ಫೆ.27 ಅಮ್ಮಿನಬಾವಿಯಲ್ಲಿ ಚಿಣ್ಣರ ಸಾಂಸ್ಕೃತಿಕ ಹಬ್ಬ
Chinna cultural festival at Amminabavi on Feb. 27
ಧಾರವಾಡ 24 : ಹತ್ತಿರದ ಅಮ್ಮಿನಬಾವಿ ಗ್ರಾಮದ ಸುಶಿಲಾತಾಯಿ ಅಜ್ಜಯ್ಯ ಹಿರೇಮಠ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಫೆ.27 ರಂದು(ಶುಕ್ರವಾರ) ಸಂಜೆ 4 ಗಂಟೆಗೆ ಚಿಣ್ಣರ ಸಾಂಸ್ಕೃತಿಕ ಹಬ್ಬ ಜರುಗಲಿದೆ.ಬಾಳೆಹೊನ್ನೂರಿನ ಶ್ರೀಜಗದ್ಗುರು ರೇಣುಕಾಚಾರ್ಯ ಶಿಕ್ಷಣ ಪ್ರತಿಷ್ಠಾನ ಹಾಗೂ ಅಮ್ಮಿನಬಾವಿಯ ಶ್ರೀಗುರುಶಾಂತಲಿ0ಗ ಶಿವಾಚಾರ್ಯ ಶಿಕ್ಷಣ ಪ್ರತಿಷ್ಠಾನಗಳ ಜಂಟಿ ಆಶ್ರಯದಲ್ಲಿ ಹಮ್ಮಿಕೊಂಡಿರುವ ಈ ಹಬ್ಬವನ್ನು ಅಮ್ಮಿನಬಾವಿ ಪಂಚಗೃಹ ಹಿರೇಮಠದ ಅಭಿನವ ಶಾಂತಲಿ0ಗ ಶಿವಾಚಾರ್ಯ ಸ್ವಾಮೀಜಿ ಉದ್ಘಾಟಿಸುವರು. ಅಮ್ಮಿನಬಾವಿ ಪಂಚಗೃಹ ಹಿರೇಮಠದ ಹಿರಿಯ ಶ್ರೀಗಳಾದ ಶಾಂತಲಿ0ಗ ಶಿವಾಚಾರ್ಯ ಸ್ವಾಮೀಜಿ ಸಾನ್ನಿಧ್ಯವಹಿಸಲಿದ್ದು, ಶಾಲಾ ಆಡಳಿತ ಮಂಡಳಿಯ ಸದಸ್ಯರುಗಳಾದ ಎಂ.ಸಿ.ಹುಲ್ಲೂರ, ವ್ಹಿ. ಬಿ. ಕೆಂಚನಗೌಡರ, ಶಿವಾನಂದ ಹಿರೇಮಠ, ಬಸವರಾಜ ಕೊಳ್ಳಿ, ಅಮೃತ ಗುಡಿ, ಗುರುಮೂರ್ತಿ ಯರಗಂಬಳಿಮಠ, ಚಂದ್ರು ಶೆಟ್ಟರ, ವಿಜಯಕುಮಾರ ಇಟಗಿ, ಸೋಮಲಿಂಗಶಾಸಿೊ ಗುಡ್ಡದಮಠ ಅತಿಥಿಗಳಾಗಿ ಪಾಲ್ಗೊಳ್ಳುವರು.ಈ ಸಾಂಸ್ಕೃತಿಕ ಹಬ್ಬದಲ್ಲಿ ಶಾಲಾ ಮಕ್ಕಳು ವೈವಿಧ್ಯಮಯ ಸಾಂಸ್ಕೃತಿಕ ಚಟುವಟಿಕೆಗಳನ್ನು ಅಭಿವ್ಯಕ್ತಿಸಲಿದ್ದು, ಸಾರ್ವಜನಿಕರು ಅಧಿಕ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕೆಂದು ಮುಖ್ಯಾಧ್ಯಾಪಕಿ ಮಂಜುಳಾ ದೊಡಮನಿ ಹಾಗೂ ಹಬ್ಬದ ಸಂಚಾಲಕ ಟಿ.ಎಂ. ದೇಸಾಯಿ ಜಂಟಿ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ 