ರಾಮ ಮಂದಿರದ 15 km ವ್ಯಾಪ್ತಿಯಲ್ಲಿ ಮಾಂಸಾಹಾರ ಪೂರೈಕೆ ನಿಷೇಧ
Ban on supply of non-vegetarian food within 15 km radius of Ram temple
ಅಯೋಧ್ಯೆ (ಉತ್ತರ ಪ್ರದೇಶ): ಅಯೋಧ್ಯೆಯ ರಾಮ ಮಂದಿರದ 15 ಕಿ.ಮೀ ವ್ಯಾಪ್ತಿಯಲ್ಲಿ ಮಾಂಸಾಹಾರಿ ಆಹಾರ ಪದಾರ್ಥಗಳ ವಿತರಣೆಯನ್ನು ನಿಷೇಧಿಸಿ ಅಯೋಧ್ಯೆ ಆಡಳಿತ ಮಂಡಳಿ ಆದೇಶ ಹೊರಡಿಸಿದೆ.
‘ಪಂಚಕೋಶಿ ಪರಿಕ್ರಮ’ದ ಅಡಿಯಲ್ಲಿ ಗುರುತಿಸಲಾದ ಪ್ರದೇಶಗಳಲ್ಲಿ ಮಾಂಸಾಹಾರಿ ಆಹಾರ ಪದಾರ್ಥಗಳನ್ನು ಪೂರೈಸುವ ಆನ್ಲೈನ್ ವೇದಿಕೆಗಳ ವಿರುದ್ಧ ಪದೇ ಪದೇ ದೂರುಗಳು ಬಂದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಅಯೋಧ್ಯೆಯಲ್ಲಿರುವ ಕೆಲವು ಹೋಟೆಲ್ಗಳು ಮತ್ತು ಹೋಂ ಸ್ಟೇಗಳಲ್ಲಿ ಅತಿಥಿಗಳಿಗೆ ಮಾಂಸಾಹಾರಿ ಆಹಾರ ಮತ್ತು ಮದ್ಯ ಪೂರೈಸಲಾಗುತ್ತಿದೆ ಎಂಬ ದೂರುಗಳು ಕೇಳಿ ಬಂದಿದ್ದವು. ಈ ಕುರಿತು ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸುವಂತೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಆದೇಶ ಜಾರಿಗೊಳಿಸಲಾಗಿದೆ ಎಂದೂ ಅವರು ಮಾಹಿತಿ ನೀಡಿದ್ದಾರೆ.
ಅಯೋಧ್ಯೆ ಮತ್ತು ಫೈಜಾಬಾದ್ ಅನ್ನು ಸಂಪರ್ಕಿಸುವ 14 ಕಿ.ಮೀ. ರಾಮಪಥದಲ್ಲಿ ಮದ್ಯ ಮತ್ತು ಮಾಂಸ ಮಾರಾಟವನ್ನು ನಿಷೇಧಿಸಲು ಅಯೋಧ್ಯ ಮಹಾನಗರ ಪಾಲಿಕೆಯು 2025ರ ಮೇಯಲ್ಲಿ ನಿರ್ಧಾರ ತೆಗೆದುಕೊಂಡಿದ್ದರೂ, ಈ ಒಂಬತ್ತು ತಿಂಗಳಲ್ಲಿ ಮದ್ಯ ಮಾರಾಟದ ಮೇಲಿನ ನಿಷೇಧವನ್ನು ಅಷ್ಟೇನೂ ಜಾರಿಗೆ ತಂದಿರಲಿಲ್ಲ. ಈ ಪ್ರದೇಶಗಳಲ್ಲಿ ಎರಡು ಡಜನ್ಗೂ ಹೆಚ್ಚು ಅಂಗಡಿಗಳಲ್ಲಿ ಮದ್ಯ ಮಾರಾಟ ಮಾಡಲಾಗುತ್ತಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.
ಫೈಜಾಬಾದ್ನ ರೋಸ್ ಸೇರಿದಂತೆ ರಾಮಪಥದ ಉದ್ದಕ್ಕೂ ಇರುವ ಮಾಂಸದ ಅಂಗಡಿಗಳನ್ನು ಮುಚ್ಚಿಸಲಾಗಿದೆ. ಆದರೆ, ಮದ್ಯದಂಗಡಿಗಳ ವಿರುದ್ಧ ಕ್ರಮ ಕೈಗೊಳ್ಳಲು ಜಿಲ್ಲಾಡಳಿತದ ಅನುಮತಿ ಅಗತ್ಯವಿದೆ ಎಂದು ಪುರಸಭೆ ಅಧಿಕಾರಿಯೊಬ್ಬರು ವಿವರಿಸಿದ್ದಾರೆ.
ನಿಷೇಧದ ಹೊರತಾಗಿಯೂ ಆನ್ಲೈನ್ ವೇದಿಕೆಗಳ ಮೂಲಕ ಪ್ರವಾಸಿಗರಿಗೆ ಮಾಂಸಾಹಾರಿ ಪದಾರ್ಥಗಳನ್ನು ತಲುಪಿಸಲಾಗುತ್ತಿದೆ ಎಂಬ ದೂರುಗಳು ಬಂದಿವೆ ಎಂದು ಸಹಾಯಕ ಆಹಾರ ಆಯುಕ್ತ ಮಾಣಿಕ್ ಚಂದ್ರ ಸಿಂಗ್ ಹೇಳಿದ್ದಾರೆ.
ದೂರುಗಳನ್ನು ಆಧರಿಸಿ ಆನ್ಲೈನ್ ವೇದಿಕೆಗಳ ಮೂಲಕ ಮಾಂಸಾಹಾರಿ ಆಹಾರ ಪೂರೈಸುವುದನ್ನು ನಿಷೇಧಿಸಲಾಗಿದೆ. ಈ ಕುರಿತು ಹೋಟೆಲ್ಗಳು, ಹೋಂ ಸ್ಟೇಗಳು ಮತ್ತು ಆನ್ಲೈನ್ ವೇದಿಕೆಗಳಗಳಿಗೆ ಮಾಹಿತಿ ನೀಡಲಾಗಿದೆ ಎಂದಿದ್ದಾರೆ.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 