ಬಳ್ಳಾರಿ: ಕಪ್ಪಗಲ್ಲು ಗ್ರಾಮಕ್ಕೆ ಜಿಪಂ ಸಿಇಓ ಭೇಟಿ

Bellary: GPM CEO visits Kappagallu village

ಬಳ್ಳಾರಿ: ಕಪ್ಪಗಲ್ಲು ಗ್ರಾಮಕ್ಕೆ ಜಿಪಂ ಸಿಇಓ ಭೇಟಿ 

ಬಳ್ಳಾರಿ 04: ತಾಲ್ಲೂಕಿನ ಕಪ್ಪಗಲ್ಲು ಗ್ರಾಮದಲ್ಲಿ ಇತ್ತೀಚೆಗೆ ಕೋಳಿ ಸಾಕಾಣಿಕೆ ಮಾಡುವ ಕೇಂದ್ರದಲ್ಲಿ ಅಸಹಜವಾಗಿ ಕೋಳಿಗಳು ಸಾವನ್ನಪ್ಪಿದ್ದ ಹಿನ್ನಲೆಯಲ್ಲಿ ಮಂಗಳವಾರ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹಾರೀಸ್ ಸುಮೇರ್ ಅವರು ಕೋಳಿ ಸಾಕಾಣಿಕೆ ಕೇಂದ್ರಕ್ಕೆ ಭೇಟಿ ನೀಡಿ ಪರೀಶೀಲನೆ ನಡೆಸಿದರು. 

ಸಾಕಾಣಿಕೆ ಕೇಂದ್ರ(ಕೋಳಿ ಫಾರಂ)ದ ಸುತ್ತಲೂ ಸ್ವಚ್ಛತೆ ಕಾಪಾಡಿಕೊಳ್ಳಬೇಕು. ಅಗತ್ಯ ಮುನ್ನೆಚ್ಚರಿಕೆ ಕ್ರಮ ವಹಿಸಬೇಕು ಎಂದು ಮಾಲೀಕರಿಗೆ ನಿರ್ದೇಶನ ನೀಡಿದರು. 

ಇದೇ ವೇಳೆ ಮಾತನಾಡಿದ ಅವರು, ಕೋಳಿ ಶೀತ(ಹಕ್ಕಿ ಜ್ವರ) ಜ್ವರವು ಸಾಂಕ್ರಾಮಿಕ ರೋಗವಲ್ಲ. ಜನರು ಯಾವುದೇ ರೀತಿಯಲ್ಲಿ ಆತಂಕ ಪಡುವ ಅಗತ್ಯವಿಲ್ಲ. ಸಾರ್ವಜನಿಕರು ಕೋಳಿ ಮಾಂಸ ಮತ್ತು ಮೊಟ್ಟೆಯನ್ನು ಚೆನ್ನಾಗಿ ಬೇಯಿಸಿ ಸೇವಿಸಬೇಕು ಎಂದು ತಿಳಿಸಿದರು. 

ಈ ಸಂದರ್ಭದಲ್ಲಿ ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯ ಉಪನಿರ್ದೇಶಕ ಡಾ.ಹನುಮಂತ ನಾಯ್ಕ ಕಾರಬಾರಿ, ಬಳ್ಳಾರಿ ತಾಲ್ಲೂಕು ಪಂಚಾಯಿತಿಯ ಇಒ ಮಡಗಿನ ಬಸಪ್ಪ, ಕಪ್ಪಗಲ್ಲು ಗ್ರಾಮದ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮಂಜುಳಾ ಹಾಗೂ ಸಾರ್ವಜನಿಕರು ಸ್ಥಳದಲ್ಲಿದ್ದರು.