ನಿಗಧಿತ ಅವಧಿಯಲ್ಲಿ ಕಾಮಗಾರಿ ಮುಗಿಸಿ:ಸೋಮ ಶೇಖರ್ ಮೇಸ್ತಾ
Complete the work within the stipulated time: Soma Shekhar Mesta
ಕಾರವಾರ 06: 15 ನೇ ಹಣಕಾಸು ಯೋಜನೆಯಡಿ ತಾಲೂಕು ಪಂಚಾಯಿತಿ ವತಿಯಿಂದ ಬಿಡುಗಡೆಯಾದ ಅನುದಾನವನ್ನು ಎಲ್ಲಾ ಇಲಾಖೆಯವರು ಸಮರ್ಕವಾಗಿ ವಿನಿಯೋಗಿಸಿಕೊಂಡು ನಿಗಧಿತ ಅವಧಿಯಲ್ಲಿ ಕಾಮಗಾರಿಗಳನ್ನು ಮುಕ್ತಾಯಗೊಳಿಸಬೇಕು ಅನುದಾನ ಕಡಿಮೆ ಇದ್ದಲ್ಲಿ ತಾ.ಪಂ ಕಾರ್ಯನಿರ್ವಾಹಕ ಆಧಿಕಾರಿಗಳ ಗಮನಕ್ಕೆ ತರುವಂತೆ ಎಲ್ಲಾ ಇಲಾಖೆಯ ಅಧಿಕಾರಿಗಳಿಗೆ ತಾಲೂಕು ಪಂಚಾಯತ ಆಡಳಿತಾಧಿಕಾರಿ ಸೋಮಶೇಖರ್ ಮೇಸ್ತಾ ಸೂಚನೆ ನೀಡಿದರು. ಅವರು ಗುರುವಾರ ತಾಲೂಕು ಪಂಚಾಯತ ಸಭಾಂಗಣದಲ್ಲಿ ನಡೆದ, ತಾಲೂಕು ಪಂಚಾಯತ ಕೆಡಿಪಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಸಾರ್ವಜನಿಕರ ಆರೋಗ್ಯದ ಹಿತದೃಷ್ಠಿಯಿಂದ ಹಳಗಾ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಆಂಬ್ಯುಲೆನ್ಸ್ ನ ಅವಶ್ಯಕತೆ ಹೆಚ್ವಾಗಿದ್ದು, ಕೈಗಾ ವತಿಯಿಂದ ಒಂದು ಆಂಬ್ಯುಲೇನ್ಸ್ ವ್ಯವಸ್ಥೆ ಮಾಡಲಾಗುತ್ತಿದೆ. ಮಕ್ಕಳ ಆರೋಗ್ಯದ ಹಿತದೃಷ್ಠಿಯಿಂದ ಸಮಾಜ ಕಲ್ಯಾಣ ಹಾಗೂ ಬಿಸಿಎಂ ಹಾಸ್ಟೆಲ್‌ಗಳಿಗೆ ಕಡ್ಡಾಯವಾಗಿ ಭೇಟಿ ನೀಡಿ, ಮಕ್ಕಳ ಅರೋಗ್ಯದ ಕುರಿತು ಪರೀಶೀಲನೆಯನ್ನು ಮಾಡಬೇಕು ಎಂದು ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.
ಕುಡಿಯುವ ನೀರು ಯೋಜನೆಯಡಿ ಬಾಕಿ ಇರುವ ಎಲ್ಲ ಕಾಮಗಾರಿಗಳನ್ನು ನ.30 ರೊಳಗಾಗಿ ಪೂರ್ಣಗೊಳಿಸಬೇಕು. ಕಾಮಗಾರಿಗಳಿಗೆ ಅನುದಾನ ಕಡಿಮೆ ಇದ್ದಲ್ಲಿ ಮೊದಲೇ ತಾಲೂಕು ಪಂಚಾಯತಿಗೆ ಮಾಹಿತಿ ನೀಡಬೇಕು. ತಾಲೂಕು ಪಂಚಾಯತಿ ವತಿಯಿಂದ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಎಷ್ಟು ಅನುದಾನ ಬಿಡುಗಡೆಗೊಂಡಿದೆ, ಎಷ್ಟು ಕಾಮಗಾರಿ ಪೂರ್ಣಗೊಂಡಿದೆ ಎಷ್ಟು ಕಾಮಗಾರಿಗಳು ಪ್ರಗತಿಯಲ್ಲಿವೆ ಎಂಬುದರ ಬಗ್ಗೆ ಮಾಹಿತಿ ನೀಡಬೇಕು ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.
