ಶಿವಸೇನೆ (ಯುಬಿಟಿ)ಗೆ ಬಿಗ್ ಶಾಕ್: ತೇಜಸ್ವಿ ಘೋಸಲ್ಕರ್ ಬಿಜೆಪಿಗೆ
Big shock for Shiv Sena (UBT): Tejaswi Ghosalkar joins BJP
ಮುಂಬೈ: ಬಹುನಿರೀಕ್ಷಿತ ಬೃಹನ್ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ (ಬಿಎಂಸಿ) ಚುನಾವಣೆಗೆ ಮುನ್ನ ಶಿವಸೇನಾ (ಯುಬಿಟಿ) ಪಕ್ಷಕ್ಕೆ ದೊಡ್ಡ ಹಿನ್ನಡೆಯಾಗಿದೆ. ಮಾಜಿ ಕಾರ್ಪೊರೇಟರ್ ತೇಜಸ್ವಿ ಘೋಸಲ್ಕರ್ ಅವರು ಸೋಮವಾರ ಅಧಿಕೃತವಾಗಿ ಭಾರತೀಯ ಜನತಾ ಪಕ್ಷಕ್ಕೆ (ಬಿಜೆಪಿ) ಸೇರ್ಪಡೆಗೊಂಡಿದ್ದಾರೆ.
ದಿವಂಗತ ಅಭಿಷೇಕ್ ಘೋಸಲ್ಕರ್ ಅವರ ಪತ್ನಿ ತೇಜಸ್ವಿ ಘೋಸಲ್ಕರ್ ಅವರು ಉತ್ತರ ಮುಂಬೈನ ದಹಿಸರ್ನಲ್ಲಿ ಶಿವಸೇನಾ (ಯುಬಿಟಿ) ಮಹಿಳಾ ವಿಭಾಗದ ಮುಖ್ಯಸ್ಥೆಯಾಗಿದ್ದರು. ಇಂದು(ಡಿ.15) ಬಿಜೆಪಿಯ ಮುಂಬೈ ಘಟಕದ ಮುಖ್ಯಸ್ಥ ಅಮೀತ್ ಸತಮ್ ಮತ್ತು ಎಂಎಲ್ಸಿ ಪ್ರವೀಣ್ ದಾರೇಕರ್ ಸಮ್ಮುಖದಲ್ಲಿ ಬಿಜೆಪಿ ಪಕ್ಷಕ್ಕೆ ಸೇರಿದರು.
ಈ ಸಂದರ್ಭದಲ್ಲಿ ಮಾತನಾಡಿದ ತೇಜಸ್ವಿ ಘೋಸಲ್ಕರ್, ಯುಬಿಟಿ ಪಕ್ಷದಲ್ಲಿ ಪ್ರಾಮಾಣಿಕವಾಗಿ ಕೆಲಸ ಮಾಡಿದ್ದೇನೆ, ಈಗ ಹೊಸ ಪಕ್ಷದಲ್ಲೂ ಪ್ರಾಮಾಣಿಕವಾಗಿ ಶ್ರಮಿಸುತ್ತೇನೆ ಎಂದರು. ಪತಿಯ ಹತ್ಯೆ ಪ್ರಕರಣದ ತನಿಖೆ ನಿಧಾನಗತಿಯಲ್ಲಿ ಸಾಗುತ್ತಿರುವುದಕ್ಕೆ ಅವರು ನಿರಾಶೆ ವ್ಯಕ್ತಪಡಿಸಿದರು. ವೈಯಕ್ತಿಕ ಕಾರಣ ನೀಡಿ ಉದ್ಧವ್ ಠಾಕ್ರೆ ನೇತೃತ್ವದ ಪಕ್ಷಕ್ಕೆ ಅವರು ರಾಜೀನಾಮೆ ನೀಡಿದ್ದರು.
ಫೆಬ್ರವರಿ 2024ರಲ್ಲಿ ಅಭಿಷೇಕ್ ಘೋಸಲ್ಕರ್ ಅವರನ್ನು ಫೇಸ್ಬುಕ್ ಲೈವ್ನಲ್ಲಿ ಇರುವಾಗಲೇ ಮೌರಿಸ್ ನೊರೊನ್ಹಾ ಎಂಬ ವ್ಯಕ್ತಿಯಿಂದ ಗುಂಡು ಹಾರಿಸಿ ಕೊಲ್ಲಲಾಗಿತ್ತು. ನಂತರ ಆರೋಪಿಯೂ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ವರ್ಷ ಸೆಪ್ಟೆಂಬರ್ನಲ್ಲಿ, ಬಾಂಬೆ ಹೈಕೋರ್ಟ್ ಕೊಲೆಯ ತನಿಖೆಯನ್ನು ಕೇಂದ್ರ ತನಿಖಾ ದಳ (ಸಿಬಿಐ)ಕ್ಕೆ ಹಸ್ತಾಂತರಿಸಿತು.2026ರ ಜನವರಿ 31ರೊಳಗೆ ಮಹಾರಾಷ್ಟ್ರದ ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು ನಡೆಸುವಂತೆ ಸುಪ್ರೀಂ ಕೋರ್ಟ್ ಸೆ.16ರಂದು ಆದೇಶಿಸಿತ್ತು .
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 