ಅಕ್ಷರವಂಚಿತರು ಅಕ್ಷರದ ಮೂಲಕವೇ ಬೆಳಕಿನತ್ತ ಸಾಗಬೇಕು: ಎನ್.ಮುನಿರಾಜು
ಧಾರವಾಡ.20: ಅಕ್ಷರವಂಚಿತ ಸಮುದಾಯಗಳು ಅಕ್ಷರದ ಮೂಲಕ ಮಾತ್ರ ಬೆಳಕಿನತ್ತ ಸಾಗಲು ಸಾಧ್ಯ. ಪ್ರತಿಯೊಬ್ಬರೂ ತಮ್ಮಲ್ಲಿರುವ ಪ್ರತಿಭೆಯನ್ನು ಪೋಷಿಸಿ, ಬೆಳೆಸಿಕೊಂಡು ಉದಾತ್ತ ಕನಸುಗಳನ್ನು ನನಸಾಗಿಸಿಕೊಳ್ಳುವ ನಿಟ್ಟಿನಲ್ಲಿ ಹೆಜ್ಜೆಯಿಡಬೇಕು ಎಂದು ಸಮಾಜ ಕಲ್ಯಾಣ ಇಲಾಖೆ ಜಂಟಿ ನಿದರ್ೇಶಕ ಎನ್.ಮುನಿರಾಜು ಹೇಳಿದರು.
ನಗರದ ದೊಡ್ಡನಾಯಕನಕೊಪ್ಪ ಬೇಂದ್ರೆನಗರದ ಪರಿಶಿಷ್ಟ ವರ್ಗಗಳ (ಎಸ್.ಟಿ.) ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾಥರ್ಿ ನಿಲಯದಲ್ಲಿ ಏರ್ಪಡಿಸಿದ್ದ ಪ್ರತಿಭಾವಂತ ವಿದ್ಯಾಥರ್ಿಗಳ ಅಭಿನಂದನಾ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.
ಸಕರ್ಾರದ ಸಮಾಜ ಕಲ್ಯಾಣ ಇಲಾಖೆಯು ವಿದ್ಯಾಥರ್ಿಗಳ ಶಿಕ್ಷಣಕ್ಕೆ ಅನೇಕ ಪ್ರೋತ್ಸಾಹದಾಯಕ ಕಾರ್ಯಕ್ರಮಗಳನ್ನು ಜಾರಿಗೊಳಿಸಿದೆ. ಆದಾಯ ಮಿತಿ ಇಲ್ಲದೇ ವಿದೇಶಿ ವ್ಯಾಸಂಗಕ್ಕೆ ಕಳಿಸುವ,ಪ್ರತಿಷ್ಠಿತ ಸಂಸ್ಥೆಗಳಲ್ಲಿ ಸ್ಪಧರ್ಾತ್ಮಕ ತರಬೇತಿ ನೀಡುವ ಕಾರ್ಯಕ್ರಮಗಳನ್ನು ಅನುಷ್ಠಾನಕ್ಕೆ ತಂದಿದೆ. ಈ ಬಾರಿ ಪಿಯುಸಿ ಕಲಾ ವಿಭಾಗದಲ್ಲಿ ರಾಜ್ಯಕ್ಕೆ ಎರಡು ಮತ್ತು ಮೂರನೇ ರ್ಯಾಂಕ್ಗಳನ್ನು ಪಡೆದಿರುವುದು ಬಳ್ಳಾರಿ ಜಿಲ್ಲೆಯ ಸಮಾಜ ಕಲ್ಯಾಣ ಹಾಸ್ಟೆಲ್ ವಿದ್ಯಾಥರ್ಿಗಳು ಎಂಬುದು ಹೆಮ್ಮೆಯ ಸಂಗತಿ. ಧಾರವಾಡ ಜಿಲ್ಲೆಯಲ್ಲಿಯೂ ಸುಮಾರು 14 ಕ್ಕೂ ಹೆಚ್ಚು ಹಾಸ್ಟೆಲ್ ವಿದ್ಯಾಥರ್ಿಗಳು ಈ ಸಾಲಿನ ಪಿಯುಸಿ ಪರೀಕ್ಷೆಯಲ್ಲಿ ಶೇ.90 ಕ್ಕಿಂತ ಅಧಿಕ ಅಂಕಗಳನ್ನು ಗಳಿಸಿ ಉತ್ತೀರ್ಣರಾಗಿರುವುದು ಅಭಿಮಾನ ತಂದಿದೆ ಎಂದರು.
ಮುಖ್ಯ ಅತಿಥಿಯಾಗಿದ್ದ ವಾತರ್ಾ ಇಲಾಖೆಯ ಹಿರಿಯ ಸಹಾಯಕ ನಿದರ್ೇಶಕ ಮಂಜುನಾಥ ಡೊಳ್ಳಿನ ಮಾತನಾಡಿ, ಪ್ರತಿಭೆ ಯಾರ ಸ್ವತ್ತೂ ಅಲ್ಲ, ನಿರಂತರ ಪರಿಶ್ರಮ ಮತ್ತು ಶ್ರದ್ಧೆಯಿಂದ ನಮ್ಮ ಗುರಿ ತಲುಪಬಹುದು. ಯಾವುದೇ ಆಕರ್ಷಣೆಗಳಿಗೆ ಒಳಗಾಗದೇ ಅಧ್ಯಯನಶೀಲ ಪ್ರವೃತ್ತಿ ಬೆಳೆಸಿಕೊಳ್ಳಬೇಕು. ಯಶಸ್ಸಿಗೆ ಯಾವುದೇ ಅಡ್ಡದಾರಿ, ವಾಮಮಾರ್ಗಗಳು ಇರುವುದಿಲ್ಲ ಎಂದರು.
ಇದೇ ಸಂದರ್ಭದಲ್ಲಿ ಪಿಯುಸಿಯಲ್ಲಿ ಶೇ.90 ಕ್ಕಿಂತ ಅಧಿಕ ಅಂಕಗಳಿಸಿದ 14 ಜನ ವಿದ್ಯಾಥರ್ಿ,ವಿದ್ಯಾಥರ್ಿನಿಯರನ್ನು ಸನ್ಮಾನಿಸಿ, ಗೌರವಿಸಲಾಯಿತು.
ರಾಜ್ಯ ವಾರ್ಡನ್ ಸಂಘದ ಅಧ್ಯಕ್ಷ ಪ್ರಹ್ಲಾದ ಗೆಜ್ಜಿ, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿದರ್ೇಶಕರಾದ ಸಿ.ಬಿ.ಯಮನೂರ, ಟಿ.ವಿ.ಹಬೀಬ, ಟಿ.ಬಿ.ಮಾದನಭಾವಿ, ಎಂ.ವೈ.ಹುಲಿಗೆಜ್ಜಿ ಮತ್ತಿತರರು ಇದ್ದರು.
ಪತ್ರಾಂಕಿತ ವ್ಯವಸ್ಥಾಪಕಿ ಮೀನಾಕ್ಷಿ ಗುದಗಿಯವರ ಸ್ವಾಗತಿಸಿದರು, ಸಂಜಯ್ ಪಟ್ಟೇದ, ಜ್ಯೋತಿ ಬಿ.ಆರ್.ನಿರೂಪಿಸಿದರು
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 