ಭಗವಾನ್ ಮಹಾವೀರ ಜಯಂತಿ ಆಚರಣೆ
ಸಿರುಗುಪ್ಪ: ತಾಲೂಕ ತಹಸಿಲ್ದಾರ್ ಅವರ ಕಾರ್ಯಾಲಯದಲ್ಲಿ ಭಗವಾನ್ ಮಹಾವೀರ ಜಯಂತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಚುನಾವಣಾ ನೀತಿ ಸಂಹಿತೆ ಜಾರಿಯಾಗಿರುವ ಹಿನ್ನೆಲೆಯಲ್ಲಿ ಈ ಜಯಂತಿಯನ್ನು ಸರಳ ಹಾಗೂ ಸಾಂಕೇತಿಕವಾಗಿ ಆಚರಿಸಲಾಗುತ್ತಿದೆ ಎಂದು ಚುನಾವಣಾ ಅಧಿಕಾರಿ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಕೆ ಹೆಚ್ ಸತೀಶ್ ಅವರು ಹೇಳಿದರು ನಗರದ ತಾಲೂಕು ಕಚೇರಿಯಲ್ಲಿ ಭಗವಾನ್ ಮಹಾವೀರ ಭಾವ ಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದರು. ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಮಡಗಿನ ಬಸಪ್ಪ, ತಹಸಿಲ್ದಾರ್ ಎನ್ ಆರ್ ಮಂಜುನಾಥ ಸ್ವಾಮಿ, ಜಿಲ್ಲಾ ಸಾಕ್ಷರತಾ ಸಮಿತಿ ಕಾರ್ಯಕಾರಿ ಸದಸ್ಯ ಸಮಾಜ ಸುಧಾರಕ ಅಬ್ದುಲ್ ನಬಿ , ಸಾಮಾಜಿಕ ಕಾರ್ಯಕರ್ತ ಮೊಹಮ್ಮದ್ ನೌಶಾದ್ ಅಲಿ ಸಿಬ್ಬಂದಿ ವರ್ಗದವರಿದ್ದರು