ಬಳ್ಳಾರಿ: ಪ್ರಧಾನ ಮಂತ್ರಿ ಕಿಸಾನ್ ನಿಧಿ ಯೋಜನೆ ನೋಂದಣಿ ಮಾಡಿಕೊಳ್ಳಲು ಡಿಸಿ ನಕುಲ್ ರೈತರಿಗೆ ಮನವಿ
ಲೋಕದರ್ಶನ ವರದಿ
ಬಳ್ಳಾರಿ 24: ಪ್ರಧಾನ ಮಂತ್ರಿ ಕಿಸಾನ್ ನಿಧಿ ಯೋಜನೆಯನ್ನು ಭಾರತ ಸರ್ಕಾರವು ಜೂನ್ 07ರಂದು ಪ್ರಕಟಿಸಿದ ಸುತ್ತೋಲೆಯಂತೆ ಸಾಗುವಳಿ ಭೂಮಿ ಹೊಂದಿರುವ ಎಲ್ಲಾ ರೈತರಿಗೆ ವರ್ಷಕ್ಕೆ 6 ಸಾವಿರ ರೂ.ಗಳ ಪ್ರತಿ ನಾಲ್ಕು ತಿಂಗಳಿಗೊಮ್ಮೆಯಂತೆ ಒಟ್ಟು 3 ಸಮಾನ ಕಂತುಗಳನ್ನು ನೀಡಲಾಗುತ್ತಿದ್ದು, ಈ ಯೋಜನೆಯನ್ನು ಪಡೆದುಕೊಳ್ಳಲು ಜೂನ್ 27 ರಂದು ಕೊನೆಯ ದಿನವಾಗಿರುತ್ತದೆ. ರೈತರು ಕೂಡಲೇ ನೋಂದಣಿ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ಮನವಿ ಮಾಡಿದ್ದಾರೆ.
ಈ ಯೋಜನೆಯನ್ನು ಪಡೆಯಲು ಯಾವುದೇ ಸರ್ಕಾರಿ ಸ್ವಾಮ್ಯದ ಕೇಂದ್ರಗಳಾದ ಗ್ರಾಪಂ ಬಾಪೂಜೀ ಸೇವಾ ಕೇಂದ್ರಗಳು ಹಾಗೂ ಗ್ರಾಮ ಲೆಕ್ಕಾಧಿಕಾರಿಗಳ ಕಚೇರಿ, ಹೋಬಳಿಯ ರೈತ ಸಂಪರ್ಕ ಕೇಂದ್ರಗಳು, ಅಟಲ್ ಜೀ ಜನಸ್ನೇಹಿ ಕೇಂದ್ರಗಳಲ್ಲಿ ಸಂಪಕರ್ಿಸಿ ನೊಂದಣಿ ಮಾಡಿಕೊಳ್ಳಬಹುದು ಎಂದು ಅವರು ವಿವರಿಸಿದ್ದಾರೆ.
ರೈತರು ಸ್ವಯಂ ಘೋಷಿತ ದೃಢಿಕೃತ ಪತ್ರದಲ್ಲಿ ಆಧಾರ್ ಕಾರ್ಡ, ಪಹಣಿ ಸಂಖ್ಯೆ ಮಾಹಿತಿ, ಬ್ಯಾಂಕ್ ಖಾತೆ ಪಾಸ್ಬುಕ್ ಹಾಗೂ ಇತರೆ ದಾಖಲೆಗಳೊಂದಿಗೆ ಜೂ.27ರೊಳಗಾಗಿ ಅರ್ಜಿ ಸಲ್ಲಿಸಬೇಕು ಎಂದು ತಿಳಿಸಿರುವ ಜಿಲ್ಲಾಧಿಕಾರಿ ನಕುಲ್ ಅವರು ಹೆಚ್ಚಿನ ಮಾಹಿತಿಗೆ ಆಯಾ ಗ್ರಾಮ ಲೆಕ್ಕಾಧಿಕಾರಿಗಳ ಕಚೇರಿ, ಗ್ರಾಮ ಪಂಚಾಯಿತಿ, ಹೋಬಳಿಯ ನಾಡ ಕಚೇರಿ ಹಾಗೂ ರೈತ ಸಂಪರ್ಕ ಕೇಂದ್ರಗಳಲ್ಲಿ ಸಂಪರ್ಕಿಸಬಹುದು
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 