ಜಮಖಂಡಿಯಲ್ಲಿ ಮಾದಕ ವಸ್ತುಗಳ ವಿರುದ್ಧ ಜಾಗೃತಿ ಅಭಿಯಾನ
Awareness campaign against drugs in Jamkhandi
ಲೋಕದರ್ಶನ ವರದಿ
ಜಮಖಂಡಿ : ಮಾದಕ ವಸ್ತುಗಳ ಸೇವನೆಯು ಸಮಾಜಕ್ಕೆ ಗಂಭೀರ ಸವಾಲಾಗಿ ಪರಿಣಮಿಸಿದ್ದು, ವಿಶೇಷವಾಗಿ ಯುವಜನರು ಇದರ ದುಷ್ಪರಿಣಾಮಗಳಿಂದ ದೂರವಿರಬೇಕು ಎಂದು ಉಪವಿಭಾಗಾಧಿಕಾರಿ ಶ್ವೇತಾ ಬಿಡಿಕರ್ ಹೇಳಿದರು.
ನಗರದ ಐತಿಹಾಸಿಕ ಪೋಲೋ ಮೈದಾನದಲ್ಲಿ ಅಂತರರಾಷ್ಟ್ರೀಯ ಮಾದಕ ವಸ್ತು ವಿರೋಧಿ ದಿನಾಚರಣೆಯ ಅಂಗವಾಗಿ ಕಂದಾಯ ಇಲಾಖೆ ಹಾಗೂ ಪೊಲೀಸ್ ಇಲಾಖೆಯ ನೇತೃತ್ವದಲ್ಲಿ ಆಯೋಜಿಸಿದ್ದ ಜಾಗೃತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಮಾದಕ ವಸ್ತುಗಳ ಸೇವನೆಯಿಂದ ಕುಟುಂಬಗಳ ನೆಮ್ಮದಿ ಹಾಳಾಗುವುದಲ್ಲದೆ, ಯುವಕರ ಭವಿಷ್ಯಕ್ಕೂ ಧಕ್ಕೆಯಾಗುತ್ತದೆ. ಆರೋಗ್ಯ, ಶಿಕ್ಷಣ ಹಾಗೂ ಕ್ರೀಡೆಗೆ ಆದ್ಯತೆ ನೀಡಿ ಉತ್ತಮ ಜೀವನ ರೂಪಿಸಿಕೊಳ್ಳಬೇಕು ಎಂದು ಕರೆ ನೀಡಿದರು.
ಡಿವೈಎಸ್ಪಿ ಸೈಯದ್ ರೋಷನ್ ಜಮೀರ್ ಮಾತನಾಡಿ, ಯುವಜನರಲ್ಲಿ ತಂಬಾಕು ಹಾಗೂ ಇತರ ಮಾದಕ ವಸ್ತುಗಳ ಬಳಕೆ ಹೆಚ್ಚುತ್ತಿರುವುದು ಆತಂಕಕಾರಿ ಬೆಳವಣಿಗೆ ಎಂದರು. ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಮಾದಕ ವಸ್ತುಗಳ ಜಾಲ ಈಗ ಗ್ರಾಮೀಣ ಭಾಗಗಳಿಗೂ ವಿಸ್ತರಿಸಿದ್ದು, ಯುವಕರು ಇದರ ಬಲೆಗೆ ಬೀಳದಂತೆ ಎಚ್ಚರಿಕೆ ವಹಿಸಬೇಕು ಎಂದು ಹೇಳಿದರು.
ಮಾದಕ ವಸ್ತುಗಳ ಮಾರಾಟ, ಸಾಗಾಟ ಹಾಗೂ ಸೇವನೆ ಕಾನೂನುಬಾಹಿರವಾಗಿದ್ದು, ಇಂತಹ ಅಪರಾಧಗಳಲ್ಲಿ ತೊಡಗಿದವರಿಗೆ ಕಠಿಣ ಶಿಕ್ಷೆ ವಿಧಿಸಲಾಗುತ್ತದೆ. ಸಂಶಯಾಸ್ಪದ ಚಟುವಟಿಕೆಗಳು ಕಂಡುಬಂದರೆ ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡುವಂತೆ ಸಾರ್ವಜನಿಕರಲ್ಲಿ ಮನವಿ ಮಾಡಿದರು.
ತಹಶೀಲ್ದಾರ್ ಅನಿಲ್ ಬಡಿಗೇರ್ ಮಾತನಾಡಿ, ಮಾದಕ ವ್ಯಸನದಿಂದ ದೈಹಿಕ, ಮಾನಸಿಕ ಹಾಗೂ ಸಾಮಾಜಿಕ ಸಮಸ್ಯೆಗಳು ಉಂಟಾಗುತ್ತವೆ. ಯುವಕರು ಉತ್ತಮ ಮೌಲ್ಯಗಳನ್ನು ಅಳವಡಿಸಿಕೊಂಡು ಸಮಾಜ ನಿರ್ಮಾಣದಲ್ಲಿ ಪಾಲ್ಗೊಳ್ಳಬೇಕು ಎಂದು ತಿಳಿಸಿದರು.
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ 