ವಿದ್ಯಾರ್ಥಿಗಳ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರ್ಕಾರ: ಸೂರಜ್ ಅವಟಿ
ಲೋಕದರ್ಶನ ವರದಿ
ಮಹಾಲಿಂಗಪುರ 25: ವಿದ್ಯಾರ್ಥಿಗಳ ಆಕ್ರೋಶ ಹಾಗೂ ಸತ್ಯದ ಪರವಾಗಿ ನಡೆದ ಹೋರಾಟದ ಫಲವಾಗಿ ಕೊನೆಗೂ ಕೇಂದ್ರ ಸರ್ಕಾರ ಮಣಿಯುವಂತಾಗಿದೆ ಎಂದು ಕರ್ನಾಟಕ ರಾಜ್ಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಸೂರಜ್ ಅವಟಿ ಹೇಳಿದರು.
ಧರ್ಮೇಂದ್ರ ಪ್ರಧಾನ ಅವರ ರಾಜೀನಾಮೆ ನೈತಿಕ ಹೊಣೆಗಾರಿಕೆಯ ಮೊದಲ ಹೆಜ್ಜೆಯಷ್ಟೇ. ಆದರೆ ಕೇವಲ ರಾಜೀನಾಮೆ ನೀಡುವುದರಿಂದ ಸರ್ಕಾರದ ವೈಫಲ್ಯಗಳನ್ನು ಮುಚ್ಚಿಹಾಕಲು ಸಾಧ್ಯವಿಲ್ಲ. ಈ ವಿಚಾರಕ್ಕೆ ಸಂಬಂಧಿಸಿದ ಸಂಪೂರ್ಣ ಸತ್ಯವನ್ನು ದೇಶದ ಜನರ ಮುಂದೆ ಬಹಿರಂಗಪಡಿಸಬೇಕು ಎಂದು ಅವರು ಆಗ್ರಹಿಸಿದರು.
ವಿದ್ಯಾರ್ಥಿಗಳು ಮುಂದಿಟ್ಟಿರುವ ನ್ಯಾಯಸಮ್ಮತ ಬೇಡಿಕೆಗಳನ್ನು ಕೇಂದ್ರ ಸರ್ಕಾರ ಕೂಡಲೇ ಈಡೇರಿಸಬೇಕು. ವಿದ್ಯಾರ್ಥಿಗಳ ಧ್ವನಿಯನ್ನು ನಿರ್ಲಕ್ಷಿಸುವ ಬದಲು ಅವರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಸರ್ಕಾರ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಸೂರಜ್ ಅವಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.