ಬಳ್ಳಾರಿ: ಚುನಾವಣಾ ಖರ್ಚು -ವೆಚ್ಚದ ಮೇಲೆ ಸೂಕ್ಷ್ಮ ನಿಗಾ ವಹಿಸಿ ಅಧಿಕಾರಿಗಳ ಹೇಳಿಕೆ

ಬಳ್ಳಾರಿ: ಚುನಾವಣಾ ಖರ್ಚು -ವೆಚ್ಚದ ಮೇಲೆ ಸೂಕ್ಷ್ಮ ನಿಗಾ ವಹಿಸಿ ಅಧಿಕಾರಿಗಳ ಹೇಳಿಕೆ

ಬಳ್ಳಾರಿ 29: ಬಳ್ಳಾರಿ ಲೋಕಸಭಾ ಚುನಾವಣೆಯನ್ನು ಅತ್ಯಂತ ಮುಕ್ತ,ನ್ಯಾಯಸಮ್ಮತವಾಗಿ ನಡೆಸುವ ನಿಟ್ಟಿನಲ್ಲಿ ಚುನಾವಣೆಗೆ ನಿಯೋಜಿತರಾದ ಎಲ್ಲ ಅಧಿಕಾರಿಗಳು ಕಂಕಣಬದ್ಧರಾಗಬೇಕು ಮತ್ತು ಅಭ್ಯಥರ್ಿಗಳ ಖರ್ಚುವೆಚ್ಚದ ಮೇಲೆ ಸೂಕ್ಷ್ಮ ನಿಗಾವಹಿಸಬೇಕು. ಪ್ರತಿನಿತ್ಯ ಅವರ ಖರ್ಚು -ವೆಚ್ಚಗಳನ್ನು ಚುನಾವಣಾ ವೆಚ್ಚ ಕೋಶಕ್ಕೆ ಸಲ್ಲಿಸಬೇಕು ಎಂದು ವೆಚ್ಚ ವೀಕ್ಷಕರಾಗಿ ಭಾರತ ಚುನಾವಣಾ ಆಯೋಗದಿಂದ ನಿಯೋಜಿತರಾಗಿ ಆಗಮಿಸಿದ ಹಿರಿಯ ಅಧಿಕಾರಿಗಳಾದ ಅನಿತಾ ಮಹಾದಾಸ್ ಮತ್ತು ಮನ್ವಿಶ್ಕುಮಾರ್ ಹೇಳಿದರು.

ಬಳ್ಳಾರಿ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಬಳ್ಳಾರಿ ಲೋಕಸಭಾ ಕ್ಷೇತ್ರದ ವ್ಯಾಪ್ತಿಯ 8 ವಿಧಾನಸಭಾ ಕ್ಷೇತ್ರಗಳ ಚುನಾವಣಾ ವೆಚ್ಚ ಅಧಿಕಾರಿಗಳು ಹಾಗೂ ಸಹಾಯಕ ಚುನಾವಣಾ ವೆಚ್ಚ ವೀಕ್ಷಕರ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಬ್ಯಾಂಕ್ಗಳ ಹಣ ವಗರ್ಾವಣೆಗೆ ಸಂಬಂಧಿಸಿದಂತೆ ನಿಗಾವಹಿಸಿ; ಸಂಶಯಾಸ್ಪದ ಹಣ ವಗರ್ಾವಣೆ ಕಂಡುಬಂದಲ್ಲಿ ಕೂಡಲೇ ಗಮನಕ್ಕೆ ತನ್ನಿ, ವೆಚ್ಚಕ್ಕೆ ಸಂಬಂಧಿಸಿದ ಮಾಹಿತಿಯನ್ನು ಪ್ರತಿನಿತ್ಯ ಕ್ರೋಢಿಕರಿಸಿ ಸಲ್ಲಿಸಿ, ಅತ್ಯಂತ ದೊಡ್ಡ ವಶಪಡಿಸಿಕೊಂಡ ಪ್ರಕರಣಗಳಿದ್ದಲ್ಲಿ ಕೂಡಲೇ ನಮ್ಮ ಗಮನಕ್ಕೆ ತನ್ನಿ; ನಾವು ಚುನಾವಣಾ ಆಯೋಗದ ಗಮನಕ್ಕೆ ತರಲು ಅನುಕೂಲವಾಗುತ್ತದೆ ಎಂದು ಅವರು ಹೇಳಿದರು.

ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿರುವ ಭಾರತದಲ್ಲಿ ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆ ನಡೆಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ. ಅದನ್ನು ಸಮರ್ಪಕವಾಗಿ ನಿಭಾಯಿಸಿ ಚುನಾವಣೆಯನ್ನು ಯಶಸ್ವಿಗೊಳಿಸೋಣ ಎಂದರು.

ಕ್ಷೇತ್ರದ ವಿವಿಧೆಡೆ ಭೇಟಿ ನೀಡಿ ಪರಿಶೀಲಿಸಲಾಗಿದ್ದು, ಚುನಾವಣೆಗೆ ಸಂಬಂಧಿಸಿದಂತೆ ಅಗತ್ಯ ಸಿದ್ಧತೆಗಳನ್ನು ಜಿಲ್ಲಾ ಚುನಾವಣಾಧಿಕಾರಿಗಳು ಸಮರ್ಪಕವಾಗಿ ಮಾಡಿದ್ದಾರೆ ಎಂದು ಖುಷಿ ವ್ಯಕ್ತಪಡಿಸಿದರು.

