ಮನವೊಲಿಕೆ ಕಸರತ್ತು ಆರಂಭ: ಎಂಟಿಬಿ ನಿವಾಸಕ್ಕೆ ಡಿಕೆಶಿ ಭೇಟಿ
ಬೆಂಗಳೂರು: ಸರ್ಕಾರದ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ವಸತಿ ಸಚಿವ ಎಂಬಿಟಿ ನಾಗರಾಜ್ ಅವರ ನಿವಾಸಕ್ಕೆ ಶನಿವಾರ ಬೆಳಗ್ಗೆ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಭೇಟಿ ನೀಡಿ ಮಾತುಕತೆ ನಡೆಸಿದ್ದಾರೆ.
ಶುಕ್ರವಾರ ನಡೆದ ವಿಧಾನಸಭೆಯ ಕಲಾಪದಲ್ಲಿ ವಿಶ್ವಾಸಮತ ಯಾಚಿಸುತ್ತೇನೆ ಎಂದು ಸ್ವಯಂ ಹೇಳಿಕೆ ನೀಡಿದ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಇದೀಗ ಮೈತ್ರಿ ಸರ್ಕಾರ ಉಳಿಸಿಕೊಳ್ಳಲು ಕಸರತ್ತು ಆರಂಭಿಸಿದ್ದು, ಅವರ ಸೂಚನೆಯ ಮೇರೆಗೆ ಡಿಕೆಶಿ ಅತೃಪ್ತರ ಮನವೊಲಿಕೆ ಮಾಡಲು ಕಣಕ್ಕಿಳಿಸಿದ್ದಾರೆ ಎಂದು ತಿಳಿದುಬಂದಿದೆ. ಇಂದು ಮುಂಜಾನೆ 5 ಗಂಟೆ ಸುಮಾರಿಗೆ ಡಿ.ಕೆ. ಶಿವಕುಮಾರ್ ಅವರು ಎಂಟಿಬಿ ನಾಗರಾಜ್ ಅವರ ನಿವಾಸಕ್ಕೆ ಬಂದಿದ್ದಾರೆ. ಬೆಂಗಳೂರಿನ ಹೊರವಲಯದಲ್ಲಿರುವ ಎಂಟಿಬಿ ನಿವಾಸಕ್ಕೆ ಕುಣಿಗಲ್ ಶಾಸಕ ಡಾ.ರಂಗನಾಥ್, ವಿಧಾನ ಪರಿಷತ್ ಸದಸ್ಯ ಎಸ್. ರವಿ ಅವರೊಂದಿಗೆ ಭೇಟಿ ನೀಡಿದ ಶಿವಕುಮಾರ್, ಸುಮಾರು ಎರಡು ಗಂಟೆಗಳ ಕಾಲ ಮಾತುಕತೆ ನಡೆಸಿ ಎಂಬಿಟಿ ಅವರ ಮನವೊಲಿಸಿದ್ದಾರೆ ಎನ್ನಲಾಗಿದೆ. ಈ ವೇಳೆ ನಾಗರಾಜ್ ಅವರು ಕುಮಾರಸ್ವಾಮಿ ಮತ್ತು ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ಅವರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ನಿಮ್ಮ ಎಲ್ಲಾ ಸಮಸ್ಯೆ, ಬೇಸರವನ್ನು ಸರಿಪಡಿಸಲಾಗುವುದು. ಇನ್ನು ಮುಂದೆ ನಿಮಗೆ ಯಾವುದೇ ಸಮಸ್ಯೆಯಾಗದಂತೆ ನೋಡಿಕೊಳ್ಳುವುದಾಗಿ ಡಿಕೆಶಿ ಭರವಸೆ ನೀಡಿದ್ದಾರೆ ಎಂದು ತಿಳಿದುಬಂದಿದೆ. ಎಂಟಿಬಿ ನಾಗರಾಜ್ ಮತ್ತು ಡಾ. ಸುಧಾಕರ್ ಬುಧವಾರ ಸ್ಪೀಕರ್ ಕಚೇರಿಗೆ ತೆರಳಿ ತಮ್ಮ ರಾಜೀನಾಮೆ ಸಲ್ಲಿಸಿದ್ದರು. ಆದರೆ ಅವರು ಅತೃಪ್ತ ಶಾಸಕರೊಂದಿಗೆ ಮುಂಬೈಗೆ ತೆರಳದೆ ಬೆಂಗಳೂರಿನಲ್ಲಿಯೇ ಉಳಿದಿದ್ದರು. ಒಂದು ಹಂತದಲ್ಲಿ ಎಂಟಿಬಿ ನಾಗರಾಜ್, ತಮಗೆ ರಾಜಕೀಯದಿಂದಲೇ ನಿವೃತ್ತಿ ಪಡೆಯುತ್ತೇನೆ ಎಂದು ಹೇಳಿಕೆ ನೀಡಿದ್ದರು.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 