ತಿ ತೆರಿಗೆ ನಿರ್ಧರಣೆಗೊಳಿಸಿ ಆಸ್ತಿ ತೆರಿಗೆಯನ್ನು 2024-25 ನೇ ಸಾಲಿನ ಅಂತ್ಯದೊಳಗೆ ಪೂರ್ಣ ಪ್ರಮಾಣದಲ್ಲಿ ಪಾವತಿಸಿಕೊಂಡು ಸಂಬಂಧಪಟ್ಟ ಆಸ್ತಿ ಮಾಲೀಕರಿಂದ ಅವಶ್ಯಕ ದಾಖಲೆಗಳನ್ನು ಪಡೆದು ಕರ್ನಾಟಕ ಪುರಸಭೆಗಳ ಅಧಿನಿಯಮ 1964 ರ ಕಲಂ 106 (1ಬಿ) () ರನ್ವಯ ಅನಧಿಕೃತ ಸ್ವತ್ತುಗಳನ್ನು ಮಾಹಿತಿಯುಳ್ಳ ವಹಿಯನ್ನು ನಿರ್ವಹಿಸಬೇಕಾಗಿರುತ್ತದೆ. ಆದ್ದರಿಂದ ನಗರಸಭೆ ವ್ಯಾಪ್ತಿಯೊಳಗೆ ಬರುವ ಸರ್ಕಾರಿ ಅರೆಸರ್ಕಾರಿ/ಸ್ಥಳೀಯ ಸಂಸ್ಥೆಗಳ ಒಡೆತನದಲ್ಲಿರುವ ಆಸ್ತಿಗಳನ್ನು ಹೊರತುಪಡಿಸಿ ಇನ್ನುಳಿದ ಎಲ್ಲ ರೀತಿಯ ಕಟ್ಟಡಗಳ, ನಿವೇಶನಗಳ ಮಾಲೀಕರು ನಿಮ್ಮ ಆಸ್ತಿಗಳಿಗೆ ಸಂಬಂಧಿಸಿದ ದಾಖಲೆಗಳಾದ ಎಲ್ಲಾ ನೊಂದಾಯಿತ ಪತ್ರಗಳು, ಆಸ್ತಿಯ ಛಾಯಾಚಿತ್ರ, ಮಾಲೀಕರ ಭಾವಚಿತ್ರ, ಮಾಲೀಕರ ಗುರುತಿನ ಚೀಟಿ, ಪಾನಕಾರ್ಡ, ರೇಷನ ಕಾರ್ಡ, ನಮೂನೆ-15(ಇಸಿ), ಕೆಇಬಿ ಬಿಲ್, ಕಟ್ಟಡ ಪರವಾನಗಿ ಮತ್ತು ಅನುಮೋದಿತ ನಕ್ಷೆ, ಬಿನಶೆತಕಿ ನಕಲುಪ್ರತಿ, ಏಕ ನಿವೇಶನ, ಬಹುನಿವೇಶನಗಳ ತಾಂತ್ರಿಕ ಅನುಮೋದನೆ ನಕ್ಷೆ,ಸಿಟಿಎಸ್ ಉತಾರ, ಕಂದಾಯ ಪಾವತಿಸಿದ ರಶೀದಿ ಹಾಗೂ ಅವಶ್ಯಕ ಇರುವ ಇತರೆ ದಾಖಲೆಗಳನ್ನು ಹಾಜರುಪಡಿಸಿ ನಿಮ್ಮ ಆಸ್ತಿಯನ್ನು ಗಣಕೀಕರಣಗೊಳಿಸಿಕೊಂಡು ಅನ್ವಯವಾಗುವ ನಮೂನೆ-3/ನಮೂನೆ-3ಂ ಪಡೆದುಕೊಳ್ಳಬೇಕು ಎಂದು ತಿಳಿಸಿದರು. ನಗರಸಭೆ ಅಧ್ಯಕ್ಷೆ ಶಶಿಕಲಾ ಮಾಳಗಿ, ಉಪಾಧ್ಯಕ್ಷ ಮಲ್ಲಿಕಾರ್ಜುನ ಸಾತೇನಹಳ್ಳಿ, ಸದಸ್ಯರಾದ ಸಂಜೀವಕುಮಾರ ನೀರಲಗಿ, ಗಣೇಶ ಬಿಷ್ಟಣ್ಣನವರ ಇತರರು ಉಪಸ್ಥಿತರಿದ್ದರು.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 