ಅಪೌಷ್ಠಿಕೆಯಿಂದ ಬಳಲುತ್ತಿರುವ ಮಕ್ಕಳಿಗೆ ಚಿಕಿತ್ಸೆ ನೀಡಿ, ಪೌಷ್ಠಿಕ ಆಹಾರ ನೀಡುವ ಮೂಲಕ ಅಪೌಷ್ಠಿಕತೆ ಮುಕ್ತ ಜಿಲ್ಲೆಯನ್ನಾಗಿಸಲು ಸಹಕರಿಸಬೇಕು. ಮಕ್ಕಳಿಗೆ ಉಚಿತ ಶಿಕ್ಷಣ ಜೊತೆಗೆ ಸಂಸ್ಕಾರಯುತ ಶಿಕ್ಷಣ ಕಲಿಸಬೇಕು. ಅಂಗನವಾಡಿಗೆ ಕಡ್ಡಾಯವಾಗಿ 100ಅ ಹಾಜರಾತಿ ಇರಬೇಕು. ಅಂಗಡಿವಾಡಿ ಕಾಮಗಾರಿಯನ್ನು ನಿಗಧಿತ ಸಮಯದಲ್ಲಿ ಪೂರ್ಣಗೊಳಿಸಬೇಕು ಎಂದರು. ತಾಲೂಕಿನಲ್ಲಿ ಹಳೆಯ ವಿದ್ಯುತ್ ಕಂಬಗಳನ್ನು ಕೂಡಲೇ ಬದಲಾಯಿಸುವಂತೆ ಹೆಸ್ಕಾಂ ಅಧಿಕಾರಿಗಳಿಗೆ ಸೂಚಿಸಿದ ಅವರು ಜಿಲ್ಲೆಯ ಗುಡ್ಡಗಾಡಿನ ಪ್ರದೇಶ ಹೆಚ್ಚಾಗಿರುವುರಿಂದ ಕಾಡು ಪ್ರಾಣಿಗಳಿಂದ ಬೆಳೆ ಹಾನಿ, ಮನುಷ್ಯರ ಮತ್ತು ಜಾನುವಾರುಗಳ ಮೇಲೆ ದಾಳಿ ಸಂಭವಿಸಿದಾಗ ಪರೀಶೀಲಿಸಿ ಸೂಕ್ತ ಪರಿಹಾರ ಒದಗಿಸಬೇಕು ಎಂದರು.
ವಸತಿ ನಿಲಯಗಳಲ್ಲಿ ಮಕ್ಕಳಿಗೆ ಸುಚ್ಚಿತವಾದ ಕೊಠಡಿ, ಗುಣ ಮಟ್ಟದ ಆಹಾರ ನೀಡುವ ಬಗ್ಗೆ ಸಮಾಜ ಕಲ್ಯಾಣ ಮತ್ತು ಬಿಸಿಎಂ ಅಧಿಕಾರಿ ವಸತಿ ನಿಲಯಗಳಿಗೆ ಬೇಟಿ ನೀಡಿ ಪರೀಶೀಲಿಸಿ ಅಗತ್ಯ ವ್ಯವಸ್ಥೆಗಳನ್ನು ಮಾಡಬೇಕು. ಮಕ್ಕಳಿಗೆ ದೂರು ಸಲ್ಲಿಸಲು ಸಲಹಾ ಪೆಟ್ಟಿಗೆ ಕಡ್ಡಾಯ ಇಡುವಂತೆ ತಿಳಿಸಿದ ಅವರು, ವಸತಿ ನಿಲಯಗಳಿಗೆ ಅನೀರಿಕ್ಷಿತ ಭೇಟಿ ನೀಡುವುದಾಗಿ ತಿಳಿಸಿದರು. ಸಭೆಯಲ್ಲಿ ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿ ವೀರನಗೌಡ ಪಿ. ಏನಗಗೌಡರ, ಹಾಗೂ ತಾಲೂಕು ಮಟ್ಟದ ವಿವಿಧ ಇಲಾಖೆಯ ಅಧಿಕಾರಿ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 