ಮಾ. 8 ರಂದು ಆನುವಂಶಿಕ ರೋಗಗಳ ಕುರಿತ ಅರಿವು ಕಾರ್ಯಕ್ರಮ
ಲೋಕದರ್ಶನ ವರದಿ
ವಿಜಯಪುರ 07: ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ವಿದ್ಯಾರ್ಥಿನಿ ಕ್ಷೇಮಪಾಲನ ನಿರ್ದೇಶನಾಲಯ, ಸ್ನಾತಕ ಅಧ್ಯಯನ ವಿಭಾಗ ಹಾಗೂ ವಿಜಯಪುರದ ಕೊರಬು ವುಮೆನ್ಸ್ ಕೇರ್ ಆಸ್ಪತ್ರೆಯ ಸಹಯೋಗದೊಂದಿಗೆ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಇದೇ ಮಾ. 8 ರಂದು ಬೆಳಿಗ್ಗೆ 10.30ಕ್ಕೆ ಕನ್ನಡ ಅಧ್ಯಯನ ಸಭಾಂಗಣದಲ್ಲಿ ಆನುವಂಶಿಕ ರೋಗಗಳ ಕುರಿತ ಅರಿವು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ವಿಜಯಪುರದ ಖ್ಯಾತ ವೈದ್ಯೆ ಕೊರಬು ವುಮೆನ್ಸ್ ಕೇರ್ ಆಸ್ಪತ್ರೆಯ ಡಾ. ಜ್ಯೋತಿ ಕೊರಬು ಮುಖ್ಯ ಅಥಿತಿಯಾಗಿ ಆಗಮಿಸಲಿದ್ದಾರೆ. ಮಹಿಳಾ ವಿವಿಯ ಕುಲಪತಿ ಪ್ರೊ. ವಿಜಯಾ ಬಿ. ಕೋರಿಶೆಟ್ಟಿ ಅಧ್ಯಕ್ಷತೆ ವಹಿಸಲಿದ್ದು, ಕಾರ್ಯಕ್ರಮದಲ್ಲಿ ಕುಲಸಚಿವ ಶಂಕರಗೌಡ ಎಸ್ ಸೋಮನಾಳ, ಮೌಲ್ಯಮಾಪನ ಕುಲಸಚಿವ ಪ್ರೊ.ಬಿ.ಎಲ್.ಲಕ್ಕಣ್ಣವರ್, ಆರ್ಥಿಕ ಅಧಿಕಾರಿ ರಾಮಣ್ಣ ಅಥಣಿ, ಸಿಂಡಿಕೇಟ್ ಸದಸ್ಯೆ ಮಮತಾ ಎಸ್, ಸ್ನಾತಕ ಅಧ್ಯಯನ ವಿಭಾಗದ ಶಿಕ್ಷಣ ನಿಕಾಯದ ಡೀನ್ ಪ್ರೊ. ಸಕ್ಪಾಲ್ ಹೂವಣ್ಣ, ಡಾ.ಜಿ. ಸೌಭಾಗ್ಯ, ಕೊರಬು ವುಮೆನ್ಸ್ ಆಸ್ಪತ್ರೆಯ ಆಡಳಿತಾಧಿಕಾರಿ ಈರಣ್ಣ ಸಿಂದಗಿ ಉಪಸ್ಥಿರಲಿದ್ದಾರೆ ಎಂದು ವಿದ್ಯಾರ್ಥಿನಿ ಕ್ಷೇಮಪಾಲನ ನಿರ್ದೇಶನಾಲಯದ ನಿರ್ದೇಶಕಿ ಪ್ರೊ. ಜ್ಯೋತಿ ಎ. ಉಪಾಧ್ಯೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.