ಬಳ್ಳಾರಿ: ತಂಬಾಕು ನಿಯಂತ್ರಣ: ತರಬೇತಿ ಕಾರ್ಯಾಗಾರ
ಲೋಕದರ್ಶನ ವರದಿ
ಬಳ್ಳಾರಿ 25: ನಗರದಲ್ಲಿ ತಂಬಾಕು ಬಳಕೆ ಹೆಚ್ಚಾಗಿದ್ದು, ಕೋಟ್ಪಾ ಕಾಯ್ದೆ-2003 ಕುರಿತು ಹೆಚ್ಚಿನ ಅರಿವು ಮೂಡಿಸುವುದರ ಮೂಲಕ ಕಾಯ್ದೆಯನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಲು ಅಧಿಕಾರಿಗಳು ಮುಂದಾಗಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸದಸ್ಯ ಕಾರ್ಯದಶರ್ಿ ಅರ್ಜುನ್.ಎಸ್.ಮಲ್ಲೂರು ಅವರು ಹೇಳಿದರು.
ನಗರದ ಪೋಲಾ ರೆಸಿಡೆನ್ಸಿಯ ಪ್ಯಾರಡೇಸ್ ಹೋಟಲ್ನ ಸಭಾಂಗಣದಲ್ಲಿ ಗುರುವಾರದಂದು ಮಹಾನಗರ ಪಾಲಿಕೆ ಅಧಿಕಾರಿಗಳಿಗೆ ತಂಬಾಕು ನಿಯಂತ್ರಣ ಕಾಯಿದೆ 2003ರ ಪರಿಣಾಮಕಾರಿ ಅನುಷ್ಠಾನ, ಸಾಮಾಥ್ರ್ಯಭಿವೃದ್ಧಿ ಮತ್ತು ಮೇಲ್ವಿಚಾರಣೆಯ ಕುರಿತು ಏರ್ಪಡಿಸಿದ್ದ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಈ ಸಂದರ್ಭದಲ್ಲಿ ಪಾಲಿಕೆಯ ಆರೋಗ್ಯ ಅಧಿಕಾರಿ ಡಾ. ಹನುಮಂತಪ್ಪ, ಜಿಲ್ಲಾ ಸರ್ವೇಕ್ಷಣಾಧಿಕಾರಿಗಳಾದ ಡಾ. ಮರಿಯಂಬಿ ಮಾತನಾಡಿದರು.
ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಈಶ್ವರ್ ದಾಸಪ್ಪ ಅವರು ತಂಬಾಕು ಸೇವನೆಯಿಂದ ಉಂಟಾಗುವ ಆರೋಗ್ಯ ತೊಂದರೆಗಳ ಕುರಿತು ಹಾಗೂ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಸಲಹೆಗಾರ ದುರುಗಪ್ಪ ಎಸ್. ಮಾಚನೂರು ಕೋಟ್ಪಾ 2003 ಕಾಯಿದೆಯ ಕುರಿತು ವಿವರವಾದ ಉಪನ್ಯಾಸ ನೀಡಿದರು.
ಈ ಸಂದರ್ಭದಲ್ಲಿ ಪಾಲಿಕೆಯ ಆರೋಗ್ಯ ಮತ್ತು ಕಂದಾಯ ನಿರೀಕ್ಷಕರು, ಪರಿಸರ ಅಭಿಯಂತರರು, ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಪದಾಧಿಕಾರಿಗಳು, ಬೆಂಗಳೂರಿನ ಮಾಯಾ ಸಂಸ್ಥೆಯ ಪದಾಧಿಕಾರಿಗಳು ಸೇರಿದಂತೆ ಇತರರು ಇದ್ದರು.
ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಜೋಡಿ ಕೊಲೆ : ಗ್ರಾಮದಲ್ಲಿ ತ್ವೇಷಮಯ ವಾತಾವರಣ
ಪುನರ್ ಅಭಿವೃದ್ಧಿಗೊಂಡ ಚೆನ್ನೈ ಪಾರ್ಕ್ ಅಮೃತ್ ರೈಲು ನಿಲ್ದಾಣವನ್ನು ಜುಲೈ 17ರಂದು ಉದ್ಘಾಟಿಸಲಿರುವ ಪ್ರಧಾನಿ ಮೋದಿ
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ
ಗಿಲ್ ಗಾಯದ ಆತಂಕದ ನಡುವೆ ಭಾರತಕ್ಕೆ ಏಕದಿನ ಸರಣಿ ಗೆಲ್ಲುವ ಅವಕಾಶ 