ಸಾರಿಗೆ ಬಸ್ ಸೌಕರ್ಯ ಕಲ್ಪಿಸಿದ್ದಕ್ಕೆ ಅಭಿನಂದನೆ
Congratulations on providing transport bus facilities.
ತಾಳಿಕೋಟಿ 08: ಪಟ್ಟಣದಿಂದ ದೇವರ ಹಿಪ್ಪರಗಿಗೆ ರಸ್ತೆ ಸಾರಿಗೆ ಬಸ್ ಸೌಕರ್ಯ ಕಲ್ಪಿಸುವಂತೆ ಅಂಬೇಡ್ಕರ್ ಸ್ವಾಭಿಮಾನಿ ಸೇನೆ ಮಾಡಿದ ಮನವಿಗೆ ಸ್ಪಂದಿಸಿದ್ದಕ್ಕಾಗಿ ಸೇನೆಯು ವಿಜಯಪುರ ಕೆಎಸ್‌ಆರ್ಟಿಸಿ ಡಿಸಿ ಅವರಿಗೆ ಅಭಿನಂದಿಸಿದೆ. ತಾಳಿಕೋಟಿ ಪಟ್ಟಣದಿಂದ ದೇವರ ಹಿಪ್ಪರಗಿಗೆ ಪ್ರಯಾಣಿಸಲು ಕಡಿಮೆ ಬಸ್ಸುಗಳು ಇರುವುದರಿಂದ ಪ್ರಯಾಣಿಕರಿಗೆ ತುಂಬಾ ತೊಂದರೆಯಾಗುತ್ತಿತ್ತು ಇದನ್ನು ತಪ್ಪಿಸಲು ಅಂಬೇಡ್ಕರ್ ಸ್ವಾಭಿಮಾನಿ ಸೇನೆಯು ಬಸ್ ಸೌಕರ್ಯವನ್ನು ಕಲ್ಪಿಸಿ ಕೊಡುವಂತೆ ತಾಳಿಕೋಟಿ ಘಟಕ ವ್ಯವಸ್ಥಾಪಕರ ಮೂಲಕ ವಿಜಯಪುರ ಕೆ ಎಸ್ ಆರ್ ಟಿ ಸಿ ಡಿಸಿ ಅವರಲ್ಲಿ ಮನವಿ ಮಾಡಿತ್ತು ಇದಕ್ಕೆ ಸ್ಪಂದಿಸಿದ ಅಧಿಕಾರಿಗಳು ಬಸ್ ಸೌಕರ್ಯ ನೀಡುವಂತೆ ಆದೇಶ ಹೊರಡಿಸಿದ್ದು ನವಂಬರ್ 7 ರಿಂದ ಬಸ್ ಬಿಡಲು ನಿರ್ಧರಿಸಲಾಗಿದೆ. ಸಂಘಟನೆಯ ಸದರಿ ಮನವಿಗೆ ಸ್ಪಂದಿಸಿದ್ದಕ್ಕಾಗಿ ಅಂಬೇಡ್ಕರ್ ಸ್ವಾಭಿಮಾನಿ ಸೇನೆಯ ರಾಜ್ಯ ಕಾರ್ಯದರ್ಶಿಗಳಾದ ಶರಣು ಜಮಖಂಡಿ, ವಿಜಯಪುರ ಜಿಲ್ಲಾ ಅಧ್ಯಕ್ಷರಾದ ಸುಖದೇವ್ ಕಟ್ಟಿಮನಿ, ಮಹೇಶ್ ಬಾಗೇವಾಡಿ ಹಾಗೂ ಸೇನೆಯ ಪದಾಧಿಕಾರಿಗಳು ಡಿಸಿ ಹಾಗೂ ತಾಳಿಕೋಟಿ ಘಟಕ ವ್ಯವಸ್ಥಾಪಕರಿಗೆ ಕೃತಜ್ಞತೆ ಸಲ್ಲಿಸಿ ಅಭಿನಂದಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 