ಕಾಂಗ್ರೆಸ್ ರೈತ ವಿರೋಧಿ ಸರಕಾರ : ಮ್ಯಾಗೇರಿ
ಲೋಕದರ್ಶನ ವರದಿ
ಶಿಗ್ಗಾವಿ 10: ಭಾಗ್ಯಗಳ ನೆಪದಲ್ಲಿ ರೈತರ ಸಂಕಷ್ಟಗಳನ್ನ ರಾಜ್ಯ ಕಾಂಗ್ರೆಸ್ ಸರಕಾರ ಮರೆತಿದ್ದು ರಾಜ್ಯದಲ್ಲಿ ನಾವೇನು ಮಾಡಿದರೂ ನಡೆಯುತ್ತದೆ ಎಂಬ ಭ್ರಮೆಯಲ್ಲಿದ್ದಾರೆ ಕಾಂಗ್ರೆಸ್ ಸರಕಾರ ಇದೊಂದು ರೈತ ವಿರೋಧಿ ಸರಕಾರವಾಗಿದೆ ಎಂದು ಬಿಜೆಪಿ ತಾಲೂಕಾದ್ಯಕ್ಷ ಶಿವಾನಂದ ಮ್ಯಾಗೇರಿ ಸರಕಾರದ ವಿರುದ್ದ ಹರಿಹಾಯ್ದರು.
ಪಟ್ಟಣದ ತಹಶೀಲ್ದಾರ ಕಚೇರಿ ಎದುರು ಶಿಗ್ಗಾವಿ ಭಾರತೀಯ ಜನತಾ ಪಾರ್ಟ್ ರೈತ ಮೋರ್ಚಾ ವತಿಯಿಂದ ರಾಜ್ಯ ಕಾಂಗ್ರೆಸ್ ಸರ್ಕಾರದ ರೈತ ವಿರೋಧಿ ನೀತಿ ಖಂಡಿಸಿ ಹಮ್ಮಿಕೊಂಡ ಪ್ರತಿಭಟನೆಯಲ್ಲಿ ತಹಶೀಲ್ದಾರ ಸಂತೋಷ ಹಿರೇಮಠ ಅವರಿಗೆ ಮನವಿ ಅರ್ಪಿಸಿ ಮಾತನಾಡಿದ ಅವರು, ರಾಜ್ಯದಲ್ಲಿ ಹೆಚ್ಚುತ್ತಿರುವ ರೈತರ ಆತ್ಮಹತ್ಯೆ ಪ್ರಕರಣಗಳನ್ನು ತಡೆಯುವ ಕಾಂಗ್ರೇಸ್ ಸರಕಾರ ಸಂಪೂರ್ಣ ವಿಫಲವಾಗಿದೆ, ಈ ಹಿಂದೆ ಬಿಜೆಪಿ ಸರ್ಕಾ ರ ಜಾರಿಗೆ ತಂದಿದ್ದ ಹಲವಾರು ರೈತಪರ ಯೋಜನೆಗಳಾದ ಕಿಸಾನ್ ಸಮ್ಮಾನ ನಿಧಿ ಯೋಜನೆ, ರೈತ ವಿಧ್ಯಾನಿದಿ ಯೋಜನೆ, ಭೂ ಸಿರಿ ಯೋಜನೆ, ಶ್ರಮ ಶಕ್ತಿ ಯೋಜನೆ, ರೈತ ಸಂಪದ ಯೋಜನೆ, ಎಪಿಎಂಸಿ ಕಾನೂನು, ಕೃಷಿ ಭೂಮಿ ಮಾರಾಟ ಕಾನೂನು, ಜಿಲ್ಲೆಗೊಂದು ಗೋಶಾಲೆ ಯೋಜನೆ, ಕ್ಷೀರ ಸಮೃದ್ಧಿ ಸಹಕಾರ ಬ್ಯಾಂಕ್ ಈ ಎಲ್ಲ ಯೋಜನೆಗಳನ್ನು ರದ್ದು ಮಾಡುವ ಮೂಲಕ ಕೃಷಿ ಕ್ಷೇತ್ರವನ್ನು ನಿರ್ಲಕ್ಷಿಸಲಾಗಿದೆ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ರಾಜ್ಯದಲ್ಲಿ ಸುಮಾರು 42 ಜನ ರೈತರ ಆತ್ಮಹತ್ಯೆ ಪ್ರಕರಣಗಳ ವರದಿಯಾಗಿರುವುದು ಅತ್ಯಂತ ಆತಂಕಕಾರಿ ಸಂಗತಿಯಾಗಿದೆ ಎಂದರು.
ನ್ಯಾಯವಾದಿ ಡಾ.ಮಲ್ಲೇಶಪ್ಪ ಹರಿಜನ ಮಾತನಾಡಿ, ಮಳೆಯ ಅಭಾವದಿಂದ ಉಂಟಾಗಿರುವ ಬರಗಾಲದ ಸಮಸ್ಯೆ, ವಿದ್ಯುತ್ ಅಭಾವದಿಂದ ರೈತರ ಪಂಪಸೆಟ್ಗಳಿಗೆ ಅನಿಯಮಿತ ಲೋಡ್ ಶೆಡ್ಡಿಂಗ್, ಪ್ರಮಾಣವು ಈ ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ ರಾಜ್ಯದಲ್ಲಿ ಮಳೆಯ ಅಭಾವದಿಂದ ಬರಗಾಲದ ಸಮಸ್ಯೆ ಉಂಟಾಗಿದೆ. ರಾಜ್ಯದ ಎಲ್ಲಾ ಜಲಾಶಯಗಳಲ್ಲಿ ಪ್ರತಿ ವರ್ಷ ಸಂಗ್ರಹವಾಗಬೇಕಿದ್ದ ಕುಸಿತ ಕಂಡಿದ್ದು, ಇದರಿಂದಾಗಿ ರೈತರ ಜಮೀನುಗಳಿಗೆ ಸಮರ್ಪಕ ನೀರು ಪೂರೈಕೆಗೆ ಮುಂದಿನ ದಿನಗಳಲ್ಲಿ ನೀರಿನ ತೊಂದರೆಯಾಗುವ ಆತಂಕ ಉಂಟಾಗಿದೆ. ಅದರ ಜೊತೆಗೆ ರಾಜ್ಯದಲ್ಲಿ ಉಂಟಾಗಿರುವ ವಿದ್ಯುತ್ ಅಭಾವದಿಂದ ರೈತರ ಪಂಪಸೆಟ್ಗಳಿಗೆ ಹಗಲು ಹೊತ್ತಿನಲ್ಲಿ ನಿರಂತರ 7 ಗಂಟೆಗಳ ಕಾಲ ವಿದ್ಯುತ ಪೂರೈಕೆ ಮಾಡಬೇಕಾಗಿತ್ತು. ಆದರೆ ಇತ್ತೀಚೆಗೆ ಅನಿಯಮಿತ ಲೋಡ್ ಶೆಡಿಂಗ್ಗಳ ಪರಿಣಾಮ ಹಗಲು ಹೊತ್ತಿನಲ್ಲಿ ವಿದ್ಯುತ್ ಪೂರೈಸುವಲ್ಲಿ ಸರ್ಕಾರ ವಿಫಲವಾಗಿದೆ ಎಂದರು.
ಪುರಸಭೆ ಸದಸ್ಯ ಶ್ರೀಕಾಂತ ಬುಳ್ಳಕ್ಕನವರ, ಮಂಜುನಾಥ ಬ್ಯಾಹಟ್ಟಿ, ಪರಶುರಾಮ ಸೊನ್ನದ, ಮುಖಂಡ ಕಿರಣ ಅವರಾದಿ ಮಾತನಾಡಿದರು.
ರೈತಮೋರ್ಚಾ ಅದ್ಯಕ್ಷ ಬೈಲಪ್ಪ ಕೊಟ್ರಪ್ಪನವರ, ಮುಖಂಡರಾದ ತಿಪ್ಪಣ್ಣ ಸಾತಣ್ಣವರ, ಬಸನಗೌಡ ಮೇಲನಮನಿ, ಹನುಮಂತಪ್ಪ ಮಾದರ, ಕೊಟ್ರಪ್ಪ ನಡೂರ, ಸುದೀರ ಮಾಳವಾದೆ, ರೇಣಕನಗೌಡ ಪಾಟೀಲ, ಪ್ರತೀಕ ಕೊಳೆಕರ, ಕಾಶಿನಾಥ ಕಳ್ಳಿಮನಿ, ಪ್ರಶಾಂತ ಬಡ್ಡಿ, ವಿನಯ್ ಮುಂಡಗೋಡ, ಮಂಜು ಮಿರ್ಜಿ, ರಾಜು ದೊಡ್ಡಮನಿ ಸೇರಿದಂತೆ ರೈತರು ಬಿಜೆಪಿ ಪಕ್ಷದ ಮುಖಂಡರು ಇದ್ದರು