ಬಳ್ಳಾರಿ: ಮತದಾನ ಮಾಡಿ ಪ್ರಜಾಪ್ರಭುತ್ವ ಹಬ್ಬ ಯಶಸ್ವಿಗೊಳಿಸಿ: ತುಷಾರಮಣಿ
ಲೋಕದರ್ಶನ ವರದಿ
ಬಳ್ಳಾರಿ 21: ಅಮೂಲ್ಯವಾಗಿರುವ ತಮ್ಮ ಮತವನ್ನು ಏ.23ರಂದು ಅತ್ಯಂತ ವಿವೇಚನಾಯುಕ್ತವಾಗಿ ಯೋಗ್ಯ ಅಭ್ಯಥರ್ಿಗೆ ಮತಚಲಾಯಿಸಿ ಮತ್ತು ಮುಕ್ತ, ನಿರ್ಭಿತಿಯಿಂದ ಬಂದು ಮತದಾನ ಮಾಡಿ ಪ್ರಜಾಪ್ರಭುತ್ವ ಹಬ್ಬ ಯಶಸ್ವಿಗೊಳಿಸಿ ಎಂದು ಸಹಾಯಕ ಚುನಾವಣಾಧಿಕಾರಿಗಳು ಹಾಗೂ ಮಹಾನಗರ ಪಾಲಿಕೆ ಆಯುಕ್ತರಾದ ತುಷಾರಮಣಿ ಹೇಳಿದರು. ಬಳ್ಳಾರಿ ಲೋಕಸಭಾ ಚುನಾವಣಾ ಹಿನ್ನೆಲೆ ಮತದಾನ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ನಗರದ ಎಚ್.ಆರ್.ಗವಿಯಪ್ಪ ವೃತ್ತದಲ್ಲಿ ಏರ್ಪಡಿಸಿದ್ದ ಕನ್ನಡ ಚಿತ್ರಗೀತೆಗಳ ಗಾಯನ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಚಾಲನೆ ನೀಡಿ ಮಾತನಾಡಿದರು.
ಯಾವುದೇ ರೀತಿಯ ಆಮಿಷಗಳಿಗೆ ಮರಳುಗಾದೇ ದೇಶದ ಭವಿಷ್ಯ ಹಾಗೂ ಅಭಿವೃದ್ಧಿ ಹಿತದೃಷ್ಟಿಯಿಂದ ಮತಚಲಾಯಿಸಿ ಎಂದು ಹೇಳಿದ ಅವರು ವೋಟರ್ ಸ್ಲೀಪ್ ಇರದಿದ್ದರೂ ಪರವಾಗಿಲ್ಲ. ಚುನಾವಣಾ ಆಯೋಗ ತಿಳಿಸಿದ 11 ದಾಖಲೆಗಳಲ್ಲಿ ಒಂದು ದಾಖಲೆಯಿದ್ದರೂ ಸಾಕು ಅದನ್ನು ತೆಗೆದುಕೊಂಡು ಮತಗಟ್ಟೆಗೆ ಹೋಗಿ ಮತದಾನ ಮಾಡಿ ಎಂದರು.
ಮತಗಟ್ಟೆಗಳಲ್ಲಿ ನೀರು, ನೆರಳು ಸೇರಿದಂತೆ ಅಗತ್ಯ ವ್ಯವಸ್ಥೆಗಳನ್ನು ಮಾಡಲಾಗಿದೆ. ಚುನಾವಣಾ ಅಕ್ರಮಗಳನ್ನ ತಡೆಗಟ್ಟುವ ಸಲುವಾಗಿ ಸಾರ್ವಜನಿಕರ ಸಹಭಾಗಿತ್ವ ಅಗತ್ಯ ಎಂದು ಪರಿಭಾವಿಸಿದ ಚುನಾವಣಾ ಆಯೋಗ ಸಿ-ವಿಜಲ್ ಆಪ್ ಅಭಿವೃದ್ಧಿಪಡಿಸಿದ್ದು ಅದರ ಮೂಲಕವೂ ಅಕ್ರಮಕ್ಕೆ ಸಂಬಂಧಿಸಿದ ದೂರುಗಳು ನೀಡಬಹುದಾಗಿದೆ ಎಂದರು. ಇದೇ ಸಂದರ್ಭದಲ್ಲಿ ಕಡ್ಡಾಯ ಮತದಾನದ ಕುರಿತು ಪ್ರತಿಜ್ಞಾ ವಿಧಿಯನ್ನು ಅವರು ಬೋಧಿಸಿದರು.
ಈ ಸಂದರ್ಭದಲ್ಲಿ ಜಿಪಂ ಮುಖ್ಯ ಯೋಜನಾಧಿಕಾರಿ ಚಂದ್ರಶೇಖರ ಗುಡಿ, ಚುನಾವಣಾ ಆಯೋಗದ ಜಿಲ್ಲಾ ರಾಯಭಾರಿ, ಹಿರಿಯ ಕಲಾವಿದೆ ಸುಭದ್ರಮ್ಮ ಮನ್ಸೂರ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಬಿ.ಕೆ.ರಾಮಲಿಂಗಪ್ಪ, ಸಿಡಿಪಿಒ ಉಷಾ ಮತ್ತಿತರರು ಇದ್ದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ನಾಗರಾಜ ಅವರು ಸ್ವಾಗತಿಸಿದರು. ಅಮಾತಿ ಬಸವರಾಜ ನಿರೂಪಿಸಿದರು.