ಬಿಜೆಪಿ ನಿರೀಕ್ಷೆ ಹುಸಿ: ನಿರಾಳವಾದ ದೋಸ್ತಿಗಳು
ಬೆಂಗಳೂರು 5: ಶಾಸಕರಾದ ಆನಂದ್ ಸಿಂಗ್ ಹಾಗೂ ರಮೇಶ್ ಜಾರಕಿಹೊಳಿ ರಾಜೀನಾಮೆ ನೀಡಿದ ಬೆನ್ನಲ್ಲೇ ಮತ್ತಷ್ಟು ಅತೃಪ್ತ ಶಾಸಕರು ರಾಜೀನಾಮೆ ನೀಡಲಿದ್ದಾರೆ ಎಂಬ ಬಿಜೆಪಿ ನಿರೀಕ್ಷೆ ಹುಸಿಯಾಗಿದೆ. ಕಾಂಗ್ರೆಸ್-ಜೆಡಿಎಸ್ ದೋಸ್ತಿ ಸಕರ್ಾರ ಪತನದ ಭೀತಿಯಿಂದ ನಿರಾಳವಾಗಿದೆ.
ಅಮವಾಸ್ಯೆ ಕಳೆದ ಬಳಿಕ ಕಾಂಗ್ರೆಸ್ ಮತ್ತು ಜೆಡಿಎಸ್ನ ಕೆಲವು ಶಾಸಕರು ರಾಜೀನಾಮೆ ನೀಡಲಿದ್ದಾರೆ.ಆಗ ಮೈತ್ರಿ ಸರಕಾರದ ಸಂಖ್ಯಾಬಲ ಅಲ್ಪ ಮೊತ್ತಕ್ಕೆ ಕುಸಿದು ಸಕರ್ಾರದ ಭವಿಷ್ಯಕ್ಕೆ ಕುತ್ತು ಬರಲಿದೆ ಎಂದು ಭಾವಿಸಲಾಗಿತ್ತು.
ಆದರೆ, ದೋಸ್ತಿಗಳ ಪ್ರತಿ ತಂತ್ರದ ಪರಿಣಾಮ ಶಾಸಕರೂ ರಾಜೀನಾಮೆ ಕೊಡದಿರುವುದರಿಂದ ಮೈತ್ರಿ ನಾಯಕರು ಯಾವುದೇ ಭೀತಿ ಇಲ್ಲದೆ ನಿಶ್ಚಿಂತೆಯಲ್ಲಿದ್ದಾರೆ. ರಮೇಶ ಜಾರಕಿ ಹೊಳಿ ರಾಜೀನಾಮೆ ನೀಡಿದ ತಕ್ಷಣ ಅವರ ಆಪ್ತ ಶಾಸಕ ಮಹೇಶ್ ಕುಮಟಳ್ಳಿ, ಶ್ರೀಮಂತಪಾಟೀಲ್, ಪ್ರತಾಪ್ ಗೌಡ ಪಾಟೀಲ್, ನಾಗೇಂದ್ರ ಮತ್ತಿತರ ಶಾಸಕರು ರಾಜೀನಾಮೆ ನೀಡಲಿದ್ದಾರೆಂದು ಹೇಳಲಾಗಿತ್ತು. ಮಂಗಳವಾರ ಒಂದು ದಿನ ಬೆಳಿಗ್ಗೆ ಶಾಸಕ ಆನಂದ್ ಸಿಂಗ್ ಹಾಗೂ ಮಧ್ಯಾಹ್ನ ರಮೇಶ ಜಾರಕಿಹೊಳಿ ರಾಜೀನಾಮೆ ನೀಡಿದಾಗ ಮುಖ್ಯಮಂತ್ರಿ ಕುಮಾರಸ್ವಾಮಿ ಮತ್ತು ಮಾಜಿ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಸಕರ್ಾರ ಪತನವಾಗಲಿದೆಯೇ ಎಂಬ ಆತಂಕಕ್ಕೊಳಗಾಗಿದ್ದರು. ಸಕರ್ಾರ ಉಳಿಸಿಕೊಳ್ಳಲು ಆಪರೇಷನ್ ಕಮಲಕ್ಕೆ ಪ್ರತಿ ತಂತ್ರ ಹೆಣೆಯುತ್ತಿದ್ದರು. ಕಳೆದ ಮೂರು ದಿನಗಳ ರಾಜಕೀಯ ಚಟುವಟಿಕೆಗಳನ್ನು ಗಮನಿಸಿದರೆ ಸದ್ಯಕ್ಕೆ ಅತೃಪ್ತ ಶಾಸಕರು ರಾಜೀನಾಮೆ ನೀಡುವ ಯಾವ ಲಕ್ಷಣಗಳೂ ಕಾಣುತ್ತಿಲ್ಲ.
ಮೈತ್ರಿ ಸರಕಾರಕ್ಕೆ ಯಾವುದೇ ಅಪಾಯ ಎದುರಾಗುವ ಸಾಧ್ಯತೆಗಳೂ ಕಾಣುತ್ತಿಲ್ಲ ಎಂದು ಹೇಳಲಾಗುತ್ತಿದೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 