ೆ’ಮಳೆಯಂತೇ ಬಾ.. ಬೆಳಕಂತೇ ಬಾ ’ಸಂಜು ವೆಡ್ಸ್ ಗೀತಾ
ೆ’ಮಳೆಯಂತೇ ಬಾ.. ಬೆಳಕಂತೇ ಬಾ ’ಸಂಜು ವೆಡ್ಸ್ ಗೀತಾ’
ಮಳೆಯಂತೇ ಬಾ.. ಬೆಳಕಂತೇ ಬಾ... ’ ಗೀತೆ ಮೆಚ್ಚಿದ ಪ್ರೇಕ್ಷಕರು ’ಸಂಜು ವೆಡ್ಸ್ ಗೀತಾ-2’ ಕಥೆ ಕೊಟ್ಟಿದ್ದು ಸುದೀಪ್, ಸಿನಿಮಾ ಜನವರಿ10ರಂದು ವಿಶ್ವಾದ್ಯಂತ ತೆರೆಗೆ ಶಿಡ್ಲಘಟ್ಟದ ರೇಶ್ಮೆ ಬೆಳೆಗಾರರ ವಿಷಯವನ್ನಿಟ್ಟುಕೊಂಡು ನವಿರಾದ ಪ್ರೇಮಕಥೆಯನ್ನು ನಿರ್ದೇಶಕ ನಾಗಶೇಖರ್ ’ಸಂಜು ವೆಡ್ಸ್ ಗೀತಾ-2’ ಚಿತ್ರದಲ್ಲಿ ಹೆಣೆದಿದ್ದಾರೆ. ಕಳೆದ ಭಾನುವಾರ ಚಿತ್ರದ ’ಮಳೆಯಂತೆ ನೀನು ಬಾ ...’ ಎಂಬ ಸುಂದರ ಗೀತೆಯನ್ನು ಆನಂದ ಆಡಿಯೋ ಮೂಲಕ ರೀಲೀಸಾಗಿದೆ. ಈಗ ಬಿಡುಗಡೆಯಾದ 2 ಹಾಡುಗಳು ಕೇಳುಗರ ಮನ ಗೆದ್ದಿವೆ. ಈ ಹಾಡನ್ನು ಕಿಚ್ಚ ಸುದೀಪ್ ಬಿಡುಗಡೆಗೊಳಿಸಿ ಮಾತನಾಡುತ್ತ ’ಕಿಟ್ಟಿ ಹಾಗೂ ನಾಗಶೇಖರ್ ಸೇರಿ ಈ ಸಿನಿಮಾ ಮಾಡಿದ್ದಾರೆ. ಹಿಂದೆ ಸಂಜು ವೆಡ್ಸ್ ಗೀತಾ ಸಕ್ಸಸ್ ಆಗಿತ್ತು. ಕವಿರಾಜ್ ಬರೆದ ಮಳೆಯಂತೇ ಹಾಡು ತುಂಬಾ ಚೆನ್ನಾಗಿ ಬಂದಿದೆ. ಇದನ್ನು ರೀಲೀಸ್ ಮಾಡೋದಕ್ಕೆ ತುಂಬಾ ಖುಷಿಯಾಗ್ತಿದೆ ಎಂದು ತಂಡಕ್ಕೆ ಶುಭ ಹಾರೈಸಿದ್ದಾರೆ’ ಕಿಚ್ಚ ಸುದೀಪ್.