ಚುನಾವಾ ಆಯೋಗದ ಮಾರ್ಗಸೂಚಿಗಳು ಹಾಗೂ ಸುತ್ತೋಲೆಗಳ ಅನುಸಾರ ಸಮರ್ಪಕವಾಗಿ ಕೆಲಸ ಮಾಡಿ; ಯಾವುದೇ ಕಾರಣಕ್ಕೂ ನಿರ್ಲಕ್ಷ್ಯ ತೋರದಿರಿ ಎಂದರು. 

ಜಿಲ್ಲಾ ಚುನಾವಣಾಧಿಕಾರಿ ಡಾ.ವಿ.ರಾಮ್ ಪ್ರಸಾತ್ ಮನೋಹರ್ ಅವರು ಮಾತನಾಡಿ, ಬಳ್ಳಾರಿ ಲೋಕಸಭಾ ಚುನಾವಣೆಯನ್ನು ಅತ್ಯಂತ ಮುಕ್ತ ಮತ್ತು ಪಾರದರ್ಶಕವಾಗಿ ನಡೆಸುವ ನಿಟ್ಟಿನಲ್ಲಿ ಅಗತ್ಯ ಕ್ರಮಕೈಗೊಳ್ಳಲಾಗಿದೆ. ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ಫ್ಲೈಯಿಂಗ್ ಸ್ಕ್ವಾಡ್ ತಂಡಗಳು ಪ್ರತಿದಿನ ಮೂರು ಸರದಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದು,ಅವರಿಗೆ ಮ್ಯಾಜಿಸ್ಟ್ರೇಟ್ ಅಧಿಕಾರ ನೀಡಲಾಗಿದೆ. ಸಿ-ವಿಜಲ್ ಆ್ಯಪ್ ಬಳಕೆಯ ಬಗ್ಗೆ ಈಗಾಗಲೇ ತರಬೇತಿ ನೀಡಲಾಗಿದೆ. ಎಸ್ಎಸ್ಟಿ ಮತ್ತು ವಿಡಿಯೋ ಸರ್ವಲೈನ್ಸ್ ತಂಡಗಳು ಕಾರ್ಯನಿರ್ವಹಿಸುತ್ತಿವೆ. ಜಿಲ್ಲಾ ವೆಚ್ಚ ನಿಗಾಕೋಶ, ಎಂಸಿಎಂಸಿ, ದೂರು ಕೋಶ ಸೇರಿದಂತೆ ವಿವಿಧ ಸಮಿತಿಗಳು ಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿವೆ ಎಂದು ಅವರು ವಿವರಿಸಿದರು.

ಅನುಮತಿ ಪಡೆದುಕೊಳ್ಳದಿದ್ದಲ್ಲಿ ಕ್ರಮ: ವಿದ್ಯುನ್ಮಾನ ವಾಹಿನಿಗಳು, ಸೋಶಿಯಲ್ ಮಿಡಿಯಾ ಸೇರಿದಂತೆ ಎಲ್ಲ ಎಲೆಕ್ಟ್ರಾನಿಕ್ ಮಿಡಿಯಾಗಳಲ್ಲಿ ಜಾಹೀರಾತು ಪ್ರಕಟಿಸುವುದಕ್ಕೆ ಅನುಮತಿ ಕಡ್ಡಾಯವಾಗಿದೆ ಎಂಬುದನ್ನು ತಮ್ಮ ಮಾತುಗಳಲ್ಲಿ ಸ್ಪಷ್ಟಪಡಿಸಿದ ಜಿಲ್ಲಾ ಚುನಾವಣಾಧಿಕಾರಿ ಡಾ.ರಾಮ್ ಪ್ರಸಾತ್ ಮನೋಹರ್ ಅವರು, ಅನುಮತಿ ಪಡೆದುಕೊಂಡು ಪ್ರಕಟಿಸಿದ್ದು ಕಂಡುಬಂದಲ್ಲಿ ಪ್ರಕರಣ ದಾಖಲಿಸಲಾಗುವುದು ಎಂದು ಎಚ್ಚರಿಸಿದರು.

ಚುನಾವಣಾ ಕೆಲಸದಲ್ಲಿ ನಿರ್ಲಕ್ಷ್ಯ ಕಂಡುಬಂದಲ್ಲಿ ತಮ್ಮ ಕೆಲಸಕ್ಕೆ ಬೇರೆಯವರನ್ನು ನಿಯೋಜಿಸುವುದಕ್ಕಿಂತ ಮುಂಚೆ ತಮ್ಮ ಮೇಲೆ ಕ್ರಮಕೈಗೊಳ್ಳಲಾಗುತ್ತದೆ ಎಂದರು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿವರ್ಾಹಕ ಅಧಿಕಾರಿ ಕೆ.ನಿತೀಶ್, ಪ್ರೊಬೆಷನರಿ ಐಎಎಸ್ ಅಧಿಕಾರಿ ಕೆ.ಆರ್.ನಂದಿನಿ, ಚುನಾವಣಾ ವೆಚ್ಚಕೋಶದ ನೋಡಲ್ ಅಧಿಕಾರಿಗಳಾದ ಚನ್ನಪ್ಪ ಮತ್ತು ಸುನೀತಾ ಸಿದ್ರಾಮ್, ಎಂಸಿಎಂಸಿ ನೋಡಲ್ ಅಧಿಕಾರಿ ಬಿ.ಕೆ.ರಾಮಲಿಂಗಪ್ಪ, ಸಹಾಯಕ ಚುನಾವಣಾ ವೆಚ್ಚ ಅಧಿಕಾರಿಗಳು ಸಭೆಯಲ್ಲಿದ್ದರು.


ಸುದ್ದಿ ಓದಿ