ಮಕ್ಕಳ ದಿನಾಚರಣೆ: ಆಟ ಪಾಠದೊಂದಿಗೆ ಅಧ್ಯಯನವು ಮುಖ್ಯ
ಮಕ್ಕಳ ದಿನಾಚರಣೆ: ಆಟ ಪಾಠದೊಂದಿಗೆ ಅಧ್ಯಯನವು ಮುಖ್ಯ
ಹೂವಿನ ಹಡಗಲಿ: ಸತತ ಅಧ್ಯಯನದಿಂದ ಯಶಸ್ಸು ಸಾಧ್ಯ ಎಂದು ಸಾಮಾಜಿಕ ಕಾರ್ಯಕರ್ತರಾದ ಎ ಎಂ ಪಿ ವಾಗೀಶ್ ಅಭಿಮತ ವ್ಯಕ್ತಪಡಿಸಿದರು.ತಾಲೂಕಿನ ಹರವಿ ಸರ್ಕಾರಿ ಪ್ರೌಢಶಾಲೆಯಲ್ಲಿ ಗುರುವಾರ ಮಕ್ಕಳ ದಿನಾಚರಣೆಯ ಪ್ರಯುಕ್ತ ಮಕ್ಕಳೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದ ಅವರು ಭವಿಷ್ಯದ ಕರ್ನಾಟಕ ನಿರ್ಮಾಣಕ್ಕೆ ಬುನಾದಿ ವಿಷಯದ ಮೇಲೆ ಮಾತನಾಡಿ ಶಿಕ್ಷಣ ಮಕ್ಕಳ ಬೌದ್ಧಿಕ ವಿಕಾಸಕ್ಕೆ ಸಹಕಾರಿಯಾಗಲಿದೆ ಎಂದರು.
ವಿದ್ಯಾರ್ಥಿಗಳಿಗೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ಸಾಮಾನ್ಯ ಜ್ಞಾನದ ಪ್ರಶ್ನೆಗಳನ್ನು ಕೇಳಿ ಉತ್ತರಗಳನ್ನು ಪಡೆದರು. ಪ್ರಥಮ ಸ್ಥಾನ ಪಡೆದ 10ನೇ ತರಗತಿ ವಿದ್ಯಾರ್ಥಿನಿ ಚಿನ್ನಮ್ಮ ಕಲಾಲ್ ಇವರಿಗೆ ಬಹುಮಾನ ವಿತರಿಸಿದರು. ಶಾಲಾ ದಾಖಲೆಗಳನ್ನು ಪರೀಶೀಲಿಸಿ ಸಲಹೆ ಮಾರ್ಗದರ್ಶನ ನೀಡಿದರು. ಮಕ್ಕಳ ದಿನಾಚರಣೆ ಪ್ರಯುಕ್ತ ಶಾಲಾ ಹಂತದಲ್ಲಿ ನಡೆಸಲಾದ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.ಎಲ್ಲಾ ಶಿಕ್ಷಕ ಸಿಬ್ಬಂದಿ ವರ್ಗದವರಿಗೆ ಉತ್ತಮ ರೀತಿಯಲ್ಲಿ ಪಾಠ ಬೋಧನೆ ಮಾಡಿ ಉತ್ತಮ ಅಂಕಗಳನ್ನು ಗಳಿಸುವಂತೆ ಪ್ರೋತ್ಸಾಹಿಸಿದರು.ನಂತರ ವಿದ್ಯಾರ್ಥಿಗಳೊಂದಿಗೆ ಬಿಸಿಯೂಟ ಸವಿದರು. ಶಾಲಾ ಮುಖ್ಯೋಪಾಧ್ಯಾಯರಾದ ಲಕ್ಷ್ಮಣ್ ನಾಯ್ಕ್ ಶಿಕ್ಷಕ ಸಿಬ್ಬಂದಿ ಹಾಜರಿದ್ದರು.