ಪಾಕಿಸ್ತಾನದಲ್ಲಿ ಬಾಂಬ್ ಸ್ಫೋಟ: 5 ಸಾವು
ಇಸ್ಲಾಮಾಬಾದ್, ಮಾರ್ಚ್ 6:ಪಾಕಿಸ್ತಾನದ ನೈರುತ್ಯ ಬಲೂಚಿಸ್ತಾನ್ ಪ್ರಾಂತ್ಯದ ಸಿಬಿ ಜಿಲ್ಲೆಯಲ್ಲಿ ಸಂಭವಿಸಿದ ನೆಲ ಬಾಂಬ್ ಸ್ಫೋಟದಲ್ಲಿ ಐವರು ಸಾವನ್ನಪ್ಪಿದ್ದು, ಇತರೆ ಐದು ಮಂದಿ ಗಾಯಗೊಂಡಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.ಜಿಲ್ಲೆಯ ಬಾಬರ್ ಕಾಚ್ ಪ್ರದೇಶದಲ್ಲಿ ಕಾರ್ಮಿಕರನ್ನು ಕರೆದೊಯ್ಯುವ ವಾಹನ ಬಾಂಬ್ ನಿಂದ ಸ್ಪೋಟಗೊಂಡಿದೆ ಎಂದು ಜಿಲ್ಲಾ ಜಿಲ್ಲಾಧಿಕಾರಿ ಯಾಸಿರ್ ಖಾನ್ ಬಜಾಯ್ ಸ್ಥಳೀಯ ಮಾಧ್ಯಮಗಳಿಗೆ ತಿಳಿಸಿದ್ದಾರೆ. ರಕ್ಷಣಾ ತಂಡಗಳು ಮತ್ತು ಭದ್ರತಾ ಪಡೆಗಳು ಸ್ಥಳಕ್ಕೆ ಧಾವಿಸಿ ಶವಗಳನ್ನು ಮತ್ತು ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗೆ ಸ್ಥಳಾಂತರಿಸಿವೆ "ನಾಲ್ವರು ಕಾರ್ಮಿಕರು ಸ್ಥಳದಲ್ಲೇ ಮತ್ತೊಬ್ಬರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎಂದು ಅಧಿಕಾರಿ ಹೇಳಿದರು. ಭದ್ರತಾ ಪಡೆಗಳು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕಾರ್ಯಾಚರಣೆ ಪ್ರಾರಂಭಿಸಿವೆ. ಸದ್ಯ ಯಾವುದೇ ಗುಂಪು ಅಥವಾ ವ್ಯಕ್ತಿ ಈ ಸ್ಫೋಟದ ಹೊಣೆ ಹೊತ್ತುಕೊಂಡಿಲ್ಲ .