ಸಂಡೂರಿನಲ್ಲಿ ಸ್ವೀಪ್ ಚಟುವಟಿಕೆಗಳಿಗೆ ಸಿಇಒ ಚಾಲನೆ

ಸಂಡೂರಿನಲ್ಲಿ ಸ್ವೀಪ್ ಚಟುವಟಿಕೆಗಳಿಗೆ ಸಿಇಒ ಚಾಲನೆ

ಲೋಕದರ್ಶನ ವರದಿ

ಬಳ್ಳಾರಿ 17:  ಬಳ್ಳಾರಿ ಲೋಕಸಭಾ ಉಪಚುನಾವಣೆಯಲ್ಲಿ ಮತದಾನ ಶೇಕಡಾವಾರು ಪ್ರಮಾಣ ಹೆಚ್ಚಿಸುವ ಮತ್ತು ನೈತಿಕ ಮತದಾನ ಹೆಚ್ಚಿಸುವ ಸದುದ್ದೇಶದಿಂದ ಪ್ರಜಾಪ್ರಭುತ್ವ ನಮ್ಮಿಂದ ಮತದಾನ ಹೆಮ್ಮೆಯಿಂದ ಎಂಬ ಘೋಷಣೆಯೊಂದಿಗೆ ಉಪಚುನಾವಣೆಯ ಸ್ವೀಪ್ ಚಟುವಟಿಕೆಗಳಿಗೆ ಸ್ವೀಪ್ ಸಮಿತಿ ಮುಖ್ಯಸ್ಥರು ಆಗಿರುವ ಜಿಪಂ ಸಿಇಒ ಡಾ.ಕೆ.ವಿ.ರಾಜೇಂದ್ರ ಅವರು ಚಾಲನೆ ನೀಡಿದರು.

  ಸಂಡೂರು ವಿಧಾನಸಭಾ ಕ್ಷೇತ್ರದಾದ್ಯಂತ ಸಂಚರಿಸಲಿರುವ ಮತದಾನ ಜಾಗೃತಿ ಜಾಥಾಕ್ಕೆ ಹಸಿರು ನಿಶಾನೆ ತೋರಿದ ಜಿಪಂ ಸಿಇಒ ಡಾ.ಕೆ.ವಿ.ರಾಜೇಂದ್ರ ಅವರು, ಯಾವುದೇ ರೀತಿಯ ಅಮಿಷಕ್ಕೆ ಮರುಳಾಗದೇ ನಮ್ಮ ಸಂವಿಧಾನ ನಮಗೆ ನೀಡಿರುವ ಹಕ್ಕನ್ನು ಸಮರ್ಪಕವಾಗಿ ಚಲಾಯಿಸಬೇಕು ಎಂದರು. ಯೋಗ್ಯ ಅಭ್ಯಥರ್ಿಗೆ ಮತಚಲಾಯಿಸುವ ಮೂಲಕ ನಮ್ಮ ಪ್ರಜಾಪ್ರಭುತ್ವವನ್ನು ಗಟ್ಟಿಗೊಳಿಸಬೇಕು ಎಂದು ಹೇಳಿದ ಜಿಪಂ ಸಿಇಒ ಡಾ.ಕೆ.ವಿ.ರಾಜೇಂದ್ರ ಅವರು, ಈ ಉಪಚುನಾವಣೆಯಲ್ಲಿ ಹೆಚ್ಚಿನ ಮತದಾನವವಾಗುವ ನಿಟ್ಟಿನಲ್ಲಿ ಜಾಗೃತಿ ಜಾಥಾ ಸೇರಿದಂತೆ ವಿವಿಧ ರೀತಿಯ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು ಎಂದರು. ಈ ಸಂದರ್ಭದಲ್ಲಿ ಸಹಾಯಕ ಚುನಾವಣಾಧಿಕಾರಿಗಳು, ತಾಪಂ ಕಾರ್ಯನಿವರ್ಾಹಕ ಅಧಿಕಾರಿಗಳು, ತಹಸೀಲ್ದಾರರು, ಕಂದಾಯ ಇಲಾಖೆಯ ಅಧಿಕಾರಿಗಳು, ಪಿಡಿಒಗಳು, ನಗರ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಹಾಗೂ ಸಾರ್ವಜನಿಕರು ಇದ್ದರು

ಸುದ್ದಿ ಓದಿ