ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಸೇರ್ಪಡೆ
ಬೈಲಹೊಂಗಲ 30: ಶಾಸಕ ಮಹಾಂತೇಶ ಕೌಜಲಗಿ ಅವರ ಜನಪರ ಕಾರ್ಯವನ್ನು ಮೆಚ್ಚಿ ಆನಿಗೋಳ ಗ್ರಾಮದ ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಪಕ್ಷ ಸೇರ್ಪಡೆಗೊಂಡರು. ಶಾಸಕ ಮಹಾಂತೇಶ ಕೌಜಲಗಿ ಅವರು ಕಳೆದ 4 ವರ್ಷಗಳಲ್ಲಿ ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಶ್ರಮಿಸುತ್ತಿದ್ದು ಇವರ ಕ್ರೀಯಾಶೀಲತೆಯನ್ನು ಮೆಚ್ಚಿ ಯುವಕರ ಗುಂಪು ಕಾಂಗ್ರೆಸ್ ಪಕ್ಷ ಸೇರ್ಪಡೆಯಾದರು. ಶಾಸಕ ಮಹಾಂತೇಶ ಕೌಜಲಗಿ ಕಾಂಗ್ರೆಸ್ ಪಕ್ಷದ ಶಾಲು ಹೊದಿಸಿ ಪಕ್ಷಕ್ಕೆ ಬರಮಾಡಿಕೊಂಡು ಪಕ್ಷದ ಸಂಘಟನೆಯಲ್ಲಿ ತೊಡಗಿಸಿಕೊಳ್ಳಬೇಕೆಂದು ಕರೆ ನೀಡಿದರು