ಸಮಸಮಾಜ ಕಟ್ಟುವಲ್ಲಿ ಶರಣರ ಕೊಡುಗೆ ಅಪಾರ ಚಂದ್ರಶೇಖರ್ ನಾಯ್ಕ
ಬ್ಯಾಡಗಿ 11 : ಮೂಢನಂಬಿಕೆಗಳು, ಜಾತಿ ಪದ್ಧತಿ, ಅಸಮಾನತೆಯ ವಿರುದ್ಧ ವಚನಗಳ ಮೂಲಕ ಜನರಲ್ಲಿ ಜಾಗೃತಿ ಮೂಡಿಸಿ, ಸಮಸಮಾಜ ಕಟ್ಟುವಲ್ಲಿ ಕಾಯಕ ನಿಷ್ಠೆ ಮೆರೆದ ಕಾಯಕ ಶರಣರ ಕೊಡುಗೆ ಅಪಾರ ಎಂದು ತಹಶೀಲ್ದಾರ್ ಚಂದ್ರಶೇಖರ್ ನಾಯಕ್ ಅಭಿಪ್ರಾಯ ಪಟ್ಟರು.ತಾಲೂಕು ಆಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಸಂಯುಕ್ತಾಶ್ರಯದಲ್ಲಿ ಪಟ್ಟಣದ ತಹಶೀಲ್ದಾರ್ ಕಚೇರಿಯ ಸಭಾಂಗಣದಲ್ಲಿ ಕಾಯಕ ಶರಣರ ಜಯಂತಿಯನ್ನು ಶರಣರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವ ಮೂಲಕ ಮಾತನಾಡಿದರು.ಸರಳ ಜೀವನ, ಶುದ್ಧ ಧ್ಯಾನ, ನಿಷ್ಕಲ್ಮಶ ಭಕ್ತಿ ಮಾರ್ಗದಿಂದ ಮುಕ್ತಿ ಸಾಧ್ಯವೆಂದು ಸಾರಿದ ಕಾಯಕ ಶರಣರ ವಚನಗಳು ಇಂದಿಗೂ ಚಿರಪರಿಚಿತವಾಗಿವೆ 12ನೇ ಶತಮಾನವು ಧಾರ್ಮಿಕ, ಸಾಮಾಜಿಕ, ರಾಜಕೀಯವಾಗಿ ಕ್ರಾಂತಿ ಉಂಟುಮಾಡಿದೆ.
ಇವತ್ತಿನ ನಮ್ಮ ಸಂವಿಧಾನದ ಪಾರ್ಲಿಮೆಂಟ್ ಮಾದರಿಯಲ್ಲಿ ಅಂದಿನ ಅನುಭವ ಮಂಟಪ ಇತ್ತು. ಯಾರನ್ನೂ ಕೀಳಾಗಿ ಕಾಣಬಾರದು ಎಂಬುವುದು ಬಸವೇಶ್ವರರ ಸಮಾನತೆಯ ತತ್ವವಾಗಿದ್ದು, ಅವರ ಹಾದಿಯಲ್ಲಿ ನಡೆದ ಕಾಯಕ ಶರಣರಾದ ಮಾದಾರ ಚನ್ನಯ್ಯ, ಮಾದಾರ ಧೂಳಯ್ಯ, ಡೋಹರ ಕಕ್ಕಯ್ಯ, ಸಮಗಾರ ಹರಳಯ್ಯ ಮತ್ತು ಉರಿಲಿಂಗ ಪೆದ್ದಿಯವರು ಶರಣ ಪಡೆಯ ಮಹನೀಯರಾಗಿದ್ದಾರೆ ಶರಣದ ವಚನಗಳು ಇಂದಿನ ಆಧುನಿಕ ಯುಗದಲ್ಲಿ ಅತ್ಯವಶ್ಯಕವಾಗಿವೆ. ಯುವ ಪೀಳಿಗೆ ಅವರ ಆದರ್ಶಗಳನ್ನು ಪಾಲಿಸಿ ಮುನ್ನಡೆಯಬೇಕಿದೆ ಎಂದು ತಿಳಿಸಿದರು.ಈ ಸಂದರ್ಭದಲ್ಲಿ ತಹಶೀಲ್ದಾರ್ ಇಲಾಖೆ ಸಿಬ್ಬಂದಿಗಳು ಉಪಸ್ಥಿತರಿದ್ದರು.