ವಿ.ಪ. ಸದಸ್ಯ ಐವಾನ್ ಡಿಸೋಜಾ ಅವರಿಗೆ ಸಚಿವ ಸ್ಥಾನ ನೀಡಿ: ಕ್ಯಾಥೊಲಿಕ್ ಅಸೋಸಿಯೇಷನ್ ಆಗ್ರಹ
Catholic Association demands that MP Ivan D'Souza be given a ministerial position
ವಿ.ಪ. ಸದಸ್ಯ ಐವಾನ್ ಡಿಸೋಜಾ ಅವರಿಗೆ ಸಚಿವ ಸ್ಥಾನ ನೀಡಿ: ಕ್ಯಾಥೊಲಿಕ್ ಅಸೋಸಿಯೇಷನ್ ಆಗ್ರಹ
ಕಾರವಾರ 02 : ವಿಧಾನ ಪರಿಷತ್ ಸದಸ್ಯ ಐವಾನ್ ಡಿಸೋಜಾ ಅವರಿಗೆ ಸಚಿವ ಸಂಪುಟದಲ್ಲಿ ಕ್ಯಾಬಿನೆಟ್ ಸಚಿವ ಸ್ಥಾನ ನೀಡುವಂತೆ ಕಾರವಾರ ಕ್ಯಾಥೊಲಿಕ್ ಅಸೋಸಿಯೇಶನ್ ಅಧ್ಯಕ್ಷ ಜಾರ್ಜ್ ಫರ್ನಾಂಡೀಸ್ ಆಗ್ರಹಿಸಿದರು.ಕಾರವಾರ ಪತ್ರಿಕಾ ಭವನದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಐವಾನ್ ಡಿಸೋಜಾ ಅವರು ತಮ್ಮ ರಾಜಕೀಯ ಜೀವನವನ್ನು ಕಾಂಗ್ರೆಸ್ ಪಕ್ಷದ ಸಿದ್ಧಾಂತಗಳು, ಪ್ರಜಾಪ್ರಭುತ್ವ, ಸಾಮಾಜಿಕ ನ್ಯಾಯ ಹಾಗೂ ಶೋಷಿತ ಸಮುದಾಯಗಳ ಹಕ್ಕುಗಳ ರಕ್ಷಣೆಗೆ ಸಮರ್ಿಸಿಕೊಂಡಿದ್ದಾರೆ ಎಂದು ಹೇಳಿದರು.
ಕಾನೂನು ತಜ್ಞರಾಗಿರುವ ಐವಾನ್ ಡಿಸೋಜಾ ಅವರು ಹಲವು ದಶಕಗಳ ರಾಜಕೀಯ ಅನುಭವ ಹೊಂದಿದ್ದು, ಜನಸಾಮಾನ್ಯರ ಸಮಸ್ಯೆಗಳ ಕುರಿತು ಸದಾ ಧೈರ್ಯವಾಗಿ ಧ್ವನಿ ಎತ್ತಿದ್ದಾರೆ. ಶಿಕ್ಷಣ, ಆರೋಗ್ಯ, ನಿರುದ್ಯೋಗ ನಿವಾರಣೆ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ತಮ್ಮ ಶಾಸಕರ ಅನುದಾನವನ್ನು ಸಮರ್ಕವಾಗಿ ಬಳಸಿದ್ದು, ದಲಿತರು, ಹಿಂದುಳಿದ ವರ್ಗಗಳು ಹಾಗೂ ಅಲ್ಪಸಂಖ್ಯಾತ ಸಮುದಾಯಗಳ ಪರವಾಗಿ ನಿರಂತರ ಹೋರಾಟ ನಡೆಸಿದ್ದಾರೆ.
ಕೋಮುವಾದದ ವಿರುದ್ಧ ಗಟ್ಟಿ ಧ್ವನಿ ಎತ್ತಿದವರು ಅವರು ಎಂದು ಹೇಳಿದರು.ಕಾರವಾರ-ಅಂಕೋಲಾ ಕ್ರಿಶ್ಚಿಯನ್ ಫೊರಂ ಅಧ್ಯಕ್ಷ ಲಿಯೋ ಲ್ಯುಯಿಸ್ ಮಾತನಾಡಿ, ಐವಾನ್ ಡಿಸೋಜಾ ಅವರು ಸಂವಿಧಾನಾತ್ಮಕ ಮೌಲ್ಯಗಳ ರಕ್ಷಣೆ, ಭ್ರಷ್ಟಾಚಾರದ ವಿರುದ್ಧ ಹೋರಾಟ ಹಾಗೂ ಜನಸಾಮಾನ್ಯರ ಸಮಸ್ಯೆಗಳನ್ನು ಸದನದಲ್ಲಿ ಪ್ರಸ್ತಾಪಿಸುವ ಮೂಲಕ ಜನರ ವಿಶ್ವಾಸ ಗಳಿಸಿದ್ದಾರೆ. ಐವಾನ್ ಡಿಸೋಜಾ ಅವರಂತಹ ಅನುಭವ ಸಂಪನ್ನ ಹಾಗೂ ಹೋರಾಟಗಾರ ನಾಯಕರಿಗೆ ಸಂಪುಟದಲ್ಲಿ ಅವಕಾಶ ನೀಡಬೇಕು ಎಂದು ಆಗ್ರಹಿಸಿದರು. ಈ ಕುರಿತು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್,
ಹಂಗಾಮಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಪಕ್ಷದ ಕಾಂಗ್ರೆಸ್ ನಾಯಕತ್ವಕ್ಕೆ ಮನವಿ ಸಲ್ಲಿಸಲಾಗಿದೆ ಎಂದು ಲಿಯೋ ಹೇಳಿದರು. ಈ ಸಂದರ್ಭದಲ್ಲಿ ಸ್ಯಾಮಸನ್ ಡಿಸೋಜಾ, ಸ್ಟೀಫನ್ ರೊಡ್ರಿಗಸ್ ಇದ್ದರು.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 