ವಾಯುಮಾಲಿನ್ಯ ನಿಯಂತ್ರಣಾ ಜಾಗೃತಿ ಮಾಸಾಚರಣೆ ಕುರಿತಾಗಿ ಜಾಗೃತಿ ಕಾರ್ಯಕ್ರಮ
Awareness program on Air Pollution Control Awareness Month
ಕಾರವಾರ 17: ವಾಯು ಮಾಲಿನ್ಯ ನಿಯಂತ್ರಣಾ ಜಾಗೃತಿ ಮಾಸಾಚರಣೆ ಅಂಗವಾಗಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಕಾರವಾರ, ಮತ್ತು ಪ್ರಾದೇಶಿಕ ಸಾರಿಗೆ ಕಚೇರಿ ವತಿಯಿಂದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜ್ನಲ್ಲಿ “ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆ ವಾಯುಮಾಲಿನ್ಯ ತಡೆಯೋಣ ಪರಿಸರ ಉಳಿಸೋಣ ಎಂಬ ಧ್ಯೇಯವಾಕ್ಯದೊಂದಿಗೆ ಪರಿಸರ ಜಾಗೃತಿ ಕಾರ್ಯಕ್ರಮವನ್ನು ಸೋಮವಾರ ಹಮ್ಮಿಕೊಳ್ಳಲಾಯಿತು.
ಪ್ರಾದೇಶಿಕ ಸಾರಿಗೆ ಅಧಿಕಾರಿ ಜಾನ್ ಮಿಸ್ಕಿತ್ ಕಾರ್ಯಕ್ರಮ ಉದ್ಘಾಟಸಿದರು. ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನ ಪ್ರಾಂಶುಪಾಲರು ವಿದ್ಯಾರ್ಥಿಗಳಿಗೆ ಪರಿಸರದ ಬಗ್ಗೆ ಕಾಳಜಿ ವಹಿಸಲು ಹಾಗೂ ವಾಯು ಮಾಲಿನ್ಯ ನಿಯಂತ್ರಣ ಬಗ್ಗೆ ಮತ್ತು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಪ್ರಾದೇಶಿಕ ಕಚೇರಿಯ ಪರಿಸರ ಅಧಿಕಾರಿ ಬಿ.ಕೆ. ಸಂತೋಷ್ ವಾಯು ಮಾಲಿನ್ಯ ನಿಯಂತ್ರಣದ ಬಗ್ಗೆ ತಿಳಿಸಿದರು. ಸಾಗರ ಜೀವಶಾಸ್ತೊ, ಸ್ನಾತಕೋತ್ತರ ವಿಭಾಗದ ನಿವೃತ್ತ ಪ್ರಾಧ್ಯಾಪಕ ಡಾ. ವಿ. ಎನ್. ನಾಯಕ, ವಿದ್ಯಾರ್ಥಿಗಳಿಗೆ ವಾಯು ಮಾಲಿನ್ಯ ಕಾರಣ ಹಾಗೂ ಅದರಿಂದಾಗುವ ಪರಿಣಾಮಗಳ ಬಗ್ಗೆ ವಿಶೇಷ ಉಪನ್ಯಾಸ ನೀಡಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 