ರೈತ ಸಂಘದ ತಾಲೂಕು ಅಧ್ಯಕ್ಷೆ ಚೆನ್ನಮ್ಮ ಮೇತ್ರಿ ಆಯ್ಕೆ
Chennamma Methri elected as Taluk President of Farmers' Association
ರೈತ ಸಂಘದ ತಾಲೂಕು ಅಧ್ಯಕ್ಷೆ ಚೆನ್ನಮ್ಮ ಮೇತ್ರಿ ಆಯ್ಕೆ
ದೇವರಹಿಪ್ಪರಗಿ 10:ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ತಾಲೂಕು ಮಹಿಳಾ ಘಟಕದ ನೂತನ ಅಧ್ಯಕ್ಷೆ ಚೆನ್ನಮ್ಮ ಮೇತ್ರಿ ಅವರನ್ನು ಜಿಲ್ಲಾಧ್ಯಕ್ಷ ಸಂಗಮೇಶ ಸಗರ ಹಾಗೂ ತಾಲ್ಲೂಕು ಅಧ್ಯಕ್ಷರಾದ ಈರ್ಪ ಕುಳೇಕುಮಟಗಿ ಆಯ್ಕೆ ಮಾಡಿ ಆದೇಶ ಪತ್ರ ನೀಡಿದ್ದಾರೆ.ಪಟ್ಟಣದ ರೈತ ಭವನದಲ್ಲಿ ರವಿವಾರದಂದು ರೈತ ಮುಖಂಡರು ಸನ್ಮಾನಿಸಿ ಗೌರವಿಸಿದರು ನಂತರ ತಾಲ್ಲೂಕು ಅಧ್ಯಕ್ಷ ಈರ್ಪ ಕುಳೇಕುಮಟಗಿ ಮಾತನಾಡಿದ ಅವರು, ರೈತರ ಆಶೋತ್ತರಗಳಿಗೆ ಸ್ಪಂದಿಸುವ ಹಾಗೂ ಅವರ ಸಮಸ್ಯೆಗಳಿಗೆ ಧ್ವನಿಯಾಗಿ ನಿಲ್ಲಬೇಕು.ಮತ್ತು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಸಂಘದ ಸೈದಾಂತಿಕ ಸಿದ್ದಾಂತಗಳನ್ನು ಮೈಗೂಡಿಸಿಕೊಂಡು ರೈತರ ಬೆನ್ನೆಲುಬಾಗಿ ನಿಂತು ಪರಿಹಾರ ಒದಗಿಸುವ ಸಂವಿಧಾನದ ಬದ್ದ ನೀತಿ ನಿಯಮಗಳನ್ನು ತೋರದೆ ಶಿಸ್ತಿನಿಂದ ಮತ್ತು ನಿಷ್ಠೆಯಿಂದ ನಿರ್ವಹಿಸಬೇಕು ಎಂದು ಹೇಳಿದರು.ಇದೇ ಸಂದರ್ಭದಲ್ಲಿ ಗೌರವಾಧ್ಯಕ್ಷರಾದ ಶಿವಾನಂದ ಹಿರೇಮಠ, ಜಿಲ್ಲಾ ಉಪಾಧ್ಯಕ್ಷರಾದ ಸಂಪತ್ ಜಮಾದಾರ, ಮಹಿಳಾ ಮುಖಂಡೆ ಸುನಂದಾ ಸೋನ್ನಹಳ್ಳಿ ಸೇರಿದಂತೆ ಹಲವಾರು ಜನ ರೈತ ಸಂಘದ ಪದಾಧಿಕಾರಿಗಳ, ಮಹಿಳಾ ಮುಖಂಡರು ಉಪಸ್ಥಿತರಿದ್ದರು.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 