ಬಳ್ಳಾರಿ: ಪ್ಯಾರಾ ಈಜುಗಾರ ಗೋಪಿಚಂದ್‌ಗೆ ಅಂತರಾಷ್ಟ್ರೀಯ ಬೆಳ್ಳಿ ಪದಕ
Bellary: Para swimmer Gopichand wins international silver medal
ಬಳ್ಳಾರಿ 23: ಬಳ್ಳಾರಿಯ ಪ್ಯಾರಾ ಈಜುಗಾರ ಗೋಪಿಚಂದ್ ಅವರಿಗೆ ಅಂತರಾಷ್ಟ್ರೀಯ ಮಟ್ಟದಲ್ಲಿ ಬೆಳ್ಳಿ ಪದಕ ಲಭಿಸಿದೆ. 2026ರ ಫೆ.16 ರಿಂದ 21 ರವರೆಗೆ ಆಸ್ಟ್ರೇಲಿಯಾದಲ್ಲಿ ನಡೆದ ವರ್ಲ್ಡ್ ಪ್ಯಾರಾ ಈಜು ಸ್ಪರ್ಧೆ ಚಾಂಪಿಯನ್‌ಶಿಪ್ ನಲ್ಲಿ ರಾಜ್ಯ ಪ್ರತಿನಿಧಿಸಿ ಬಳ್ಳಾರಿಯ ಗೋಪಿಚಂದ್ ಅವರು ಭಾಗವಹಿಸಿದ್ದರು.
ಅಲ್ಲಿ ಅವರು, 4-100 ಮೀಟರ್ ಮಿಡ್ ರಿಲೇ ಯಲ್ಲಿ ಎರಡನೇ ಸ್ಥಾನ ಅಲಂಕರಿಸುವ ಮೂಲಕ ಅಂತರಾಷ್ಟ್ರೀಯ ಬೆಳ್ಳಿ ಪದಕ ತಮ್ಮದಾಗಿಸಿಕೊಂಡಿದ್ದು, ಇದು ಬಳ್ಳಾರಿಗೆ ಜಿಲ್ಲೆಯ ಪ್ಯಾರಾ ಸ್ವಿಮ್ಮರ್ ನಲ್ಲಿ ಅಂತರಾಷ್ಟ್ರೀಯ ಮಟ್ಟದ ಮೊದಲನೇಯ ಪದಕವಾಗಿದೆ. ಪ್ಯಾರಾ ಈಜುಗಾರ ಗೋಪಿಚಂದ್ ಅವರಿಗೆ ಕೋಚ್ ಗಳಾದ ರಜನಿ ಲಕ್ಕಾ ಮತ್ತು ಶರತ್ ಗಾಯಕ್‌ವಾಡ್ ಅವರು ತರಬೇತಿ ನೀಡಿದ್ದರು.
ಈ ಸಾಧನೆಗೆ ಬಳ್ಳಾರಿ ಗ್ರಾಮೀಣ ಶಾಸಕ ಬಿ.ನಾಗೇಂದ್ರ, ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ, ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ., ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸುಮನ್ ಡಿ.ಪನ್ನೇಕರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹಾರೀಸ್ ಸುಮೇರ್ ಮತ್ತು ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ಕೆ.ಗ್ರೇಸಿ ಸೇರಿದಂತೆ ಜಿಲ್ಲಾಡಳಿತ ಅಭಿನಂದಿಸಿದೆ ಎಂದು ಪ್ರಕಟಣೆ ತಿಳಿಸಿದೆ.
ಬೆಳಗಾವಿಯ ಹೃದಯಭಾಗದಲ್ಲಿ ಚಿನ್ನಾಭರಣ ಅಂಗಡಿ ಲೂಟಿ : ಸ್ಥಳಕ್ಕೆ ಪೊಲೀಸರ ದೌಡು
ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಜೋಡಿ ಕೊಲೆ : ಗ್ರಾಮದಲ್ಲಿ ತ್ವೇಷಮಯ ವಾತಾವರಣ
ಪುನರ್ ಅಭಿವೃದ್ಧಿಗೊಂಡ ಚೆನ್ನೈ ಪಾರ್ಕ್ ಅಮೃತ್ ರೈಲು ನಿಲ್ದಾಣವನ್ನು ಜುಲೈ 17ರಂದು ಉದ್ಘಾಟಿಸಲಿರುವ ಪ್ರಧಾನಿ ಮೋದಿ
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ 