ಕನ್ನಡ ಪುಸ್ತಕ ಪ್ರಾಧಿಕಾರದ ಪುಸ್ತಕಗಳು ಶೇ.50 ರಷ್ಟು ರಿಯಾಯಿತಿ ದರದಲ್ಲಿ ಮಾರಾಟ
ಬಳ್ಳಾರಿ05: ಕನ್ನಡ ಪುಸ್ತಕ ಪ್ರಾಧಿಕಾರದ ವತಿಯಿಂದ ಗಣರಾಜ್ಯೋತ್ಸವ ಅಂಗವಾಗಿ ಜನವರಿ ಮಾಹೆಯಲ್ಲಿ ಮಾತ್ರ ತಿಂಗಳ ಪೂತರ್ಿ ಪ್ರಾಧಿಕಾರದ ಎಲ್ಲಾ ಪುಸ್ತಕಗಳನ್ನು ಶೇ.50 ರಷ್ಟು ರಿಯಾಯಿತಿ ದರದಲ್ಲಿ ಬೆಂಗಳೂರಿನ ಕನ್ನಡ ಭವನ ಸಿರಿಗನ್ನಡ ಪುಸ್ತಕ ಮಳಿಕೆಯಲ್ಲಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಎಲ್ಲಾ ಜಿಲ್ಲೆಯ ಸಹಾಯಕ ನಿದರ್ೇಶಕ ಕಚೇರಿಯಲ್ಲಿ ಹಾಗೂ ಕನ್ನಡ ಪುಸ್ತಕ ಪ್ರಾಧಿಕಾರದಿಂದ ತೆರೆಯಲಾದ ಎಲ್ಲಾ ಜಿಲ್ಲಾವಾರು ಸಿರಿಗನ್ನಡ ಪುಸ್ತಕ ಮಾರಾಟ ಮಳಿಗೆಯಲ್ಲಿ ಹಾಗೂ ಕನ್ನಡ ಪುಸ್ತಕ ಪ್ರಾಧಿಕಾರದ ಆನ್ಲೈನ್ನಲ್ಲಿ ಮಾರಾಟಕ್ಕೆ ಲಭ್ಯವಿದೆ ಎಂದು ಪ್ರಾಧಿಕಾರದ ಆಡಳಿತಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವ್ಯಕ್ತಿ ಚಿತ್ರಗಳು, ನಾಟಕಗಳು, ಅಲೆಮಾರಿ ಸಮುದಾಯ, ವೈದ್ಯಕೀಯ, ಪ್ರಾಚೀನ ಕನ್ನಡ ಸಾಹಿತ್ಯ, ಜಾನಪದ, ಪರಿಸರ ಕೃಷಿ ಇನ್ನೂ ಹತ್ತು ಪ್ರಕಾರಗಳಲ್ಲಿ ಸಾಹಿತ್ಯ ಕೃತಿಗಳನ್ನು ಸುಮಾರು 360 ಶೀಷರ್ಿಕೆಯಲ್ಲಿ ಮುದ್ರಿಸಿ ಪ್ರಕಟಿಸಲಾಗಿದೆ.
ಪ್ರಾಧಿಕಾರದ ಜಾಲತಾಣವಾದ ತಿತಿತಿ.ಞಚಿಟಿಟಿಚಿಜಚಿಠಿಣಣಚಿಞಚಿಠಿಡಿಚಿಜಞಚಿಡಿಚಿ.ಛಿಠಟ ಮೂಲಕ ಪುಸ್ತಕಗಳನ್ನು ರಿಯಾಯಿತಿ ದರದಲ್ಲಿ ಪಡೆಯಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