ಬಡ ಸಮುದಾಯವನ್ನು ಸಂಪೂರ್ಣ ನಿರ್ಲಕ್ಷಿತವಾದ ಕೇಂದ್ರ ಬಜೆಟ್ : ಬರಕತ ಅಲಿ ಮುಲ್ಲಾ
ಗದಗ 01:- ಕರ್ನಾಟಕದಿಂದ ನಿರ್ಮಲಾ ಸೀತಾರಾಮನ್ ರಾಜ್ಯಸಭೆಗೆ ಆಯ್ಕೆಯಾಗಿದ್ದರೂ ನಮ್ಮ ರಾಜ್ಯವನ್ನು ಸಂಪೂರ್ಣ ನಿರ್ಲಕ್ಷಿಸಿದ್ದಾರೆ. ಕೇಂದ್ರ ಬಜೆಟ್‌ನಿಂದ ಕರ್ನಾಟಕ ರಾಜ್ಯಕ್ಕೆ ಪ್ರಯೋಜನಕಾರಿಯಾಗಿಲ್ಲದಿರುವದು ಇದೊಂದು ಸಂಪೂರ್ಣ ರೈತ ವಿರೋಧಿ, ಬಡವರನ್ನು ಕಡೆಗಣಿಸಿದಂತಹ ಜನವಿರೋಧಿ ಬಜೆಟ್ ಎಂದು ಗದಗ ಬೆಟಗೇರಿ ನಗರಸಭೆಯ ವಿರೋಧ ಪಕ್ಷದ ಉಪ ನಾಯಕರು ಹಾಗೂ 23 ನೇ ವಾರ್ಡಿನ ಸದಸ್ಯರಾದ ಜನಾಬ ಬರಕತ ಅಲಿ ಮುಲ್ಲಾ ರವರು ಜನಾಭಿಪ್ರಾಯವನ್ನು ವ್ಯಕ್ತಪಡಿಸಿರುತ್ತಾರೆ. ಕೇಂದ್ರ ಬಜೆಟ್ ಕರ್ನಾಟಕದ ಪಾಲಿಗೆ ಕರಾಳ ದಿನವಾಗಿದೆ. ರಾಜ್ಯದ ಯಾವ ಬೇಡಿಕೆಯೂ ಬಜೆಟ್‌ನಲ್ಲಿ ಪರಿಗಣಿಸಲಾಗಿರುವುದಿಲ್ಲ ಬಿಹಾರ ರಾಜ್ಯದ ಐದಾರು ಯೋಜನೆ ಕೊಟ್ಟಿದ್ದಾರೆ. ಉತ್ತರ ಪ್ರದೇಶ, ಬಿಹಾರ ಮಾತ್ರ ಕೇಂದ್ರಕ್ಕೆ ಕಾಣುತ್ತಿದೆ, ಕರ್ನಾಟಕ ಕಾಣ್ತಿಲ್ಲ. ತೆರಿಗೆ ಕಟ್ಟಿದ ಕನ್ನಡಿಗರು ಕಾಣ್ತಿಲ್ಲ. ನಮ್ಮ ರಾಜ್ಯ ಕೇವಲ ದುಡಿಯವ ಆಳಿನ ರೀತಿ ಕಾಣುತ್ತಿದೆ. *ಬಿಹಾರ್ ಚುನಾವಣೆಯ ದೃಷ್ಟಿಕೋನವುಳ್ಳ ಬಜೆಟ್ ಆಗಿದೆ* ಮುಂಬರುವ ಬಿಹಾರ ವಿಧಾನಸಭೆ ಚುನಾವಣೆ ದೃಷ್ಟಿಯಿಂದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಕೇಂದ್ರ ಬಜೆಟ್ ಮಂಡಿಸಿದ್ದಾರೆ ಎನಿಸುತ್ತಿದೆ. ಬಜೆಟ್‌ನಿಂದ ರಾಜ್ಯಕ್ಕೆ ಸಂಪೂರ್ಣ ಅನ್ಯಾಯವಾಗಿದೆ. ಬಿಹಾರ ಜನರ ಒಲೈಕೆಗಾಗಿ ಪ್ರಮುಖ ಐದಾರು ಯೋಜನೆಗಳನ್ನು ಘೋಷಿಸಿದರೆ, ಕರ್ನಾಟಕಕ್ಕೆ ಒಂದು ನಯಾ ಪೈಸೆ ನೀಡಿಲ್ಲ. ಕರ್ನಾಟಕ ರಾಜ್ಯದ ಸಮಸ್ತ ನಾಗರಿಕರು ವಿಶೇಷ ಅನುದಾನ ನೀರೀಕ್ಷೆಯಲ್ಲಿದ್ದರು. ಈ ಬಜೆಟ್‌ನಿಂದ ಕರ್ನಾಟಕ ಜನತೆಗೆ ಸಂಪೂರ್ಣ ನಿರಾಸೆ ಉಂಟಾಗಿದೆ. ಎಂದು ಗದಗ ಬೆಟಗೇರಿ ನಗರಸಭೆಯ ವಿರೋಧ ಪಕ್ಷದ ಉಪ ನಾಯಕರು ಹಾಗೂ 23 ನೇ ವಾರ್ಡಿನ ಸದಸ್ಯರಾದ ಜನಾಬ ಬರಕತ ಅಲಿ ಮುಲ್ಲಾ ರವರು ತೀವ್ರ ಕಳವಳವನ್ನು ವ್ಯಕ್ತಪಡಿಸಿರುತ್ತಾರೆ