ಸಮುದಾಯ ಭವನ ಉದ್ಘಾಟಿಸಿದ ಚನ್ನರಾಜ ಹಟ್ಟಿಹೊಳಿ
Community Bhavan inaugurated by Channaraja Hattiholi
ಸಮುದಾಯ ಭವನ ಉದ್ಘಾಟಿಸಿದ ಚನ್ನರಾಜ ಹಟ್ಟಿಹೊಳಿ
ಬೆಳಗಾವಿ 03 : ಮುತ್ನಾಳ ಗ್ರಾಮದ ಶ್ರೀ 1008 ಚಂದ್ರ್ರಭು ತೀರ್ಥಂಕರ ಜಿನ ಮಂದಿರದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಸಮುದಾಯ ಭವನ ಹಾಗೂ ಜೀರ್ಣೋದ್ಧಾರ ಕಾರ್ಯಕ್ರಮಗಳನ್ನು ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಸೋಮವಾರ ಬೆಳಗ್ಗೆ ಉದ್ಘಾಟಿಸಿದರು.ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ, ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರ ವಿಶೇಷ ಪ್ರಯತ್ನದಿಂದ ಸಮುದಾಯ ಭವನ ನಿರ್ಮಾಣಗೊಂಡಿದೆ. ಕ್ಷೇತ್ರದಲ್ಲಿ ಧಾರ್ಮಿಕ, ಶೈಕ್ಷಣಿಕ ಹಾಗೂ ಸಾಮಾಜಿಕ ಕೆಲಸ-ಕಾರ್ಯಗಳಿಗೆ ಸಹೋದರಿ ಲಕ್ಷ್ಮೀ ಹೆಬ್ಬಾಳಕರ್ ಅವರು ಮೊದಲ ಪ್ರಾಶಸ್ತ್ಯ ನೀಡುತ್ತಿದ್ದು, ಸರ್ವ ಜನಾಂಗಗಳ ಏಳಿಗೆಗಾಗಿ ಹಗಲಿರುಳು ಶ್ರಮಿಸುತ್ತಿದ್ದಾರೆ. ಬರುವ ದಿನಗಳಲ್ಲಿ ಸಹ ಕ್ಷೇತ್ರಕ್ಕೆ ಮತ್ತಷ್ಟು ಅಭಿವೃದ್ಧಿ ಕೆಲಸಗಳನ್ನು ಒದಗಿಸುವ ಪ್ರಾಮಾಣಿಕ ಪ್ರಯತ್ನ ಮಾಡಲಿದ್ದೇವೆ ಎಂದು ಚನ್ನರಾಜ ಹಟ್ಟಿಹೊಳಿ ಹೇಳಿದರು.ಈ ವೇಳೆ ಆಚಾರ್ಯ ಶ್ರೀ 108 ವಿಮಲೇಶ್ವರ ಮುನಿ ಮಹಾರಾಜರು, ಮುತ್ನಾಳ ಕೇದಾರ ಶಾಖಾ ಪೀಠದ ಶಿವಾನಂದ ಶಿವಾಚಾರ್ಯರು, ಗ್ರಾಮದ ಹಿರಿಯರು ಸೇರಿದಂತೆ ಜೈನ ಸಮುದಾಯದ ಮುಖಂಡರು ಉಪಸ್ಥಿತರಿದ್ದರು.
ಸಿಸಿಬಿ ಪೊಲೀಸರ ದಾಳಿ: 10.31 ಲಕ್ಷ ಮೌಲ್ಯದ ಹೆರಾಯಿನ್, ವಸ್ತುಗಳ ವಶ ; ಮೂವರ ಬಂಧನ
ಎರಡು ಗುಂಪುಗಳ ನಡುವೆ ಮಾರಕಾಸ್ತ್ರ, ಕಬ್ಬಿನದ ರಾಡ್ ಗಳಿಂದ ಹೊಡೆದಾಟ : ವಿಡಿಯೋ ವೈರಲ್
ಬೈಲಹೊಂಗಲದಲ್ಲಿ ಮಳೆಯ ಅರ್ಭಟ : ನದಿಯಂತಾದ ರಸ್ತೆಗಳು, ನೀರಿನ ಸೆಳೆತಕ್ಕೆ ಸಿಲುಕಿದ ದ್ವಿಚಕ್ರ ವಾಹನಗಳು
ಕನ್ನಡಪರ ನಿರ್ಣಯಕ್ಕೆ ಹಿಂದೇಟು : ಪಾಲಿಕೆಯಲ್ಲಿ ನಿರ್ಣಯ ಮಂಡಿಸಲು ಮುಂದಾದ ಶಾಸಕ ಸೇಠ್
ಒಬ್ಬರಿಗೆ ಒಂದೇ ಹುದ್ದೆ ಕಾಂಗ್ರೆಸ್ ಪಕ್ಷದ ನಿಯಮದಿಂದ ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೈ ತಪ್ಪಿದೆ : ಸಚಿವ ಸತೀಶ ಜಾರಕಿಹೊಳಿ
ಖಾತೆ ಮುಟ್ಟುಗೋಲಾದರೂ ಶಿವಂ ಸಂಸ್ಥೆಗೆ ಜನರಿಂದ ಇನ್ನೂ ದುಡ್ಡು ಠೇವಣಿ : ವಂಚನೆ ಜಾಲದಿಂದ ದೂರ ಇರಿ, ಜನರಿಗೆ ಸಿಐಡಿ ಡಿಐಜಿಪಿ ಗುಳೇದ್ ಮನವಿ 