ಅಂತರರಾಷ್ಟ್ರೀಯ

ಅಮೆರಿಕದಲ್ಲಿ ಗುಂಡಿನ ದಾಳಿಗೆ 10 ಜನ ಬಲಿ

ಅಮೆರಿಕದಲ್ಲಿ ಗುಂಡಿನ ದಾಳಿಗೆ 10 ಜನ ಬಲಿ

ವಾಷಿಂಗ್ಟನ್, ಮಾರ್ಚ್ 23:ಅಮೆರಿಕದ ಕೊಲೊರಾಡೋದ ಬೌಲ್ಡರ್‌ನಲ್ಲಿರುವ ಮಾಲ್  ನಲ್ಲಿ  ಸೋಮವಾರ ನಡೆದ ಗುಂಡಿನ ದಾಳಿಯಲ್ಲಿ ಪೊಲೀಸ್ ಅಧಿಕಾರಿ ಸೇರಿದಂತೆ ಒಟ್ಟು 10 ಮಂದಿ ಹತರಾಗಿದ್ದಾರೆ ಎಂದು ಸ್ಥಳೀಯ ಪೊಲೀಸರು ತಿಳಿಸಿದ್ದಾರೆ.ಅಮೆರಿಕದ ಕೊಲೊಡಾಡೊದಲ್ಲಿ ಘಟನೆ ಸಂಭವಿಸಿದೆ. ದಾಳಿ ನಡೆಸಿದ  ಶಂಕಿತನಿಗೂ ಗಾಯಗಳಾಗಿದ್ದು, ಪೊಲೀಸರು ಆತನನ್ನುಕಸ್ಟಡಿಗೆ ತೆಗೆದುಕೊಳ್ಳಲಾಗಿದೆ. ಗುಂಡಿನ ದಾಳಿಯಲ್ಲಿ ಪೊಲೀಸರು ಸೇರಿ ಹಲವರು ಮೃತಪಟ್ಟಿರುವುದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ. ಮಧ್ಯ ವಯಸ್ಸಿನ, ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆಪೊಲೀಸರ ಬಂಧನದಲ್ಲಿರುವವರು ನಿಜವಾಗಿಯೂ ಆರೋಪಿಯೇ ಎಂಬುದು ಇನ್ನೂ ಸಾಬೀತಾಗಿಲ್ಲ. 911ಕ್ಕೆ ಕರೆ ಮಾಡಿದ ತಕ್ಷಣ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಸ್ಥಿತಿಯನ್ನು ಶಾಂತಗೊಳಿಸಿದ್ದಾರೆ.ಶಂಕಿತ ವ್ಯಕ್ತಿಗೆ ಗಂಭೀರ ಸ್ವರೂಪದ ಗಾಯಗಳಾಗಿರಲಿಲ್ಲ, ಹೀಗಾಗಿ ಆತನನ್ನು ವಶಕ್ಕೆ ತೆಗೆದುಕೊಳ್ಳಲಾಗಿದ್ದು ವಿಚಾರಣೆ ನಡೆಯುತ್ತಿದೆ ಎಂದೂ  ಪೊಲೀಸರು ಮಾಹಿತಿ ನೀಡಿದ್ದಾರೆ.



ಸುದ್ದಿ ಓದಿ