ಬಾಲಕಾರ್ಮಿಕ ಪದ್ಧತಿ ದುಷ್ಪರಿಣಾಮಗಳ ಅರಿವು ಜಾಗೃತಿ ಜಾಥಾ
ಬಳ್ಳಾರಿ 13: ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕಾರ್ಮಿಕ ಇಲಾಖೆ, ಜಿಲ್ಲಾ ವಕೀಲರ ಸಂಘ, ರಾಷ್ಟ್ರೀಯ ಬಾಲಕಾರ್ಮಿಕ ಯೋಜನೆ,ವಿವಿಧ ಇಲಾಖೆಗಳ ಮತ್ತು ಸಂಘ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ವಿಶ್ವ ಬಾಲಕಾರ್ಮಿಕರ ಪದ್ಧತಿ ವಿರೋಧಿ ದಿನಾಚರಣೆ ಹಾಗೂ ಅಜಾದಿ ಕಾ ಅಮೃತ್ ಮಹೋತ್ಸವ ಸಪ್ತಾಹ ಕಾರ್ಯಕ್ರಮದ ನಿಮಿತ್ತ ನಗರದಲ್ಲಿ ಸೋಮವಾರ ಏರ್ಪಡಿಸಿದ್ದ ಜಾಗೃತಿ ಜಾಥಾವು ಬಾಲಕಾರ್ಮಿಕ ದುಷ್ಪರಿಣಾಮಗಳ ಕುರಿತು ಜಾಗೃತಿ ಮೂಡಿಸಿತು ಮತ್ತು ಶಿಕ್ಷಣದ ಮಹತ್ವವನ್ನು ಈ ಸಂದರ್ಭದಲ್ಲಿ ಸಾರಿತು.
ಬಾಲಕಾರ್ಮಿಕ ಪದ್ದತಿ ದುಷ್ಪರಿಣಾಮಗಳ ಕುರಿತ ಘೋಷಣಾ ಫಲಕಗಳು ಜಾಥಾದಲ್ಲಿ ಗಮನಸೆಳೆದವು.
ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಿಂದ ಆರಂಭವಾದ ಜಾಗೃತಿ ಜಾಥಾಗೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಎಸ್.ಹೆಚ್.ಪುಷ್ಪಾಂಜಲಿ ದೇವಿ ಅವರು ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು ಬಾಲಕಾರ್ಮಿಕ ಪದ್ಧತಿಯ ದುಷ್ಪರಿಣಾಮಗಳ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಉದ್ದೇಶದಿಂದ ಈ ಜಾಥಾ ಏರ್ಪಡಿಸಲಾಗಿದೆ. ಮಕ್ಕಳನ್ನು ಕೆಲಸಕ್ಕೆ ತೆಗೆದುಕೊಳ್ಳುವುದು ಕಾರ್ಮಿಕ ಕಾಯ್ದೆ ಪ್ರಕಾರ ಅಪರಾಧ. ಸಮಾಜ ಜಾಗೃತವಾದಾಗ ಮಾತ್ರ ಇಂತ ಪದ್ದತಿಗಳು ನಿಮರ್ೂಲನೆಯಾಗಲು ಸಾಧ್ಯ ಎಂದರು.
ಕಾನೂನುಗಳಿವೆ, ಆದರೇ ಅವುಗಳ ಪರಿಪಾಲನೆ ಮಾಡುವ ಜನರಲ್ಲಿ ಜಾಗೃತಿ ಕೊರತೆ ಇದ್ದು,ಇದಕ್ಕಾಗಿ ಅರಿವು ಮೂಡಿಸಲಾಗುತ್ತಿದೆ ಎಂದರು.
ಈ ಜಾಥಾವು ಜಿಲ್ಲಾಧಿಕಾರಿಗಳ ಕಚೇರಿಯಿಂದ ಆರಂಭವಾಗಿ ಗಡಗಿ ಚನ್ನಪ್ಪ ವೃತ್ತದ ಮುಖಾಂತರ,ಬೆಂಗಳೂರು ರಸ್ತೆ ಮತ್ತು ಕಾಳಮ್ಮ ರಸ್ತೆ ಮೂಲಕ ಶ್ರೀರಾಂಪುರ ಕಾಲೋನಿಯ ಶಾಲೆಯವರೆಗೆ ನಡೆಯಿತು.
ಈ ಸಂದರ್ಭದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯಾದರ್ಶಿಗಳು ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ಸತೀಶ್ ಜೆ.ಬಾಳಿ,ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಎರ್ರಿಗೌಡ, ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷೆ ವಿಜಯಲಕ್ಷ್ಮಿ ಮೈದುರ್, ರಾಜ್ಯ ಮಕ್ಕಳ ರಕ್ಷಣಾ ಆಯೋಗದ ಸದಸ್ಯ ಎಚ್.ಸಿ.ರಾಘವೇಂದ್ರ, ಮಹಿಳಾ ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ವಿಜಯಕುಮಾರ, ತಹಸೀಲ್ದಾರ್ ವಿಶ್ವನಾಥ್, ಕಾರ್ಮಿಕ ಅಧಿಕಾರಿಗಳಾದ ಕಮಲ್ ಅಲ್ತಾಫ್, ಮಾರಿಕಾಂಬಾ, ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಜಿಲ್ಲಾ ಸಲಹೆಗಾರ ದುರುಗೇಶ್. ಎಸ್. ಮಾಚನೂರು, ರಾಷ್ಟೀಯ ಬಾಲ ಕಾರ್ಮಿಕ ಯೋಜನೆ ಯೋಜನಾ ನಿದರ್ೇಶಕ ಮೌನೇಶ್, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ರಾಜಾನಾಯ್ಕ, ಜಿಲ್ಲಾ ವಕೀಲರ ಸಂಘದ ಕಾರ್ಯದಶರ್ಿ ರವೀಂದ್ರನಾಥ, ಜಿಲ್ಲಾ ದೈಹಿಕ ಶಿಕ್ಷಣಧಿಕಾರಿ ರೆಹಮತ್ ಉಲ್ಲಾ ಸೇರಿದಂತೆ ನಗರದ ವಿವಿಧ ಶಾಲೆಗಳ ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಇದ್ದರು