ಶ್ರೀಶೈಲ ಶ್ರೀಗಳ ಆಶೀರ್ವಾದ ಪಡೆದ ಬಸವರಾಜ ಹಳಿಂಗಳಿ
Basavaraja Halingali received the blessings of Srisailam Sri
ಯಡೂರು 11: ಬೆಳಗಾವಿ ಜಿಲ್ಲಾ ಶಾಲಾಹಿಕಾಲೇಜುಗಳ ಅನುದಾನಿತ ನೌಕರರ ಸಂಘದ ಅಧ್ಯಕ್ಷರಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ಬಸವರಾಜ ಹಳಿಂಗಳಿ ಅವರು, ಯಡೂರಿನಲ್ಲಿ ನಡೆದ ಮಹಾಕುಂಭೋತ್ಸವದಲ್ಲಿ ಶ್ರೀಶೈಲ ಪೀಠದ ಜಗದ್ಗುರು ಡಾ. ಚನ್ನಸಿದ್ಧರಾಮ ಶಿವಾಚಾರ್ಯ ಮಹಾಸ್ವಾಮಿಗಳು ಭೇಟಿಯಾಗಿ ಆಶೀರ್ವಾದ ಪಡೆದರು.
ಈ ವೇಳೆ ಶ್ರೀಗಳು ಮಾತನಾಡಿ, ಶಿಕ್ಷಕರ ಮತ್ತು ನೌಕರರ ಸಮಸ್ಯೆಗಳಿಗೆ ಸ್ಪಂದಿಸುವುದರ ಜೊತೆಗೆ ಶಿಕ್ಷಣ ಕ್ಷೇತ್ರದ ಅಭಿವೃದ್ಧಿಗೆ ಪೂರಕವಾದ ವಾತಾವರಣ ನಿರ್ಮಾಣವಾಗಲಿ ಎಂದು ಹಾರೈಸಿದರು. ಸಂಘದ ಮುಖಾಂತರ ಶೈಕ್ಷಣಿಕ ಪ್ರಗತಿಗೆ ಹೆಚ್ಚಿನ ಸೇವೆ ಸಲ್ಲಿಸುವಂತೆ ಬಸವರಾಜ ಹಳಿಂಗಳಿ ಅವರಿಗೆ ಶುಭಾಶಯ ಕೋರಿದರು. ಈ ಸಂದರ್ಭದಲ್ಲಿ ಹಿರಿಯರಾದ ಕಲ್ಲಪ್ಪಣ್ಣ ಗಾಣಿಗೇರ, ರಾಜು ರಾಚಣ್ಣವರ, ಪ್ರಕಾಶ ಗಿರಿಮಲ್ಲನವರ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 