ರಾಜ್ಯೋತ್ಸವ ಪ್ರಶಸ್ತಿಗೆ ಅರ್ಜಿ ಆಹ್ವಾನ
ಲೋಕದರ್ಶನ ವರದಿ
ಮುಂಡಗೋಡ: ನ.1ರಂದು ಆಚರಿಸಲಿರುವ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ತಾಲೂಕಿನಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದವರನ್ನು ಗುರುತಿಸಿ ರಾಜ್ಯೋತ್ಸವ ಪ್ರಶಸ್ತಿ ನೀಡಲು ತೀರ್ಮಾ ನಿಸಲಾಗಿದೆ ಎಂದು ತಹಶೀಲ್ದಾರ ಶಂಕರ ಗೌಡಿ ತಿಳಿಸಿದ್ದಾರೆ.
ಕೃಷಿ, ಸಾಹಿತ್ಯ, ಕಲೆ, ಸಂಸ್ಕೃತಿ, ಸಮಾಜ ಸೇವೆ, ಶಿಕ್ಷಣ, ಪರಿಸರ, ಮತ್ತಿತರ ಕ್ಷೇತ್ರಗಳಲ್ಲಿ ಅಸಾಧಾರಣ ಸೇವೆ ಸಲ್ಲಿಸಿದ ಗಣ್ಯರಿಂದ ಪ್ರಶಸ್ತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ತಮ್ಮ ಸಾಧನೆಗಳ ವಿವರ ಇರುವ ಅರ್ಜಿಗಳನ್ನು ಅ.25,2022ರೊಳಗಾಗಿ ಸಹಾಯಕ ನಿದರ್ೇಶಕರು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಿಲ್ಲಾಧಿಕಾರಿಗಳ ಕಚೇರಿ, ಉತ್ತರ ಕನ್ನಡ ಇಲ್ಲಿಗೆ ತಲುಪಿಸಬೇಕು. ಜಿಲ್ಲಾ ಮಟ್ಟದ ಆಯ್ಕೆ ಸಮಿತಿ ಸಾಧಕರನ್ನು ಆಯ್ಕೆ ಮಾಡಲಿದ್ದು ನ.1,2022ರಂದು ರಾಜ್ಯೋತ್ಸವದ ದಿನ ಜಿಲ್ಲಾ ಮಟ್ಟದ ಕಾರ್ಯಕ್ರಮದಲ್ಲಿ ಸನ್ಮಾನಿಸಲಾಗುವುದು ಎಂದು ತಿಳಿಸಿದ್ದಾರೆ