ಡಿ. ದೇವರಾಜ ಅರಸು ಅವರ 111ನೇ ಜನ್ಮ ದಿನಾಚರಣೆ ಆಚರಣೆ
ಸವದತ್ತಿ 20 : ನಗರಸಭೆ ಸಭಾ ಭವನದಲ್ಲಿ ತಾಲೂಕಾ ಆಡಳಿತ, ನಗರಸಭೆ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸು ಅವರ 111ನೇ ಜನ್ಮ ದಿನಾಚರಣೆಯನ್ನು ಅತ್ಯಂತ ಅರ್ಥಪೂರ್ಣವಾಗಿ ಆಚರಿಸಲಾಯಿತು.ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ತಹಶೀಲ್ದಾರ್ ಮಲ್ಲಿಕಾರ್ಜುನ ಹೆಗ್ಗನ್ನವರ,ಅವರು ದೇವರಾಜ ಅರಸು ಹಿಂದುಳಿದ ವರ್ಗಗಳು, ದೀನದಲಿತರು ಮತ್ತು ಶೋಷಿತ ಸಮುದಾಯಗಳ ಅಭಿವೃದ್ಧಿಗೆ ನೀಡಿದ ಕೊಡುಗೆಯನ್ನು ಸ್ಮರಿಸಿದರು.
ಅರಸು ಮನೆತನದಲ್ಲಿ ಹುಟ್ಟಿದವರು ಸಾಮಾನ್ಯ ರೈತನಾಗಿ ಬದುಕಿ ತಳ ಸಮುದಾಯದ ಏಳಿಗೆಗೆ ಶ್ರಮಿಸಿದರು. ಅವರ ತತ್ವ ಸಿದ್ಧಾಂತಗಳನ್ನು ಪ್ರತಿಯೊಬ್ಬರೂ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಸಮಾಜದಲ್ಲಿ ಸಮಾನತೆ ತರಲು ಅವರು ಜಾರಿಗೆ ತಂದ ಕ್ರಾಂತಿಕಾರಿ ಸುಧಾರಣೆಗಳು ಇಂದಿಗೂ ಎಲ್ಲರಿಗೂ ಮಾದರಿಯಾಗಿವೆ ಎಂದು ಬಣ್ಣಿಸಿದರು. ನಗರಸಭೆ ಪೌರಾಯುಕ್ತ ಸಂಗನಬಸಯ್ಯ ಗದಗಿಮಠ,ಬಸವರಾಜ ಅಯ್ಯನಗೌಡ್ರ, ಆರ್. ಎಲ್,ಕದಂ, ಪಿಐ ಸುರೇಶ ಬೆಂಡೆಗುಂಬಳ,
ಮುನವಳ್ಳಿ ಪುರಸಭೆ ಮುಖ್ಯಾಧಿಕಾರಿ ಮಹೇಂದ್ರ ತಿಮ್ಮಾಣಿ, ಅಶೋಕ ಮುರಗೋಡ, ಮಾರುತಿ ಬಸಲಿಗುಂದಿ, ಕಲ್ಲಪ್ಪ ಪೂಜೇರ, ಎಫ್. ವೈ. ಗಾಜಿ, ಹಾಸೀಮ ತಹಶೀಲ್ದಾರ, ಅರ್ಜುನ ಅಮೋಜಿ, ಸೇರಿದಂತೆ ತಾಲೂಕು ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು, ಪ್ರಮುಖ ಗಣ್ಯರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದು, ಡಿ. ದೇವರಾಜ ಅರಸು ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಗೌರವ ಸಮರ್ಿಸಿದರು.