ಬಳ್ಳಾರಿ

ಉಪಚುನಾವಣೆಯಲ್ಲಿ ಬಿಜೆಪಿಗೆ ತಕ್ಕ ಪಾಠ ಕಲಿಸಬೇಕು

ಉಪಚುನಾವಣೆಯಲ್ಲಿ ಬಿಜೆಪಿಗೆ ತಕ್ಕ ಪಾಠ ಕಲಿಸಬೇಕು


ಉಪಚುನಾವಣೆಯಲ್ಲಿ ಬಿಜೆಪಿಗೆ ತಕ್ಕ ಪಾಠ ಕಲಿಸಬೇಕು 

ಬಳ್ಳಾರಿ 11: ಸಂಡೂರು ಉಪ ಚುನಾವಣೆಯ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷದ ವತಿಯಿಂದ ಸಂಡೂರು ನಗರದ 16ನೇ ವಾರ್ಡ್‌ನಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಕೆಪಿಸಿಸಿ ಉಪಾಧ್ಯಕ್ಷ ಹುಸೇನ್‌ಸಾಬ್, ಐಎನ್‌ಟಿಯುಸಿ ಜಿಲ್ಲಾಧ್ಯಕ್ಷ ಕೆ.ತಾಯಪ್ಪ ಸೇರಿದಂತೆ ಅನೇಕ ಮುಖಂಡರು ಮತ್ತು ಕಾರ್ಯಕರ್ತರು ಸಂಡೂರು ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಅನ್ನಪೂರ್ಣ ಅವರ ಪರ ಭರ್ಜರಿ ಮತಯಾಚನೆ ಮಾಡಿದರು. ಈ ಮಾತನಾಡಿದ ಮುಖಂಡರು ಕಾಂಗ್ರೆಸ್ ಸರ್ಕಾರದಲ್ಲಿ ಸಂಡೂರು ಸಮಗ್ರ ಅಭಿವೃದ್ಧಿಗೆ ಪಕ್ಷದ ಅಭ್ಯರ್ಥಿ ಪಣ ತೊಟ್ಟಿರುವುದಾಗಿ, ಬಿಜೆಪಿಯವರು ವಿನಾಕಾರಣ ಮುಖ್ಯಮಂತ್ರಿ ಮತ್ತು ಕಾಂಗ್ರೆಸ್ ಸರ್ಕಾರದ ವಿರುದ್ಧ ಗೂಬೆ ಕೂರಿಸುತ್ತಿದ್ದಾರೆ ಎಂದು ಟೀಕಿಸಿದರು. ಸಂಡೂರು ಉಪಚುನಾವಣೆಯಲ್ಲಿ ಬಿಜೆಪಿಗೆ ತಕ್ಕ ಪಾಠ ಕಲಿಸಬೇಕೆಂದು ವಿನಂತಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಅಕ್ಷಯ ಲಾಡ್, ಪುರಸಭೆ ಅಧ್ಯಕ್ಷೆ ಆಶಾಲತಾ ಸೋಮಪ್ಪ, ಮುಖಂಡರಾದ ಚೇತನ ತುಕಾರಾಮ್, ಸಿ.ಹೆಚ್‌.ಕಾಶೀಂಪೀರಾ, ನಬಿ, ಸಮೀವುಲ್ಲಾ ಶೇಖ್, ಜಮೀರ್, ಜಾಫರ್, ಡಾ. ಶ್ರೀಧರ್, ನಾಗರಾಜ್, ರಮೇಶ್ ಸೇರಿದಂತೆ ಹಲವಾರು ಕಾರ್ಯಕರ್ತರು ಉಪಸ್ಥಿತರಿದ್ದರು. 


ಸುದ್ದಿ ಓದಿ