ಮನರಂಜನೆ

ಅಮಿತಾಭ್‌ ಬಚ್ಚನ್‌ ಎರಡನೇ ಕಣ್ಣಿನ ಶಸ್ತ್ರಚಿಕಿತ್ಸೆ ಯಶಸ್ವಿ

ಅಮಿತಾಭ್‌ ಬಚ್ಚನ್‌ ಎರಡನೇ ಕಣ್ಣಿನ ಶಸ್ತ್ರಚಿಕಿತ್ಸೆ ಯಶಸ್ವಿ

ಮುಂಬೈ, ಮಾ.15 : ತಮ್ಮ ಎರಡನೇ ಕಣ್ಣಿನ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದ್ದು, ಆರೋಗ್ಯದಲ್ಲೂ ಚೇತರಿಕೆ ಕಾಣುತ್ತಿದೆ ಎಂದು ಬಾಲಿವುಡ್‌ ಬಿಗ್ ಬಿ ಅಮಿತಾಭ್‌ ಬಚ್ಚನ್‌ ತಿಳಿಸಿದ್ದಾರೆ.ಭಾನುವಾರ ತಡರಾತ್ರಿ ಟ್ವೀಟ್‌ ಮಾಡಿರುವ  ಅವರು, ನನ್ನ ಎರಡನೇ ಕಣ್ಣಿನ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದೆ. ಚಿಕಿತ್ಸೆ ನೀಡಿದ ವೈದ್ಯ ಡಾ. ಹಿಮಾಂಶು ಮೆಹ್ತಾ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು.  ಶಸ್ತ್ರಚಿಕಿತ್ಸೆಗಳ ನಂತರ ಜೀವನವೇ ಬದಲಾಗಿರುವ ಅನುಭವವಾಗಿದೆ ಎಂದು ಅವರು ಉಲ್ಲೇಖಿಸಿದ್ದಾರೆ.ಅಮಿತಾಭ್, ಕೆಲ ದಿನಗಳ ಹಿಂದಷ್ಟೇ ತಮ್ಮ ಮೊದಲ ಕಣ್ಣಿನ ಶಸ್ತ್ರಚಿಕಿತ್ಸೆ ಕುರಿತು ಬ್ಲಾಗ್‌ ಮೂಲಕ ಅಭಿಮಾನಿಗಳಿಗೆ ತಿಳಿಸಿದ್ದರು. ಶಸ್ತ್ರಚಿಕಿತ್ಸೆಯ ನಂತರವೂ ನಿಧಾನವಾಗಿ ಚೇತರಿಸಿ ಕೊಳ್ಳುತ್ತಿದ್ದೇನೆ ಎಂದು ಮಾಹಿತಿ ನೀಡಿದ್ದರು. 


ಸುದ್ದಿ ಓದಿ