ಟಾಲಿವುಡ್ ಸ್ಟೈಲಿಷ್ ಸ್ಟಾರ್ ಅಲ್ಲು ಅರ್ಜುನ್ಗೆ ಕೊರೊನಾ
ಹೈದರಾಬಾದ್, ಏ.28 :ಟಾಲಿವುಡ್ ಸ್ಟೈಲಿಷ್ ಸ್ಟಾರ್ ಅಲ್ಲು ಅರ್ಜುನ್ಗೆ ಕೊರೊನಾ ಸೋಂಕು ತಗುಲಿದೆ. ಈ ವಿಚಾರವನ್ನು ಸ್ವತಃ ಅಲ್ಲು ಅರ್ಜುನ್ ಸಾಮಾಜಿಕ ಜಾಲತಾಣಗಳಲ್ಲಿ ಬಹಿರಂಗಪಡಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅಲ್ಲು ಅರ್ಜುನ್, 'ನನಗೆ ಸೋಂಕು ಕಾಣಿಸಿಕೊಂಡಿದೆ. ಮನೆಯಲ್ಲಿ ಐಸೋಲೇಟ್ ಆಗಿದ್ದು, ಕೋವಿಡ್ ಮಾರ್ಗಸೂಚಿಗಳನ್ನು ಪಾಲಿಸುತ್ತಿದ್ದೇನೆ.ನಾನು ಆರೋಗ್ಯವಾಗಿದ್ದು, ನನ್ನ ಅಭಿಮಾನಿಗಳು ಮತ್ತು ಹಿತೈಷಿಗಳು ಯಾವುದೇ ಆತಂಕಪಡಬೇಡಿ' ಎಂದು ಅವರು ಮನವಿ ಮಾಡಿದ್ದಾರೆ.'ಬನ್ನಿ' ಎಂದೇ ಅಲ್ಲು ಅರ್ಜುನ್ ಖ್ಯಾತಿ ಪಡೆದಿದ್ದಾರೆ. ಅವರು ಅಭಿನಯದ ಮುಂದಿನ ಚಿತ್ರ 'ಪುಷ್ಪಾ' ಆಗಸ್ಟ್ ತಿಂಗಳಿನಲ್ಲಿ ತೆರೆಕಾಣಲಿದೆ. ಈ ಚಿತ್ರದಲ್ಲಿ ಅಲ್ಲು ಅರ್ಜುನ್ ಅವರೊಂದಿಗೆ ನಾಯಕಿಯಾಗಿ ಕನ್ನಡತಿ ರಶ್ಮಿಕಾ ಮಂದಣ್ಣ ಕಾಣಿಸಿಕೊಳ್ಳಲಿದ್ದಾರೆ.