ನಿರ್ದೇಶಕ ನಾಗಶೇಖರ್, ಶ್ರೀನಗರ ಕಿಟ್ಟಿ, ಸಂಗೀತ ನಿರ್ದೇಶಕ ಶ್ರೀಧರ್ ವಿ.ಸಂಭ್ರಮ್, ನಿರ್ಮಾಪಕ ಚಲವಾದಿ ಕುಮಾರ್ ಹಾಜರಿದ್ದು ಚಿತ್ರದ ಕುರಿತಂತೆ ಮಾತನಾಡಿದರು. ಈ ಸಂದರ್ಭದಲ್ಲಿ ಮಾತು ಆರಂಭಿಸಿದ ನಾಗಶೇಖರ್, ’ರೇಶ್ಮೆ ಬೆಳೆಗಾರರ ಕುರಿತ ಗಹನವಾದ ವಿಚಾರ ಇಟ್ಟುಕೊಂಡು ಈ ಚಿತ್ರ ಮಾಡಿದ್ದೇನೆ. ಅದರ ಜತೆಗೊಂದು ಲವ್ ಸ್ಟೋರಿಯೂ ಸಾಗುತ್ತದೆ. ಈ ಚಿತ್ರದ ಎಳೆಯನ್ನು ಕಿಚ್ಚ ಸುದೀಪ್ ಅವರು ಮಾಣಿಕ್ಯ ಶೂಟಿಂಗ್ ಟೈಂನಲ್ಲಿ ನನಗೆ ಕೊಟ್ಟಿದ್ದರು. ಇಂಥ ಕಥೆಗಳನ್ನು ನೀನು ಚೆನ್ನಾಗಿ ಹ್ಯಾಂಡಲ್ ಮಾಡ್ತೀಯ ಅಂತ ನನಗೊಪ್ಪಿಸಿದ್ದರು. ’ಸಂಜು ವೆಡ್ಸ್ ಗೀತಾ-2’ ಕಥೆಯ ಕ್ರೆಡಿಟ್ ಸುದೀಪ್ ಅವರಿಗೇ ಸಲ್ಲುತ್ತದೆ. ಇಂದು ನಮ್ಮ ಚಿತ್ರದ ಮೆಲೋಡಿ ಹಾಡನ್ನು ರೀಲೀಸ್ ಮಾಡುವ ಮೂಲಕ ನಮಗೆ ಮತ್ತೊಮ್ಮೆ ಹರಸಿದ್ದಾರೆ. ಶಿಡ್ಲಘಟ್ಟದಲ್ಲಿ ಪ್ರಾರಂಭವಾಗುವ ಕಥೆ ಸ್ವಿಟ್ಜರ್‌ಲ್ಯಾಂಡ್‌ವರೆಗೂ ಹೋಗುತ್ತದೆ. ಚಿತ್ರದಲ್ಲಿ ರೇಶ್ಮೆ ಬೆಳೆಗಾರ ಸಂಜು ಆಗಿ ಶ್ರೀನಗರ ಕಿಟ್ಟಿ ಕಾಣಿಸಿಕೊಂಡಿದ್ದು, ಗೀತಾ ಪಾತ್ರದಲ್ಲಿ ರಚಿತಾರಾಮ್ ಅಭಿನಯಿಸಿದ್ದಾರೆ. ಶಿಡ್ಲಘಟ್ಟದಲ್ಲಿ ಅತಿಹೆಚ್ಚು ರೇಶ್ಮೆ ಬೆಳೆಯುತ್ತಾರೆ, ಆ ನಮ್ ಸ್ವಿಟ್ಜರ್‌ಲ್ಯಾಂಡ್‌ನಲ್ಲಿ 10 ಸುಂದರ ಲೊಕೇಶನ್‌ಗಳನ್ನು ಗುರ್ತಿಸಿ ಶೂಟ್ ಮಾಡಿದ್ದೇವೆ. ನಿರ್ಮಾಪಕರು ಯಾವುದಕ್ಕೂ ಬೇಡ ಎನ್ನದೆ ಒಂದೊಳ್ಳೇ ಚಿತ್ರವನ್ನು ಕನ್ನಡಿಗರಿಗೆ ನೀಡಬೇಕೆಂಬ ಉದ್ದೇಶದಿಂದ ಪ್ರೀತಿಯಿಂದ ಖರ್ಚು ಮಾಡಿದ್ದಾರೆ. ಇವತ್ತು ಅವರ ಬರ್ತ್ಡೇ, ಈ ಹಾಡನ್ನು ಅವರಿಗೆ ಡೆಡಿಕೇಟ್ ಮಾಡುತ್ತಿದ್ದೇವೆ’ ಎಂದು ಹೇಳಿದರು. ಈಗಾಗಲೇ ರೀಲೀಸಾಗಿರುವ ’ಅವನು ಸಂಜು, ಅವಳು ಗೀತಾ, ಅವರಿಬ್ಬರು ಸೇರಲೂ ಸಂಗೀತಾ...’ ಎಂಬ ಮೆಲೋಡಿ ಹಾಡು ಸಂಗೀತ ಪ್ರಿಯರ ಮೆಚ್ಚಿನ ಗೀತೆಯಾಗಿದೆ. ನಂತರ ನಿರ್ಮಾಪಕ ಛಲವಾದಿ ಕುಮಾರ್ ಮಾತನಾಡುತ್ತ, ’ನಿರ್ದೇಶಕರಿದ್ದಾಗ ನಾವು ಮಾತನಾಡಲು ಅವಕಾಶ ಇರಲ್ಲ, ಈ ಹಿಂದೆ ನಾನೊಂದು ಸಿನಿಮಾ ಮಾಡಿದ್ದೆ, ಕಾರಣಾಂತರಗಳಿಂದ ಅದು ರೀಲೀಸಾಗಲಿಲ್ಲ. ಇದು ನನ್ನ ನಿರ್ಮಾಣದ ಎರಡನೇ ಚಿತ್ರ. ಈ ಮೊದಲು ನಾನೇ ಕಥೆಯನ್ನು ರೆಡಿ ಮಾಡಿಕೊಂಡಿದ್ದೆ. ನಂತರ ನಾಗಶೇಖರ ಬಂದು ಹೇಳಿದ ಈ ಸ್ಟೋರಿ ತುಂಬಾ ಇಷ್ಟವಾಯಿತು. ಎಲ್ಲರೂ ಸೇರಿ ಚಿತ್ರವನ್ನು ಪ್ರಾರಂಭಿಸಿದೆವು. ಕ್ಯಾಮೆರಾ ಮ್ಯಾನ್ ಸತ್ಯ ಹೆಗಡೆ, ಸಂಗೀತ ನಿರ್ದೇಶಕ ಶ್ರೀಧರ ವಿ. ಸಂಭ್ರಮ್ ಎಲ್ಲರೂ ಸಪೋರ್ಟ್ ಮಾಡಿದ್ದರಿಂದ ಚಿತ್ರ ತುಂಬಾ ಚೆನ್ನಾಗಿ ಬಂದಿದೆ. ಮೊನ್ನೆಯಷ್ಟೇ ಸೆನ್ಸಾರಾಯಿತು, ಒಂಚೂರೂ ಕಟ್ ಹೇಳದೆ ಯು ಕೊಟ್ಟಿದ್ದಾರೆ’ ಎಂದು ಹೇಳಿದರು. ವಿಶೇಷವಾಗಿ ಈ ಚಿತ್ರದಲ್ಲಿ ನಟ ಚೇತನ್ ಚಂದ್ರ ಅತಿಥಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ರಾಗಿಣಿ ದ್ವಿವೇದಿ ಅವರ ಡ್ಯಾನ್ಸ್ ನಂಬರ್ ಸಾಂಗ್ ಈಗಾಗಲೇ ವೈರಲ್ ಆಗಿದೆ. ಸತ್ಯ ಹೆಗಡೆ ಅವರ ಛಾಯಾಗ್ರಹಣ, ಶ್ರೀಧರ್ ವಿ. ಸಂಭ್ರಮ್ ಅವರ ಸಂಗೀತ ನಿರ್ದೇಶನ, ಡಿಫರೆಂಟ್ ಡ್ಯಾನಿ ಅವರ ಸಾಹಸ ನಿರ್ದೇಶನ ಈ ಚಿತ್ರಕ್ಕಿದೆ, ರಂಗಾಯಣ ರಘು, ಸಾಧು ಕೋಕಿಲ, ತಬಲಾನಾಣಿ, ಗಿಚ್ಚಿಗಿಲಿಗಿಲಿ ವಿನೋದ್ ಅಲ್ಲದೆ ಖಳನಟ ಸಂಪತ್‌ಕುಮಾರ್ ಹೆಸರಾಂತ ಕಲಾವಿದರೇ ಚಿತ್ರದಲ್ಲಿ ಅಭಿನಯಿಸಿದ್ದಾರೆ. ಪವಿತ್ರ ಇಂಟರ್ ನ್ಯಾಷನಲ್ ಮೂವೀಮೇಕರ್ಸ್ ಅಡಿಯಲ್ಲಿ ಚಲವಾದಿ ಕುಮಾರ್ ಅವರ ನಿರ್ಮಾಣದ ಬಹು ನೀರೀಕ್ಷಿತ ’ಸಂಜು ವೆಡ್ಸ್ ಗೀತಾ-2’ ಜನವರಿ 10ರಂದು ಪ್ರಪಂಚದಾದ್ಯಂತ ಬಿಡುಗಡೆಯಾಗಲಿದೆ.